ಸಮಸ್ಯೆಗಳ ನಿವಾರಣೆಗೆ ಕ್ರಮ

Team Udayavani, Feb 22, 2021, 5:13 PM IST

ಸಮಸ್ಯೆಗಳ ನಿವಾರಣೆಗೆ ಕ್ರಮ

ಹಾವೇರಿ: ಕಂದಾಯ ಇಲಾಖೆಗೆ ಸೀಮಿತವಾಗಿದ್ದ ಗ್ರಾಮ ವಾಸ್ತವ್ಯಕಾರ್ಯಕ್ರಮದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳನ್ನು ಆಹ್ವಾನಿಸಿ ಗ್ರಾಮದ ಜನತೆಯ ಸಮಸ್ಯೆಗಳ ನಿವಾರಣೆಗೆ ಕ್ರಮ ವಹಿಸಲಾಗಿದೆ. ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ಸವಣೂರು ತಾಲೂಕು ಹೊಸನೀರಲಗಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆಮಾತನಾಡಿದ ಅವರು, ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಹಲವು ಮನವಿಗಳನ್ನುಸ್ವೀಕರಿಸಲಾಗಿದೆ. ಈ ದಿನವೇ ಅವರಿಗೆ ಮಂಜೂರಾತಿಪತ್ರ ನೀಡಲಾಗುವುದು.ಗ್ರಾಮದ ಜನರ ಆರೋಗ್ಯದ ಸ್ಥಿತಿಗತಿ ಅರಿಯಲು ಹೆಲ್ತ್‌ ಪ್ರೊಫೈಲ್‌ ತಯಾರಿಸಲಾಗಿದೆ. ವೈಜ್ಞಾನಿಕವಾಗಿ ಎಲ್ಲರ ಆರೋಗ್ಯದ ವಿಶ್ಲೇಷಣೆ ಮಾಡಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಗ್ರಾಮ ವಾಸ್ತವ್ಯದ ಅಂಗವಾಗಿ ಆರೋಗ್ಯ ಶಿಬಿರ ಆಯೋಜಿಸಲಾಗಿದೆ. ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದರು.

