ಹಾವೇರಿ ಜಿಲ್ಲೆಯಲ್ಲಿ ಜಾತ್ರೆಗಳು ಸಂಪೂರ್ಣ ನಿಷೇಧ
Team Udayavani, Apr 21, 2021, 7:22 PM IST
ಹಾವೇರಿ: ಕೊವೀಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಜಿಲ್ಲೆಯಲ್ಲಿ ನಡೆಯುವ ಜಾತ್ರೆಗಳನ್ನು ಸಂಪೂರ್ಣ ನಿಷೇಧಿ ಸಲಾಗಿದೆ. ಮದುವೆ ಹಾಗೂ ಇತರೆ ಸಮಾರಂಭಗಳಿಗೆ ಪಾಸ್ ಪಡೆಯಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.
ದೇವಸ್ಥಾನ ಕಮೀಟಿಯವರಿಗೆ ಜಾತ್ರೆ ನಿಷೇಧ ಕುರಿತು ಸಂಬಂಧಿಸಿದ ತಹಶೀಲ್ದಾರ್ ಗಳು ಮನವರಿಕೆ ಮಾಡಿ ಕೊಡಬೇಕು. ಮದುವೆ ಹಾಗೂ ಇತರೆ ಸಮಾರಂಭಗಳಿಗೆ ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿ ಅನುಸಾರ ಸೇರಬಹುದಾದ ಜನಸಂಖ್ಯೆಗನುಗುಣವಾಗಿ ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳು ಪಾಸ್ ವಿತರಿಸಲು ಸೂಚನೆ ನೀಡಿದ್ದಾರೆ.
ಪಾಸ್ ವಿತರಣೆ ಮೊದಲು ಪೊಲೀಸ್ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ ಪಡೆದು ನಂತರ ಪಾಸ್ ನೀಡಬೇಕು. ಒಂದು ವೇಳೆ ಪಾಸ್ ಪಡೆಯದೇ ತಮ್ಮ ತಾಲೂಕು ವ್ಯಾಪ್ತಿಯಲ್ಲಿ ಮದುವೆ ಹಾಗೂ ಇತರೆ ಸಭೆ-ಸಮಾರಂಭಗಳನ್ನು ನಡೆಸುತ್ತಿದ್ದಲ್ಲಿ ಅಂತವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಹಾಗೂ ಸಭೆ-ಸಮಾರಂಭಗಳು ಜರುಗುವ ಕಲ್ಯಾಣ ಮಂಟಪ ಹಾಗೂ ಇತರೆ ಸಭಾಂಗಣಗಳನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಲು ಕ್ರಮ ವಹಿಸಬೇಕು. ಪಾಸ್ ನೀಡಿದ ಸಮಾರಂಭಗಳಲ್ಲಿ ನಿಗ ದಿತ ಸಂಖ್ಯೆಗಿಂತ ಅಧಿಕ ಜನರು ಸೇರಿದಲ್ಲಿ ಅಂತಹ ಸಭೆ-ಸಮಾರಂಭಗಳನ್ನು ತಕ್ಷಣ ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉದಯಪುರ ಆಯ್ತು, ಪ್ರವಾದಿ ಬಗ್ಗೆ ಹೇಳಿಕೆ ನೀಡಿ ಕೊಲೆಯಾಗಿದ್ದ ತಿವಾರಿ ಪತ್ನಿಗೆ ಬೆದರಿಕೆ ಪತ್ರ
ಪೌರ ಕಾರ್ಮಿಕರ ಬೇಡಿಕೆ ಈಡೇರಿಸಿ ಅಧಿಕೃತ ಆದೇಶ ಹೊರಡಿಸಿ: ಸಿದ್ದರಾಮಯ್ಯ ಆಗ್ರಹ
ಹಾರಂಗಿ ಜಲಾಶಯ ಭರ್ತಿ: ವಿಶೇಷ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಶಾಸಕ ಅಪ್ಪಚ್ಚು ರಂಜನ್
ಸಾಗರ : ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ : ಪೇಪರ್ ವಿತರಣೆಗೆ ಹೋಗಿದ್ದ ಯುವಕ ಸ್ಥಳದಲ್ಲೇ ಸಾವು
ಎರಡನೇ ವಾರದತ್ತ ‘ತುರ್ತು ನಿರ್ಗಮನ’