ಬಿಜೆಪಿಗೆ ಮತ ಕೇಳುವ ನೈತಿಕತೆಯಿಲ್ಲ: ಪಾಟೀಲ

ಬೆಲೆಯೇರಿಕೆಯಿಂದ ಜನರ ಬದುಕು ದುಸ್ತರ: ಮಾಜಿ ಸಚಿವರ ಆರೋಪ

Team Udayavani, Oct 12, 2021, 2:50 PM IST

fcgfdty

ಹಾವೇರಿ: ದೇಶದಲ್ಲಿ ಬೆಲೆಯೇರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಉತ್ತರ ಪ್ರದೇಶದಲ್ಲಿ ರೈತರನ್ನು ಕೊಲೆ ಮಾಡಿದ ಬಿಜೆಪಿ ಚುನಾವಣೆಯಲ್ಲಿ ಮತ ಕೇಳುವ ನೈತಿಕತೆ ಕಳೆದುಕೊಂಡಿದೆ ಎಂದು ಮಾಜಿ ಸಚಿವ ಎಚ್‌.ಕೆ.ಪಾಟೀಲ ಹೇಳಿದರು.

ನಗರದ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಜನದ್ರೋಹಿ, ರೈತ ವಿರೋಧಿ ಸರ್ಕಾರವಾಗಿದೆ. ಉತ್ತರ ಪ್ರದೇಶದಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಗೃಹ ಸಚಿವರ ಮಗ ಕಾರು ಚಲಾಯಿಸಿ ಹತ್ಯೆ ಮಾಡಿದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಿಲ್ಲ. ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೋರಾಟಕ್ಕೆ ಧ್ವನಿಗೂಡಿಸಲು ಹೋದರೆ ಅವರನ್ನು ಬಂಧಿಸುತ್ತಾರೆ. ದೇಶದಲ್ಲಿ ಅಜಾರಕತೆ ಸೃಷ್ಟಿಯಾಗಿದೆ ಎಂದು ವಾಗ್ಧಾಳಿ ನಡೆಸಿದರು.

ಯಡಿಯೂರಪ್ಪ ಎರಡು ವರ್ಷ ಅಧಿಕಾರ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಚಾಲಕನಾಗಿದ್ದವರ ಮೇಲೆ ಐಟಿ ದಾಳಿಯಾಗಿ 4,000 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ಪತ್ತೆಯಾಗಿದೆ. ಈ ಆಸ್ತಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ ಅವರು, ಅಭಿವೃದ್ಧಿ ಕಾರ್ಯದ ಹೆಸರಿನಲ್ಲಿ ಬಿಜೆಪಿಯವರು ಲೂಟಿ ಮಾಡಿರುವುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ಹಣ ಸಂಗ್ರಹ ಮಾಡಿದ ಮುಖ್ಯ ಎಂಜಿನಿಯರ್‌ ಮೇಲೆ ಇನ್ನೂ ಕ್ರಮವಾಗಿಲ್ಲ. ಅವರನ್ನು ಅಮಾನತುಗೊಳಿಸಲು ರಾಜ್ಯ ಬಿಜೆಪಿ ಸರ್ಕಾರ ಮುಹೂರ್ತ ನೋಡುತ್ತಿದೆ ಎಂದು ಟೀಕಿಸಿದರು.

ಹಾನಗಲ್ಲ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಮಾನೆ ಕಳೆದ ಮೂರು ವರ್ಷಗಳಿಂದ ಉತ್ತಮ ಸೇವೆ ಮಾಡಿದ್ದಾರೆ. ಅವರು 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ. ಆಡಳಿತ ಪಕÒ‌ ಚುನಾವಣೆಯಲ್ಲಿ ಕಾನೂನು ಬಾಹಿರ ಕೆಲಸ ಮಾಡುವ ಸಾಧ್ಯತೆಯಿದೆ. ಅಂತಹ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಮೂಕಪ್ರೇಕ್ಷಕರಾಗಿ ಸುಮ್ಮನೆ ಕುಳಿತುಕೊಳ್ಳದೆ ಕ್ರಮ ಕೈಗೊಳ್ಳಬೇಕು ಎಂದರು.

