ಮಾರ್ಗಸೂಚಿ ಕಡ್ಡಾಯ ಪಾಲಿಸಲು ಆದೇಶ

Team Udayavani, Jul 4, 2020, 4:37 PM IST

ಮಾರ್ಗಸೂಚಿ ಕಡ್ಡಾಯ ಪಾಲಿಸಲು ಆದೇಶ

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್‌ -19 ವೈರಾಣು ಸೋಂಕಿನಿಂದ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸ್ಥಳ ಹಾಗೂ ಕೆಲಸದ ಸ್ಥಳಗಳಲ್ಲಿ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ವಾಹನಗಳಲ್ಲಿ ಪ್ರಯಾಣಿಸುವ ಸಂದರ್ಭಗಳಲ್ಲಿ ಹಾಗೂ ವಿವಾಹ ಕಾರ್ಯಕ್ರಮ, ಶವ ಸಂಸ್ಕಾರ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ವಿವಾಹಕ್ಕೆ ಅನುಮತಿ ಕೋರಿ ತಹಶೀಲ್ದಾರ್‌ಗೆ ಅರ್ಜಿ ಸಲ್ಲಿಸುವಾಗ ಮುಚ್ಚಳಿಕೆ ಸಲ್ಲಿಸುವುದು ಕಡ್ಡಾಯವಾಗಿದೆ. ಶವ ಸಂಸ್ಕಾರದಲ್ಲಿ 20 ಜನಕ್ಕಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿ ಸಲಾಗಿದೆ ಎಂದು ತಿಳಿಸಿದ್ದಾರೆ.

ಸಿನೆಮಾ ಹಾಲ್‌ಗ‌ಳು, ಜಿಮ್ನಾಷಿಯಿಂ, ಈಜುಕೊಳಗಳು, ಮನಜರಂಜನಾ ಉದ್ಯಾನವನಗಳು, ಚಿತ್ರಮಂದಿರಗಳು, ಬಾರ್‌ಗಳು ಮತ್ತು ಸಭಾಂಗಣಗಳು, ಅಸೆಂಬ್ಲಿ ಹಾಲ್‌ಗ‌ಳು ಮತ್ತು ಅಂತಹುದೇ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು, ಇತರೆ ಗುಂಪುಗೂಡುವಿಕೆ, ದೊಡ್ಡ ಸಭೆಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.

ರಾತ್ರಿ ಕರ್ಫ್ಯೂ ಜಾರಿ: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜೂನ್‌ 30ರ ಮಧ್ಯರಾತ್ರಿಯಿಂದ ಆಗಸ್ಟ್‌ 2 ಮಧ್ಯರಾತ್ರಿ ವರೆಗೆ ಜಿಲ್ಲಾದ್ಯಂತ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕರ್ಫ್ಯೂಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆ ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಅವ ಧಿಯಲ್ಲಿ ಬರುವ ಎಲ್ಲ ಭಾನುವಾರಗಳ ದಿನ ಜಿಲ್ಲಾದ್ಯಂತ ಪೂರ್ಣ ದಿನದ ಲಾಕ್‌ಡೌನ್‌ ಜಾರಿ ಮಾಡಲಾಗಿದೆ. ಈ ಕರ್ಫ್ಯೂ ದಿನ ಅಗತ್ಯ ಸರಕು ಸಾಗಾಣಿಕೆ ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ರಾಜ್ಯ ಸರ್ಕಾರದ ತುರ್ತು ಸೇವೆಗಳಲ್ಲಿ ತೊಡಗಿರುವ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಇಲಾಖೆ, ನಿಗಮ ಮಂಡಳಿಗಳು ಶನಿವಾರದ ದಿನ ಕಚೇರಿ ಆರಂಭ ಮಾಡದಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಆರೋಗ್ಯ ಸೇತು ಆ್ಯಪ್‌ ಬಳಕೆ: ಪ್ರತಿಯೊಬ್ಬ ಸಾರ್ವಜನಿಕರು ಆರೋಗ್ಯ ಸೇತು ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಸೋಂಕಿನ ಸಂಭವನೀಯ ಅಪಾಯವನ್ನು ಮೊದಲೇ ಗುರುತಿಸಲು ಈ ಆ್ಯಪ್‌ನಿಂದ ಅನುಕೂಲವಾಗಲಿದ್ದು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ನೌಕರರು, ಅಧಿಕಾರಿಗಳು, ಮುಖ್ಯಸ್ಥರು ಕಡ್ಡಾಯವಾಗಿ ಆ್ಯಪ್‌ಗ್ಳನ್ನು ಬಳಕೆ ಮಾಡಬೇಕು. ಮುಖ್ಯಸ್ಥರು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ.

ಕೋವಿಡ್‌-19 ನಿರ್ವಹಣೆಯ ಲಾಕ್‌ಡೌನ್‌ ಕ್ರಮಗಳನ್ನು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್‌ 51ರಿಂದ 60ರ ಉಪಬಂಧಗಳು ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 188ರ ಅಡಿಯಲ್ಲಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.