Udayavni Special

ನದಿ ಪಾತ್ರದ ಗ್ರಾಮಗಳಿಗೆ ಡಿಸಿ ಭೇಟಿ

ಕಾಲುವೆ ಸ್ವತ್ಛತೆ-ಪ್ರವಾಹಕ್ಕೆ ಮುಂಚೆಯೇ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

Team Udayavani, Jun 23, 2021, 7:46 PM IST

22hvr4

ಹಾವೇರಿ: ಜಿಲ್ಲೆಯ ವರದಾ ನದಿ ಪಾತ್ರದ ಸವಣೂರು ಹಾಗೂ ಹಾನಗಲ್ಲ ತಾಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಪ್ರವಾಹದಿಂದ ತುತ್ತಾಗುವ ನದಿ ಪಾತ್ರದ ತಗ್ಗು ಪ್ರದೇಶದ ಮನ್ನಂಗಿ, ಮೆಳ್ಳಾಗಟ್ಟಿ, ಕುಣಿಮೆಳ್ಳಿಹಳ್ಳಿ, ಹುನುಗಂದ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ, ಮನೆ ಹಾನಿ ಹಾಗೂ ನದಿ ತೀರದ ಪ್ರದೇಶವನ್ನು ವೀಕ್ಷಿಸಿದರು. ಸ್ಥಳೀಯ ಅಧಿಕಾರಿಗಳಿಗೆ ಗ್ರಾಮಗಳ ಕಾಲುವೆ ಸ್ವತ್ಛತೆ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಲಹೆ ನೀಡಿದರು.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತ್‌ ಎಂಜಿನಿಯರ್‌ಗೆ ತಕ್ಷಣ ಸಮೀಕ್ಷೆ ವರದಿ ಸಲ್ಲಿಸಬೇಕು. ಸರ್ಕಾರದ ನಿಯಮಾನುಸಾರ ಪರಿಹಾರ ವಿತರಣೆಗೆ ಕ್ರಮ ವಹಿಸುವಂತೆ ಸೂಚನೆ ನೀಡಿದರು. ಜಿಲ್ಲೆಯ ತಹಶೀಲ್ದಾರ್‌ಗಳೊಂದಿಗೆ ಸೋಮವಾರ ಸಂಜೆ ವಿಡಿಯೋ ಸಂವಾದ ನಡೆಸಿದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲೆಯಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳನ್ನು 24 ಗಂಟೆಯೊಳಗೆ ಪರಿಶೀಲಿಸಿ ತುರ್ತಾಗಿ ಪರಿಹಾರ ಪಾವತಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟವರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನೆರೆ ಪರಿಹಾರ ವಿತರಣೆಯಲ್ಲಿ ಯಾವುದೇ ಅವ್ಯವಹಾರ ಹಾಗೂ ಲೋಪವಾಗದಂತೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಪರಿಹಾರ ವಿತರಿಸಬೇಕು. ಅವ್ಯವಹಾರ ಎಸಗಿದವರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದರು. ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳಿಗೆ ಗ್ರಾಪಂ ಅಭಿವೃದ್ಧಿ ಅ ಧಿಕಾರಿಗಳು ಬೆಳಗ್ಗೆ 8 ಗಂಟೆಯೊಳಗಾಗಿ ಭೇಟಿ ನೀಡಿ ಹಾನಿಯ ವರದಿ ಸಂಗ್ರಹಿಸಿ ತಹಶೀಲ್ದಾರ್‌ ಗಳಿಗೆ ಸಲ್ಲಿಸಬೇಕು. ಬೆಳಗ್ಗೆ 10 ಗಂಟೆಯೊಳಗೆ ತಹಶೀಲ್ದಾರ್‌ರು ತಾಲೂಕಿನ ಎಲ್ಲ ಹಾನಿಯ ವರದಿಯನ್ನು ಕ್ರೋಢೀಕರಿಸಿ ಜಿಲ್ಲಾ ಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಸೂಚನೆ ನೀಡಿದರು.

