Udayavni Special

ಸ್ವಾತಂತ್ರ್ಯ ಹೋರಾಟಗಾರ್ತಿ ಚನ್ನಮ್ಮಗೆ ರಾಷ್ಟ್ರೀಯ ಪ್ರಶಸ್ತಿ ಗರಿ

ವಿಶ್ವದ 16ಕ್ಕೂ ಹೆಚ್ಚು ದೇಶ ಸುತ್ತಿ ಗಾಂಧಿ, ವಿನೋಭಾ ತತ್ವ ಪ್ರಚಾರ ಮಾಡಿದ ಅಮ್ಮನಿಗೆ ಗೌರವ

Team Udayavani, Jul 12, 2019, 9:38 AM IST

hv-tdy-2..

ಹಾವೇರಿ: ಇತ್ತೀಚೆಗೆ ನಗರಕ್ಕೆ ಆಗಮಿಸಿದಾಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚನ್ನಮ್ಮ ಹಳ್ಳಿಕೇರಿಯವರು.

ಹಾವೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡುವ 2018ನೇ ಸಾಲಿನ ಶ್ರೀ ಭಗವಾನ್‌ ಮಹಾವೀರ ರಾಷ್ಟ್ರೀಯ ಪ್ರಶಸ್ತಿ ತಾಲೂಕಿನ ಹೊಸರಿತ್ತಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಚನ್ನಮ್ಮ ಹಳ್ಳಿಕೇರಿ ಅವರಿಗೆ ಲಭಿಸಿದ್ದು, ಅಹಿಂಸಾ ತತ್ವ ಪಾಲನೆ ಹಾಗೂ ಸಮಾಜ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ಚನ್ನಮ್ಮ ಅವರು ಕಳೆದ ಏಳು ದಶಕಗಳಲ್ಲಿ ವಿಶ್ವದ 16ಕ್ಕೂ ಹೆಚ್ಚು ದೇಶಗಳನ್ನು ಸುತ್ತಾಡಿ ಅಲ್ಲಿ ಗಾಂಧೀಜಿ, ಕಸ್ತೂರಬಾ ಹಾಗೂ ವಿನೋಭಾಜಿ ಹಾಗೂ ಶರಣರ ಸಂದೇಶ ಮತ್ತು ಭಾರತೀಯ ಸಂಸ್ಕೃತಿಯ ಪ್ರಚಾರ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಗಾಂಧಿ, ವಿನೋಭಾಜಿಯವರ ಭೂದಾನ, ಸರ್ವೋದಯ ವಿಚಾರ ಪ್ರಚಾರದೊಂದಿಗೆ ಅಸ್ಪ್ರಶ್ಯತೆ ನಿವಾರಣೆ, ಗ್ರಾಮೀಣ ನೈರ್ಮಲ್ಯ, ಹರಿಜನೋದ್ಧಾರ, ಖಾದಿ ಬಳಕೆ, ಮಹಿಳಾ ಸಬಲೀಕರಣಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದಾರೆ.

ಹೊಸರಿತ್ತಿಯವರು: ಮೂಲತಃ ಹಾವೇರಿ ತಾಲೂಕು ಹೊಸರಿತ್ತಿಯವರಾದ ಚನ್ನಮ್ಮನವರು 1931ಜ.2ರಲ್ಲಿ ಜನಿಸಿದರು. ಬಾಲ್ಯದಲ್ಲಿಯೇ ಹೊಸರಿತ್ತಿಗೆ ಬಂದಿದ್ದ ಗಾಂಧೀಜಿಯವರ ನೇರ ದರ್ಶನ ಭಾಗ್ಯ ಇವರದ್ದಾಗಿತ್ತು. ಜಿಲ್ಲೆಯ ಸ್ವಾತಂತ್ರ್ಯ ಹೋರಾಟ ಕೇಂದ್ರವಾಗಿದ್ದ ಹೊಸರಿತ್ತಿ ಚನ್ನಮ್ಮ ಅವರ ಜೀವನದ ಮೇಲೆ ಪ್ರಭಾವ ಬೀರಿತು. ಹೊಸರಿತ್ತಿ ಸುತ್ತಮುತ್ತ ನಡೆಯುವ ಸ್ವಾತಂತ್ರ್ಯ ಚಳವಳಿಯಲ್ಲಿ ತಾತ, ಸ್ವಾತಂತ್ರ್ಯ ಹೋರಾಟಗಾರ ಗುದ್ಲೆಪ್ಪ ಹಳ್ಳಿಕೇರಿಯವರೊಂದಿಗೆ ಚನ್ನಮ್ಮನವರು ಭಾಗವಹಿಸುತ್ತಿದ್ದರು. ಗುದ್ಲೆಪ್ಪ ಹಳ್ಳಿಕೇರಿ ಸ್ಥಾಪಿಸಿದ್ದ ಗಾಂಧಿ ಆಶ್ರಮದ ಒಡನಾಟ ಹೊಂದಿದ್ದ ಅವರಿಗೆ ಇದು ಸಮಾಜಸೇವೆ, ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿಕೊಳ್ಳಲು ಪ್ರೇರಣೆ ನೀಡಿತು.

