ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪನೆ

ರಂಭಾಪುರಿ ಶ್ರೀಗಳಿಂದ ಗದ್ದುಗೆಗಳ ಶಂಕುಸ್ಥಾಪನೆ

Team Udayavani, Apr 1, 2022, 3:36 PM IST

17

ಲಕ್ಷ್ಮೇಶ್ವರ: ಭೂ ಕೈಲಾಸ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪನೆಯಾಗಿ ಜ್ಯೋತಿರ್ಲಿಂಗಗಳಷ್ಟೇ ಪವಿತ್ರ ಕ್ಷೇತ್ರವಾಗಬೇಕೆಂಬ ಲಿಂ|ಜ|ವೀರ ಗಂಗಾಧರ ಶಿವಾಚಾರ್ಯರ ಕನಸು, ಸಂಕಲ್ಪ ಈಡೇರಿಕೆಗೆ ಕಾಲ ಕೂಡಿ ಬಂದಿದೆ.

ಅವರ ಕೃಪಾಶೀರ್ವಾದದಿಂದ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ಏ.2 ರಂದು ಶನಿವಾರ ಬೆಳಿಗ್ಗೆ 9ಕ್ಕೆ ಬಾಳೆಹೊನ್ನೂರು ಜ|ಪ್ರಸನ್ನ ರೇಣುಕ ಡಾ|ವೀರ ಸೋಮೇಶ್ವರ ಶಿವಾಚಾರ್ಯರು ತ್ರಿಕೋಟಿ ಶಿವಲಿಂಗ ಸ್ಥಾಪನೆಯ ಗದ್ದುಗೆಗಳ ಶಂಕುಸ್ಥಾಪನೆ(ಗುದ್ದಲಿ ಪೂಜೆ) ನೆರವೇರಿಸಲಿದ್ದಾರೆ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಹೇಳಿದರು.

ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಳೆದ 2-3 ದಶಕಗಳ ಭಕ್ತರ ಕನಸಾಗಿರುವ ತ್ರಿಕೋಟಿ ಲಿಂಗ ಸ್ಥಾಪನೆಗೆ ಅನೇಕ ಸಮಸ್ಯೆಗಳು ಎದುರಾದರೂ ಸಹ ಇದೀಗ ಲಿಂ|ಜಗದ್ಗುರುಗಳ ಸಂಕಲ್ಪ ಸಾಕಾರಕ್ಕೆ ಮುಂದಡಿ ಇಡಲಾಗುತ್ತಿದೆ.

ಕ್ಷೇತ್ರದಲ್ಲಿ ಈಗಾಗಲೇ ಸಿದ್ಧಗೊಂಡಿರುವ ಸಾವಿರಾರು ಶಿವಲಿಂಗಗಳು ಪ್ರತಿಷ್ಠಾಪನೆಗೊಂಡರೆ ಶ್ರೀಕ್ಷೇತ್ರ ದೇಶಾದ್ಯಂತ ಪ್ರಸಿದ್ಧಿ ಪಡೆಯಲಿದೆ. 2.5 ಅಡಿ ಎತ್ತರದ ಶಿವಲಿಂಗವೊಂದರಲ್ಲಿ 6000 ಗರ್ಭಲಿಂಗಗಳಿರುವಂತಹ 5000 ಶಿವಲಿಂಗಗಳು ಸೇರಿದಾಗ ತ್ರಿಕೋಟಿ ಲಿಂಗವಾಗುತ್ತವೆ. ಈ 5000 ಶಿವಲಿಂಗಗಳು 8 ವರ್ತುಲಗಳಲ್ಲಿ ಪ್ರತಿಷ್ಠಾಪಿತಗೊಂಡು ನಡುವೆ ಲಿಂ|ಜಗದ್ಗುರುಗಳ ಹಾಗೂ ರೇಣುಕರ ಬೃಹತ್‌ ಮೂರ್ತಿ ಮಂದಿರ ನಿರ್ಮಾಣಗೊಳ್ಳಲಿದೆ.

ಈಗಾಗಲೇ ಕ್ಷೇತ್ರದಲ್ಲಿ 4500ಕ್ಕೂ ಹೆಚ್ಚು ಶಿವಲಿಂಗಗಳು, ಒಂದು ಬೃಹತ್‌ ಶಿವಲಿಂಗ ಮತ್ತು ಬಸವಣ್ಣನ ಮೂರ್ತಿ ಸಿದ್ಧಗೊಂಡು ಶ್ರೀಕ್ಷೇತ್ರದಲ್ಲಿ ನೆಲೆನಿಂತಿವೆ. ಲಿಂ|ಶ್ರೀಗಳ ಸಂಕಲ್ಪ ಈಡೇರಿಕೆಗೆ ನಾಡಿನ ಅನೇಕ ಭಕ್ತರು ಸಹಾಯ ನೀಡಿದ್ದು, 1 ಶಿವಲಿಂಗ ಸೇವೆಗೆ 6001 ರೂ. ನಿಗದಿಪಡಿಸಲಾಗಿದೆ ಎಂದರು.

ಬಹುದೊಡ್ಡ ಧರ್ಮ ಕಾರ್ಯಕ್ಕೆ ಭಕ್ತರಿಂದ ತನು, ಮನ, ಧನದ ಸಹಾಯ- ಸಹ ಕಾರದ ಅಗತ್ಯವಿದೆ. “ಮಾನವ ಧರ್ಮಕ್ಕೆ ಜಯವಾಗಲಿ- ಧರ್ಮದಿಂದಳೇ ವಿಶ್ವಕ್ಕೆ ಶಾಂತಿ’ ಎಂಬ ಘೋಷಣೆಯನ್ನು ಜಗತ್ತಿಗೆ ನೀಡಿದ ಲಿಂ|ಜ|ವೀರಗಂಗಾಧರ ಶಿವಾಚಾರ್ಯರು ಸಂಕಲ್ಪ ಈಡೇರಿಕೆಗೆ ಕೈಗೊಂಡ ಮಹೋನ್ನತ ಕಾರ್ಯಕ್ಕೆ ರಂಭಾಪುರಿ ಪೀಠದ ಜಗದ್ಗುರುಗಳ ಅನುಗ್ರಹ, ಭಕ್ತ ಗಣದ ಸಹಾಯ- ಸಹಕಾರದಿಂದ ತ್ರಿಕೋಟಿ ಶಿವಲಿಂಗ ಸ್ಥಾಪನೆಯ ಕಾರ್ಯಕ್ಕೆ ಮುಂದಡಿಯಿಡಲು ಸಾಧ್ಯವಾಗುತ್ತಿವೆ ಎಂದರು.

ಈ ಶ್ರೇಷ್ಠ ಕಾರ್ಯ ನಿರ್ವಿಘ್ನವಾಗಿ ಸಾಗಲು ಯುಗಾದಿಯ ಪರ್ವಕಾಲದ ಶುಭಕೃತ ನಾಮ ಸಂವತ್ಸರದಲ್ಲಿ ರಂಭಾಪುರಿ ಜಗ ದ್ಗುರುಗಳು ಭೂಮಿಪೂಜೆ ನೆರವೇರಿಸಲಿದ್ದಾರೆ. ನಾಡಿನ ಹರ-ಗುರು-ಚರಮೂರ್ತಿಗಳು, ರಾಜಕೀಯ ಮುಖಂಡರು, ಗಣ್ಯರು ಭಾಗವಹಿಸುವರು ಎಂದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.