ಹಾನಗಲ್ಲ ಉಪಚುನಾವಣೆಯಲ್ಲಿ ಪಕ್ಷ‌ದ ಹಲವರಿಗೆ ಜವಾಬ್ದಾರಿ ವಹಿಸಲಾಗಿದೆ. ಉಪಚುನಾವಣೆ ಉಸ್ತುವಾರಿ ಸಮಿತಿ ಅಧ್ಯಕ್ಷ‌ನಾಗಿ ನಾನು ಕಾರ್ಯನಿರ್ವಹಿಸಲಿದ್ದೇನೆ. ಆರ್‌.ವಿ.ದೇಶಪಾಂಡೆ ಅವರು ಉಪಾಧ್ಯಕ್ಷ‌ರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷ‌ ಸಲೀಂ ಅಹ್ಮದ್‌ ಸಂಚಾಲಕರಾಗಿ, ಮನೋಹರ ತಹಶೀಲ್ದಾರ್‌ ಸಹ ಸಂಚಾಲಕರಾಗಿ, ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸಂಯೋಜಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಮಾತನಾಡಿ, ದೇಶದಲ್ಲಿ ಬೆಲೆ ಏರಿಕೆ ದುಷ್ಪರಿಣಾಮಗಳನ್ನು ಜನರು ಎದುರಿಸುತ್ತಿದ್ದಾರೆ. ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಬಡವರು ಗಳಿಸೋದು ನೂರು ರೂ. ಆದರೆ, ಪೆಟ್ರೋಲ್‌ ಗೇ 110 ರೂ. ಆದರೆ ಏನು ಮಾಡಬೇಕು. ಹೊಟ್ಟೆಗೆ ಏನು ತಿನ್ನಬೇಕು. ಆದ್ದರಿಂದ ಜನರು ಬಿಜೆಪಿಯ ಜನವಿರೋಧಿ ನೀತಿ ಬಗ್ಗೆ ಆಕ್ರೋಶಗೊಂಡಿದ್ದಾರೆ ಎಂದರು.

ಶ್ರೀನಿವಾಸ ಮಾನೆ ಅವರು ಯುವ ನಾಯಕರಾಗಿದ್ದು, ಶಾಸನ ಸಭೆಯಲ್ಲಿ ಕೆಲಸ ಮಾಡಿದ ಅನುಭವವಿದೆ. ಅವರು ಹಾನಗಲ್ಲಿಗೆ ವಲಸೆ ಬಂದಿಲ್ಲ. ಮೂರು ವರ್ಷಗಳಿಂದ ಇಲ್ಲಿಯೇ ನಿರಂತರ ಕೆಲಸ ಮಾಡಿದ್ದಾರೆ. ಈ ಉಪಚುನಾವಣೆಯಲ್ಲಿ ಪಕÒ‌ ಗೆಲುವು ಸಾ  ಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೆಪಿಸಿಸಿ ಕಾರ್ಯಾಧ್ಯಕÒ‌ ಸಲೀಂ ಅಹ್ಮದ್‌ ಮಾತನಾಡಿ, ಈ ಬಾರಿ ಕಾಂಗ್ರೆಸ್‌ಗೆ ಎಲ್ಲ ವರ್ಗದ ಜನರ ಆಶೀರ್ವಾದವಿದೆ. ಕಳೆದ ಚುನಾವಣೆಯಲ್ಲಿ ಶ್ರೀನಿವಾಸ ಮಾನೆ ಅವರು ಕಡಿಮೆ ಅಂತರದಲ್ಲಿ ಸೋತಿದ್ದರು. ಈ ಉಪಚುನಾವಣೆಯಲ್ಲಿ ನಮ್ಮ ಸರ್ವೆ  ಮಾಹಿತಿ ಪ್ರಕಾರ ಪಕÒ‌ದ ಅಭ್ಯರ್ಥಿ ಸುಮಾರು 20 ಸಾವಿರಕ್ಕೂ ಅ ಧಿಕ ಮತಗಳ ಅಂತರದಿಂದ ಗೆಲುವು ಸಾ ಧಿಸುವ ವಿಶ್ವಾಸವಿದೆ ಎಂದರು. ಜಿಲ್ಲಾಧ್ಯಕ್ಷ‌ ಎಂ.ಎಂ.ಹಿರೇಮಠ, ಮಾಜಿ ಶಾಸಕ ಡಿ.ಆರ್‌.ಪಾಟೀಲ, ಎಸ್‌.ಆರ್‌ .ಪಾಟೀಲ ಇತರರು ಇದ್ದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.