ಮಕ್ಕಳು, ತಾಯಂದಿರ ಅಪೌಷ್ಟಿಕ ಕುರಿತಂತೆ ತಪಾಸಣೆ ನಡೆಸಲಾಗಿದೆ. ಒಂದೊಮ್ಮೆಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ನ್ಯೂಟ್ರೇಷನ್‌ ರಿ ಹ್ಯಾಬ್ಲಿಟೇಷನ್‌ ಕೇಂದ್ರದಲ್ಲಿ ದಾಖಲಿಸಿ ಅಪೌಷ್ಟಿಕತೆ ನಿವಾರಣೆಗೆ ಕ್ರಮವಹಿಸಲಾಗುವುದು. ಗ್ರಾಮದಲ್ಲಿರುವ ಕುಡಿಯುವ ನೀರಿನ ಹಳೆಯ ಟ್ಯಾಂಕರ್‌ಶಿಥಿಲಗೊಂಡಿದ್ದು, ಹೊಸ ಟ್ಯಾಂಕ್‌ ನಿರ್ಮಾಣಕ್ಕೆ ಗ್ರಾಮಸ್ಥರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜಲಜೀವನ ಯೋಜನೆಯಡಿ ಹೊಸಟ್ಯಾಂಕ್‌ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. 22 ಜನರಿಗೆ ವೈಯಕ್ತಿಕಶೌಚಾಲಯ ನಿರ್ಮಾಣ ಮಂಜೂರಾತಿ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಬಸ್‌ ಸಮಸ್ಯೆ ನಿವಾರಿಸಿ ಸೋಮವಾರದಿಂದಲೇ ವಿದ್ಯಾರ್ಥಿಗಳ ಸಮಯಕ್ಕೆ ಬಸ್‌ ಓಡಿಸಲು ಸೂಚನೆ ನೀಡಲಾಗಿದೆ. ಗ್ರಂಥಾಲಯ ಬೇಡಿಕೆಯನ್ನು ಈಡೇರಿಸಲಾಗಿದೆ.ಶಾಲಾ ಕೊಠಡಿಯೊಂದಲ್ಲಿ  ತಾತ್ಕಾಲಿಕವಾಗಿ ಗ್ರಂಥಾಲಯ ಆರಂಭಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪರಿಶಿಷ್ಟರ ಬೇಡಿಕೆಯಂತೆ ಸ್ಮಶಾನ ಭೂಮಿ, ರಸ್ತೆ ಮತ್ತು ಚರಂಡಿ ನಿರ್ಮಾಣ, ದೇವಸ್ಥಾನದ ಬೇಡಿಕೆಗಳ ಈಡೇರಿಕೆಗೆ ಕ್ರಮ ವಹಿಸಲಾಗುವುದು.ನಿವೇಶನ ಮತ್ತು ಮನೆಗಳ ನಿರ್ಮಾಣಕ್ಕೆ ಪಟ್ಟಾ ನೀಡಿಕೆ ಕುರಿತಂತೆ ಸಮಸ್ಯೆ ಪರಿಹರಿಸಲು 15 ದಿವಸದ ಗಡುವು ನೀಡಲಾಗಿದೆ. 60 ಮನೆಗಳಿಗೆ ಪಟ್ಟಾ ಕೊಡಲು ಕ್ರಮ ಕೈಗೊಳ್ಳಲಾಗುವುದು.ಬೆಂಕಿ ಅವಘಡದಿಂದ ಭೂ ದಾಖಲೆಗಳು ಸವಣೂರ ಕಂದಾಯ ಕಚೇರಿಯಲ್ಲಿ ಸುಟ್ಟುಹೋಗಿವೆ. 2011ರ ಸಂದರ್ಭದಲ್ಲಿ ಈ ದಾಖಲೆಗಳು ಸುಟ್ಟು ಹೋಗಿದೆ. ಹಳೆಯ ದಾಖಲೆಗಳು ಸಿಗದಿದ್ದರೆ ಭೂಮಿಗೆ ಸಂಬಂಧಿಸಿದ ಬೇರೆ ಬೇರೆ ದಾಖಲೆಗಳ ಝರಾಕ್ಸ್‌ ಪ್ರತಿ ನೀಡಿದರೆ ಹೊಸ ಭೂ ದಾಖಲೆಗಳನ್ನು ಸೃಷ್ಟಿ ಮಾಡಲಾಗುವುದು. ಇಲ್ಲವಾದರೆ ಜಿಲ್ಲಾ ಸಮಿತಿಯಲ್ಲಿ ಈ ಸಮಸ್ಯೆ ನಿವಾರಣೆ ಕುರಿತಂತೆ ಚರ್ಚಿಸಿ ಹೊಸ ದಾಖಲೆಗಳ ಸೃಜನೆಗೆ ಕ್ರಮ ವಹಿಸಲಾಗುವುದು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್‌ ಮಾತನಾಡಿ, ಗ್ರಾಮದ ಕುಡಿಯುವ ನೀರು, ರಸ್ತೆ, ಚರಂಡಿ, ಶೌಚಾಲಯ, ನಿವೇಶನ ಮತ್ತು ವಸತಿ ರಹಿತರನ್ನು ಗುರುತಿಸಿ ನಿವೇಶನ ನಿರ್ಮಾಣಕ್ಕೆ ಒಂದರಿಂದ ಎರಡು ತಿಂಗಳೊಳಗಾಗಿ ಪರಿಹಾರ ಕಂಡುಕೊಳ್ಳಲು ಕ್ರಮ ವಹಿಸಲಾಗುವುದು. ಗ್ರಾಮದ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ ಹಾಗೂ ಆರ್ಥಿಕಕ್ಷೇತ್ರದ ಅಭಿವೃದ್ಧಿಗೆ ಗ್ರಾಮ ಸಭೆಯಲ್ಲಿ ತೀರ್ಮಾನ ಕೈಗೊಂಡು ಕ್ರಿಯಾ ಯೋಜನೆ ರೂಪಿಸಿ ಅನುದಾನ ಒದಗಿಸಬೇಕು.

ಗ್ರಾಮಸ್ಥರು ಸಭೆಗಳಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕೆಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ, ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಇದ್ದರು.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.