ಪಿಎಲ್‌ಡಿ ಬ್ಯಾಂಕಿಗೆ ಬೀಗ ಹಾಕಿ ಪ್ರತಿಭಟನೆ

Team Udayavani, Jan 7, 2020, 4:15 PM IST

hv-tdy-1

ಅಕ್ಕಿಆಲೂರು: ಸಾಲ ಮರಳಿಸದ ಹಿನ್ನೆಲೆ ರೈತನ ಟ್ರ್ಯಾಕ್ಟರ್‌ ಜಪ್ತಿ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಪಟ್ಟಣದ ಪಿಎಲ್‌ಡಿ ಬ್ಯಾಂಕಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಸಮೀಪದ ಇನಾಂಯಲ್ಲಾಪುರ ಗ್ರಾಮದ ರೈತ ಪುಟ್ಟಪ್ಪ ಬನ್ನಿಹಳ್ಳಿ ಐದಾರು ವರ್ಷಗಳ ಹಿಂದೆ ಪಿಎಲ್‌ಡಿ ಬ್ಯಾಂಕಿನಲ್ಲಿ ಟ್ರ್ಯಾಕ್ಟರ್‌ ಸಾಲ ಪಡೆದುಕೊಂಡಿದ್ದ. ನಾಲ್ಕು ಕಂತುಗಳಿಂದ ಆತ ಸುಸ್ತಿದಾರನಾಗಿದ್ದರಿಂದ ಬ್ಯಾಂಕಿನ ಅಧಿಕಾರಿಗಳು ರೈತನ ಟ್ರ್ಯಾಕ್ಟರ್‌ ಜಪ್ತಿ ಮಾಡಿದ್ದರು. ಇದನ್ನು ಖಂಡಿಸಿ ರೈತ ಸಂಘಟನೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬ್ಯಾಂಕಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ರೈತರು ಕೆಲಕಾಲ ಬ್ಯಾಂಕಿನ ಅಧಿಕಾರಿಗಳೊಡನೆ ವಾಗ್ವಾದ ನಡೆಸಿದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ ಮಾತನಾಡಿ, ಕೃಷಿ ಚಟುವಟಿಕೆಗಳ ಮೇಲಿನ ಎಲ್ಲ ಸಾಲಗಳನ್ನು ಮನ್ನಾ ಮಾಡುವುದಾಗಿ ಘೋಷಿಸಿದ್ದ ಸರ್ಕಾರ ಸಹಕಾರಿ ಬ್ಯಾಂಕುಗಳಲ್ಲಿ, ಪಿಎಲ್‌ಡಿ ಬ್ಯಾಂಕುಗಳ ಸಾಲಮನ್ನಾ ಮಾಡುತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸಾಲಮನ್ನಾ ನೀತಿಯನ್ನು ಸೂಕ್ತವಾಗಿ ಅನುಷ್ಠಾನಕ್ಕೆ ತರುವಲ್ಲಿ ವಿಫಲವಾಗಿದ್ದಾರೆ. ಮಳೆ-ಬೆಳೆ ಇಲ್ಲದೇ ಪರದಾಡುತ್ತಿರುವ ರೈತ ಸಮುದಾಯ ಬ್ಯಾಂಕುಗಳ ದೈತ್ಯ ಬಡ್ಡಿ ಆಕರಣೆಯ ಕೂಪಕ್ಕೆ ಸಿಲುಕಿ ಹೊಲ-ಮನೆ ಮಾರಿಕೊಳ್ಳುವ ಸ್ಥಿತಿಗೆ ಬಂದು ತಲುಪುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಬ್ಯಾಂಕಿನ ವ್ಯವಸ್ಥಾಪಕ ಎಂ.ಎಂ.ಸೊಪ್ಪಣ್ಣವರ, ರಾಜ್ಯ ಪಿಎಲ್‌ಡಿ ಬ್ಯಾಂಕಿನಿಂದ ಸಾಲ ವಸೂಲಿ ಮಾಡಲು ಆದೇಶವಿದೆ. ನಿಯಮದಂತೆ ನಾವು ನಮ್ಮ ಕರ್ತವ್ಯ ಮಾಡಬೇಕಿದೆ. ಈ ಕುರಿತು ರೈತರೊಂದಿಗೆ ಸಮಾಲೋಚಿಸಿ ಜಪ್ತಿ ಮಾಡಿದ ಟ್ರ್ಯಾಕ್ಟರನ್ನು ಕೇಂದ್ರ ಕಚೇರಿಯ ಅಧಿಕಾರಿಗಳ ಅನುಮತಿ ಪಡೆದು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

ರೈತ ಸಂಘದ ತಾಲೂಕಾಧ್ಯಕ್ಷ ಮರಿಗೌಡ ಪಾಟೀಲ, ರೈತ ಸಂಘದ ತಾಲೂಕು ಉಪಾಧ್ಯಕ್ಷ ಮಹೇಶ ವಿರುಪಣ್ಣನವರ, ರುದ್ರಪ್ಪ ಹಣ್ಣಿ, ಸೋಮಣ್ಣ ಜಡೆಗೊಂಡರ, ಮಲ್ಲನಗೌಡ ಪಾಟೀಲ, ಸಿದ್ಧಲಿಂಗೇಶ ಸಿಂಧೂರ, ಚನ್ನಪ್ಪ ಪಾವಲಿ, ಅಜ್ಜನಗೌಡ ಪಾಟೀಲ, ಷಣ್ಮುಖಪ್ಪ ಅಂದಲಗಿ, ಚನ್ನಬಸನಗೌಡ ಬನ್ನಿಹಳ್ಳಿ, ಕೊಟ್ರಪ್ಪ ಶೆಟ್ಟರ, ರಾಜು ಯಮಕನಮರಡಿ, ಕಾರ್ತಿಕ ಪಸಾರದ ಸೇರಿದಂತೆ ರೈತ ಸಂಘದ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.