ಮುಂಗಾರು ಸಂದರ್ಭದಲ್ಲಿ ಸಂಭವನೀಯ ಪ್ರಾಕೃತಿಕ ಅವಘಡಗಳನ್ನು ತಡೆಯುವ ನಿಟ್ಟಿನಲ್ಲಿ ಗ್ರಾಮವಾರು ಸಿದ್ಧತೆಗಳನ್ನು ಕೈಗೊಳ್ಳಬೇಕು. ಸದಾ ನಿಗಾದಲ್ಲಿರಬೇಕು. ಪ್ರವಾಹ ಪೀಡಿತ ನದಿ ಪಾತ್ರದ ಹಳ್ಳಿಗಳಲ್ಲಿ ಕೂಡಲೇ ಒಳಚರಂಡಿ ಸ್ವತ್ಛತೆ, ಕೆರೆ ಹೂಳೆತ್ತುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಮಾತನಾಡಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ಎಂಜಿನಿಯರ್‌, ಗ್ರಾಮ ಪಂಚಾಯತಿ ಅಭಿವೈದ್ಧಿ ಅ ಧಿಕಾರಿಗಳ ತಂಡದೊಂದಿಗೆ ಅತಿವೃಷ್ಟಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ, ವಸ್ತುಸ್ಥಿತಿಯ ಸಮೀಕ್ಷೆ ನಡೆಸಿ, ´ೋಟೋ ಸಹಿತ ಅಂದಾಜು ಹಾನಿ ವರದಿಯನ್ನು ತಹಶೀಲ್ದಾರ್‌ಗಳಿಗೆ ನೀಡಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಉಪ ವಿಭಾಗಾ ಧಿಕಾರಿ ಶಿವಾನಂದ ಉಳ್ಳಾಗಡಿ, ಹಾವೇರಿ ತಹಶೀಲ್ದಾರ್‌ ಗಿರೀಶ ಸ್ವಾದಿ, ಎಲ್ಲ ತಾಲೂಕು ತಹಶೀಲ್ದಾರ್‌ಗಳು ಹಾಗೂ ವಿವಿಧ ಗ್ರಾಮ ಪಂಚಾಯತಿಗಳ ಪಿಡಿಒಗಳು ಇದ್ದರು.

ಟಾಪ್ ನ್ಯೂಸ್

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

dfgyt

ಸಿಎಂ ಎದುರು ಸಮಸ್ಯೆಗಳ ಸುರಿಮಳೆ

tretert

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ಶಿಲ್ಪಾ ಶೆಟ್ಟಿ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಓರ್ವ ಮಹಿಳೆ ದುರ್ಮರಣ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ: ಓರ್ವ ಮಹಿಳೆ ದುರ್ಮರಣ

dfferere

ಜರ್ಮನಿ ಮೂಲದ ಯುವತಿಗೆ ನಟ ಆರ್ಯ ವಂಚನೆ ?    

gfdggree

ನೂತನ ಸಿಎಂರಿಂದ ಹೊಸ ಅಧ್ಯಕ್ಷರ  ನೇಮಕ ಮಾಡಬಹುದು: ಅಪ್ಪುಗೌಡಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

dfgyt

ಸಿಎಂ ಎದುರು ಸಮಸ್ಯೆಗಳ ಸುರಿಮಳೆ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಓರ್ವ ಮಹಿಳೆ ದುರ್ಮರಣ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ: ಓರ್ವ ಮಹಿಳೆ ದುರ್ಮರಣ

gfdggree

ನೂತನ ಸಿಎಂರಿಂದ ಹೊಸ ಅಧ್ಯಕ್ಷರ  ನೇಮಕ ಮಾಡಬಹುದು: ಅಪ್ಪುಗೌಡ

gdgrger

ಬರದ ನಾಡಿಗೆ ನೀರಾವರಿ ಭಾಗ್ಯ ಕರುಣಿಸಲಿ

MUST WATCH

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

udayavani youtube

ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ :ಸಿದ್ದುಗೆ ಬಿಜೆಪಿ ತಿರುಗೇಟು

udayavani youtube

ರಾಷ್ಟ್ರೀಯ ಪ್ರಾಣಿಯಾಗಿದ್ದ ಸಿಂಹವನ್ನು ಹುಲಿ ಹಿಂದಿಕ್ಕಿದ್ದು ಹೇಗೆ ?

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

ಹೊಸ ಸೇರ್ಪಡೆ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಒಲಿಂಪಿಕ್ಸ್‌ನಲ್ಲಿ ಗುರುವಾರ 24 ಕೋವಿಡ್ ಪ್ರಕರಣ

ಒಲಿಂಪಿಕ್ಸ್‌ನಲ್ಲಿ ಗುರುವಾರ 24 ಕೋವಿಡ್ ಪ್ರಕರಣ

ಮೇರಿಗೆ ಸೋಲು, ಕೂಟದಿಂದ ನಿರ್ಗಮನ

ಮೇರಿಗೆ ಸೋಲು, ಕೂಟದಿಂದ ನಿರ್ಗಮನ

dfgyt

ಸಿಎಂ ಎದುರು ಸಮಸ್ಯೆಗಳ ಸುರಿಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.