ವಿದ್ಯಾರ್ಥಿಗಳ ಪ್ರತಿಭೆ ಅರಳಲು ವೇದಿಕೆ ಕಲ್ಪಿಸಿ

ಅಬ್ದುಲ್‌ ಕಲಾಂ ಆದರ್ಶ ದೇಶಕ್ಕೆ ಮಾದರಿವಿದ್ಯಾರ್ಥಿಗಳ ವಿಜ್ಞಾನ ಕೌಶಲ್ಯ ದೇಶದೆಲ್ಲೆಡೆ ಪಸರಿಸಲಿ

Team Udayavani, Jan 30, 2020, 4:31 PM IST

30-January-21

ಹಾವೇರಿ: ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವ ಕೆಲಸವನ್ನು ಶಿಕ್ಷಣ ಇಲಾಖೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನಮ್ಮ ಭಾವಿ ವಿಜ್ಞಾನಿಗಳ ಕೌಶಲ್ಯಕ್ಕೆ ಪ್ರೋತ್ಸಾಹ ಹಾಗೂ ಸೂಕ್ತ ವೇದಿಕೆ ಕಲ್ಪಿಸುವ ಕಾರ್ಯ ಆಗಬೇಕು ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ನುಡಿದರು.

ನಗರದ ಹುಕ್ಕೇರಿಮಠದ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಇನ್ಸ್‌ಪೈರ್ ಅವಾರ್ಡ್‌ ಕಾರ್ಯಕ್ರಮದಲ್ಲಿ ಮಕ್ಕಳ ವಿಜ್ಞಾನ ಪ್ರದರ್ಶನಕ್ಕೆ ಚಾಲನೆ ನೀಡಿ ಶ್ರೀಗಳು ಮಾತನಾಡಿದರು.

ಎಪಿಜೆ ಅಬ್ದುಲ್‌ ಕಲಾಂ ಅವರು ದೇಶ ಕಂಡ ಅಪರೂಪದ ವ್ಯಕ್ತಿ. ತಮ್ಮ ಘನತೆ, ಗೌರವ, ಆದರ್ಶಗಳ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ನಮ್ಮ ವಿದ್ಯಾರ್ಥಿಗಳ ವಿಜ್ಞಾನ ಕೌಶಲ್ಯಗಳನ್ನು ದೇಶದಲ್ಲೆಡೆ ಪಸರಿಸಬೇಕು ಎಂದ ಶ್ರೀಗಳು, ವಿಜ್ಞಾನ ಪ್ರದರ್ಶನಗಳು ಕೇವಲ ನಗರದ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗದೆ ಗ್ರಾಮೀಣ ಭಾಗದ ಮಕ್ಕಳು ಸಹ ಭಾಗವಹಿಸಿ ತಮ್ಮ ಸೃಜನಶೀಲತೆ, ಕ್ರಿಯಾಶೀಲತೆ ಪ್ರದರ್ಶಿಸಿರುವುದು ಅಭಿನಂದನಾರ್ಹ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ದುಗ್ಗತ್ತಿ, ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚು ಆಸಕ್ತಿವಹಿಸಿ ಹೊಸ-ಹೊಸ ವಿಜ್ಞಾನ ಮಾದರಿಗಳನ್ನು ಅವಿಷ್ಕಾರಗೊಳಿಸಬೇಕು. ಮಕ್ಕಳ ಆಸಕ್ತಿ ಜೊತೆಗೆ ಶಿಕ್ಷಕರ ಮಾರ್ಗದರ್ಶನ ಇದ್ದರೆ, ವಿದ್ಯಾರ್ಥಿಗಳು ಉತ್ತಮ ಸಾಧನೆಗೈಯುತ್ತಾರೆ. ಜಿಲ್ಲೆಯ ವಿದ್ಯಾರ್ಥಿಗಳು ಕಳೆದ ಎರಡು ವರ್ಷಗಳಿಂದ ಸತತ ವಿಜ್ಞಾನ ಮಾದರಿ ತಯಾರಿಕೆಯಲ್ಲಿ ರಾಜ್ಯ ಮಟ್ಟದಲ್ಲಿ ಸ್ಥಾನ ಪಡೆಯುತ್ತಿರುವುದು ಅಭಿನಂದನೀಯ ಎಂದರು.

ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಇನ್ಸ್‌ಪೆçರ್‌ ಅವಾರ್ಡ್‌ ಕಾರ್ಯಕ್ರಮ ವಿಶಿಷ್ಟವಾಗಿದ್ದು, ಬಾಲವಿಜ್ಞಾನಿಗಳ ಪ್ರತಿಭೆ ಹೊರತರಲು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯವು ಕಠಿಣ ಎಂಬ ಮನೋಭಾವವಿರುತ್ತದೆ. ಶಿಕ್ಷಕರು ಅವರಿಗೆ ಪ್ರಾಯೋಗಿಕವಾಗಿ ಅರ್ಥವಾಗುವಂತೆ ಬೋಧಿ ಸಿದಾಗ ವಿದ್ಯಾರ್ಥಿಗಳು ಸರಳವಾಗಿ ಅರ್ಥಮಾಡಿಕೊಳ್ಳಬಹುದು ಎಂದರು.

ಡಯಟ್‌ ಪ್ರಾಂಶುಪಾಲ ಜಿ.ಎಂ. ಬಸವಲಿಂಗಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಪ್ರದರ್ಶನದ ನಿರೀಕ್ಷಕ ಗುಜರಾತಿನ ಚಂದನ್‌ ಗೌತಮ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ ಸಂಗೂರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್‌. ಪಾಟೀಲ, ಡಯಟ್‌ನ ಹಿರಿಯ ಉಪನ್ಯಾಸಕರಾದ ಝಡ್‌. ಖಾಜಿ ಹಾಗೂ ಎಂ.ಬಿ. ಅಂಬಿಗೇರ, ಇನ್ಸ್‌ಪೈರ್ ಅವಾರ್ಡ್‌ ನೋಡಲ್‌ ಅಧಿಕಾರಿಗಳಾದ ಲತಾಮಣಿ ಟಿ.ಎಂ., ನಿರ್ಣಾಯಕರಾದ ಜಿ.ಎಚ್‌. ಕಾಲೇಜಿನ ಶಂಕರ್‌, ಕೇಂದ್ರಿಯ ವಿದ್ಯಾಲಯದ ಪ್ರಾಂಶು ಪಾಲರಾದ ಕಟ್ಟಿಮನಿ, ಗಾಂಧಿಪುರ ಪಿ.ಯು. ಕಾಲೇಜಿನ ಉಪನ್ಯಾಸಕರಾದ ಶೇಖರಪ್ಪ, ವಿಜ್ಞಾನ ವಿಷಯ ಪರಿವೀಕ್ಷಕ ಬಿ.ಎಸ್‌.ಪಾಟೀಲ, ಲಂಬಾಣಿ, ಬಸಮ್ಮನವರ ಸುರಳಿಕರ, ವಿವಿಧ ಶಾಲೆಯ ವಿಜ್ಞಾನ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು. ಜಿಲ್ಲಾ ಪಂಚಾಯಿತಿ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಹಯೋಗದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.