ಚನ್ನಮ್ಮ ಅವರು ಮನ್ನಂಗಿ ದೇವಕ್ಕ ಸ್ಥಾಪಿಸಿದ ಆಶ್ರಮದಲ್ಲಿ ಗ್ರಾಮ ಸೇವಕಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ದೇಶ ಸೇವೆ, ಸ್ವಾತಂತ್ರ್ಯ ಚಳವಳಿಯಲ್ಲಿ ತಮ್ಮನ್ನು ಪೂರ್ಣವಾಗಿ ತೊಡಗಿಸಿಕೊಂಡರು. ನಂತರ ಸ್ವಾತಂತ್ರ್ಯ ಹೋರಾಟಗಾರ್ತಿ ಮೀರಾತಾಯಿ ಕೊಪ್ಪಿಕರ ಸಾಂಗತ್ಯದಲ್ಲಿ ಕಸ್ತೂರಬಾ ಆಶ್ರಮದಲ್ಲಿ ಸೇವೆ ಸಲ್ಲಿಸಿದರು. ಆಸ್ಪತ್ರೆಯಲ್ಲಿ ದಾದಿಯಾಗಿ ರೋಗಪೀಡಿತರ ಸೇವೆ ಮಾಡಿದರು. ವಿನೋಭಾ ಭಾಯಿಯವರ ಪ್ರಭಾವಕ್ಕೊಳಗಾಗಿ ಸರ್ವೋದಯ ಹಾಗೂ ಭೂದಾನ ಚಳವಳಿಯಲ್ಲಿ ತೊಡಗಿದರು. ಅವಿರತ ದೇಶಸೇವೆಯ ಸ್ಮರಣೆಯಲ್ಲಿ ಮದುವೆ, ಸಂಸಾರ ಮುಂತಾದ ವೈಯಕ್ತಿಕ ಜೀವನ ತ್ಯಾಗ ಮಾಡಿ ಜೀವನ ಪೂರ್ತಿ ಸಮಾಜಸೇವೆಯಲ್ಲೇ ಮೀಸಲಿಸಿದರು.

ಚನ್ನಮ್ಮ ಅವರ ಈ ಸೇವೆ ಗುರುತಿಸಿ ರಾಜ್ಯ ಸರ್ಕಾರದ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ-2016’ ಸೇರಿದಂತ ನೂರಾರು ಪ್ರಶಸ್ತಿಗಳು ಬಂದಿದ್ದು, ಈಗ ಶ್ರೀಭಗವಾನ್‌ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Parul Yadav Positive Talk

ಪಾರುಲ್‌ ಯಾದವ್‌ ಪಾಸಿಟಿವ್‌ ಟಾಕ್‌

m

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆ

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

An increase in the death rate

ಸಾವಿನ ಪ್ರಮಾಣ ಹೆಚ್ಚಳ; ಶುರುವಾಯ್ತು ತಳಮಳ

jhmghjgjy

ಆಕ್ಸಿಜನ್‌ ಬೆಡ್‌ಗೆ ಟೈಮರ್‌ ಅಳವಡಿಸಿ

tyrr

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಶವ ಅದಲು-ಬದಲು

uihyghtuyg

ಕೋವಿಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ

uyuty

ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ

MUST WATCH

udayavani youtube

ರಾಬರ್ಟ್ ಚಿತ್ರ Tonic ಆಯ್ತು

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

ಹೊಸ ಸೇರ್ಪಡೆ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

Berkeley Mass Teaser

ಬರ್ಕ್ಲಿ ಮಾಸ್‌ ಟೀಸರ್‌

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

The only hope is light

ಭರವಸೆಯೊಂದೇ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.