ಕಾನೂನು ಸಾಕ್ಷರತಾ ರಥಕ್ಕೆ ಹಸಿರು ನಿಶಾನೆ

•ಸಾರ್ವಜನಿಕರಿಗೆ ಕಾನೂನಿನ ಅರಿವು •ತಾಲೂಕಿನಾದ್ಯಂತ ಮೂರು ದಿನ ಸಂಚಾರ

Team Udayavani, Jun 17, 2019, 10:18 AM IST

haveri-tdy-2..

ಹಾವೇರಿ: ಕಾನೂನು ಸಾಕ್ಷರತಾ ರಥ ಸಂಚಾರಕ್ಕೆ ನ್ಯಾಯಾಧೀಶೆ ಎಸ್‌. ಎಚ್. ರೇಣುಕಾದೇವಿ ಚಾಲನೆ ನೀಡಿದರು.

ಹಾವೇರಿ: ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲು ತಾಲೂಕಿನಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಕಾನೂನು ಸಾಕ್ಷರತಾ ರಥ ಸಂಚಾರ ಹಾಗೂ ಜನತಾ ನ್ಯಾಯಾಲಯ ಕಾರ್ಯಕ್ರಮಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್‌.ಎಚ್. ರೇಣುಕಾದೇವಿ ಚಾಲನೆ ನೀಡಿದರು.

ನಗರದ ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪರ್ಯಾಯ ವ್ಯಾಜ್ಯಗಳ ಪರಿಹಾರ ಕೇಂದ್ರ ಕಟ್ಟಡದ ಆವರಣದಲ್ಲಿ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ. ಸದಾನಂದಸ್ವಾಮಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಅಣ್ಣುಗೌಡ ವಿ.ಪಾಟೀಲ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ವಾಸುದೇವ ಆರ್‌.ಗುಡಿ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಲಕ್ಷಿ ್ಮೕ ಎನ್‌. ಗರಗ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಸ್‌.ಎಂ. ಧನುರಾಜ, ಹಿರಿಯ ಸಿವಿಲ್ ನ್ಯಾಯಾಧಿಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿ ಕೆ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ, ಉಪವಿಭಾಗಾಧಿಕಾರಿ ತಿಪ್ಪೇಸ್ವಾಮಿ, ವಾರ್ತಾಧಿಕಾರಿ ಬಿ.ಆರ್‌.ರಂಗನಾಥ್‌, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ, ಮುತ್ತುರಾಜ ಮಾದರ ಹಾಗೂ ಇತರರು ಇದ್ದರು.

ನಗರದ ವಿವಿಧ ಕಾಲೇಜುಗಳಲ್ಲಿ ಇಜಾರಿಲಕ್ಮಾಪೂರ, ಕರ್ಜಗಿ, ನೆಗಳೂರು, ಹೊಸರಿತ್ತಿ, ಕನವಳ್ಳಿ, ಕೆರೆಮತ್ತಿಹಳ್ಳಿ, ಕಾಟೇನಹಳ್ಳಿ ಗ್ರಾಮಗಳಲ್ಲಿ ಕಾನೂನಿನ ಅರಿವಿನ ಜೊತೆಗೆ ಜನತಾ ನ್ಯಾಯಾಲಯಗಳಲ್ಲಿ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು ಮತ್ತು ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರೋಧ ದಾಖಲಾತಿ ಪ್ರಕರಣಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಅಥವಾ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ರಾಜೀ ಆಗಬಹುದಾದ ಎಲ್ಲ ತರಹದ ಎಲ್ಲ ಪ್ರಕರಣ ಕುರಿತಂತೆ ಜನತಾ ನ್ಯಾಯಾಲಯ ನಡೆಯಲಿದೆ.

ಕಾನೂನು ಅರಿವು ಮುಖ್ಯ: ಕಾನೂನು ಸಾಕ್ಷರತಾ ರಥಯಾತ್ರೆ ಅಂಗವಾಗಿ ಮೊದಲ ಕಾರ್ಯಕ್ರಮ ಹಾವೇರಿ ನಗರದ ಹೊಸಮಠದ ಎಸ್‌ಎಜೆಎಂ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ವಕೀಲರಾದ ಎಂ.ಎಚ್.ವಾಲೀಕಾರ ಅವರು ಪೋಕ್ಸೋ ಕಾಯ್ದೆ- 2012 ಹಾಗೂ ಸಂತ್ರಸ್ತ ಪರಿಹಾರ ಯೋಜನೆ- 2011 ಕುರಿತಂತೆ, ವಕೀಲರಾದ ಸಿ.ಜೆ. ನೆಗಳೂರು ಅವರು ಕೌಟುಂಬಿಕ ದೌರ್ಜನ್ಯ ಕಾಯ್ದೆ ಹಾಗೂ ಸಾಮಾನ್ಯ ಕಾನೂನು ಕುರಿತು ಹಾಗೂ ಆಶಾಕಿರಣ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಮುತ್ತುರಾಜ ಮಾದರ ಅವರು ಮಕ್ಕಳ ಹಕ್ಕುಗಳು ಮತ್ತು ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ ಮಾತನಾಡಿ, ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿದಾಗ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತದೆ, ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.

ಕಾನೂನಿನ ತಿಳಿವಳಿಕೆ ಕೊರತೆಯಿಂದ ಅಪರಾಧ ಘಟಿಸಿದರೆ ಅದಕ್ಕೆ ಕ್ಷಮೇ ಇಲ್ಲ. ಪ್ರತಿಯೊಬ್ಬ ನಾಗರಿಕನು ಸಾಮಾನ್ಯ ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಂವಿಧಾನದ ಆಶಯದಂತೆ ನಮ್ಮ ಹಕ್ಕುಗೊಳ ಜೊತೆಗೆ ಕರ್ತವ್ಯವನ್ನು ಅರಿಯಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಪಿ.ಬಿ. ವಿಜಯಕುಮಾರ ವಹಿಸಿದ್ದರು. ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಶ್ರೀವಿದ್ಯಾ, ಹೊಸಮಠದ ಶ್ರೀಗಳಾದ ಬಸವಶಾಂತ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಿ.ಗೋವಿಂದ್ರಸ್ವಾಮಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ. ಪಾವಲಿ, ಕಾರ್ಯದರ್ಶಿ ಪಿ.ಎಂ. ಬೆನ್ನೂರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌.ಸಿ. ಪೀರಜಾದೆ, ಮಕ್ಕಳ ಕಲ್ಯಾಣ ಅಧಿಕಾರಿ ಉಮಾ ಹಾಗೂ ಪಿಎಸ್‌ಐ ಉದಯ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.