ನೆಲೋಗಲ್ಲ ಜನರಿಗೆ ಹೆಮ್ಮಾರಿಯಾದ ಹೆದ್ದಾರಿ!


Team Udayavani, Oct 15, 2018, 4:57 PM IST

15-october-20.gif

ಹಾವೇರಿ: ಹೆದ್ದಾರಿ ಮಾಡುತ್ತೇವೆ ಎಂದಾಗ ಗ್ರಾಮಸ್ಥರು ಭೂಮಿ ಕೊಟ್ಟರು. ಆದರೆ, ಅದೇ ಹೆದ್ದಾರಿ ಈಗ ಗ್ರಾಮಸ್ಥರ ಪ್ರಾಣವನ್ನೇ ಕೇಳುತ್ತಿದೆ! ನಿತ್ಯ ಜೀವ ಕೈಯಲ್ಲಿ ಹಿಡಿದು ಹೆದ್ದಾರಿಯಲ್ಲಿಯೇ ಸಂಚರಿಸುವ ದೌರ್ಭಾಗ್ಯ ಗ್ರಾಮಸ್ಥರದ್ದು.

ಇದು ತಾಲೂಕಿನ ನೆಲೋಗಲ್ಲ ಗ್ರಾಮಸ್ಥರ ನಿತ್ಯದ ಗೋಳು. ಕಳೆದ ಏಳೆಂಟು ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಮಾಡಲು ನೆಲೋಗಲ್ಲ ಗ್ರಾಮಸ್ಥರು ತಮ್ಮ 60 ಎಕರೆ ಭೂಮಿ ಕೊಟ್ಟು ಅಭಿವೃದ್ಧಿಗೆ ಸಹಕರಿಸಿದ್ದರು. ಅಭಿವೃದ್ಧಿಗೆ ತಾವೂ ಕೈಜೋಡಿಸಿದ್ದೇವೆ ಎಂಬ ನೆಮ್ಮದಿ ಅವರಲ್ಲಿತ್ತು. ಆದರೆ, ಹೆದ್ದಾರಿಯಿಂದಾಗುತ್ತಿರುವ ತೊಂದರೆಯಿಂದಾಗಿ ಈಗ ಗ್ರಾಮಸ್ಥರ ನೆಮ್ಮದಿಯೇ ಹಾಳಾಗಿ ಹೋಗಿದೆ.

ಅಭಿವೃದ್ಧಿಗೆ ಸಹಕರಿಸಿದ ತಪ್ಪಿಗೆ ನಾಲ್ಕು ವರ್ಷಗಳಲ್ಲಿ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೊಳಗಾಗಿ 20ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇವರಲ್ಲಿ ಐವರು ಮಕ್ಕಳು, ಐವರು ಮಹಿಳೆಯರು ಸೇರಿದ್ದಾರೆ. ಆಕಳು, ಎತ್ತು, ಎಮ್ಮೆ, ಕುರಿಗಳ ಸಾವಿಗಂತೂ ಲೆಕ್ಕವೇ ಇಲ್ಲ. ಅಪಘಾತದಲ್ಲಿ ಗಾಯಗೊಂಡವರು ನೋವಲ್ಲೇ ದಿನ ದೂಡುತ್ತಿದ್ದಾರೆ. ಇಷ್ಟೆಲ್ಲ ದುರಂತಕ್ಕೆ ಕಾರಣ ಗ್ರಾಮದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಗ್ರಾಮಸ್ಥರ ಪಾಲಿಗೆ ಹೆಮ್ಮಾರಿಯಾಗಿ ಕಾಡುತ್ತಿದೆ.

ಕೈಯಲ್ಲಿ ಜೀವ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೆದ್ದಾರಿ ನಿರ್ಮಿಸುವಾಗ ನೆಲೋಗಲ್ಲ ಗ್ರಾಮದ ಬಳಿ ಸಮರ್ಪಕ ಸೇವಾರಸ್ತೆ ಮತ್ತು ಕೆಳಸೇತುವೆ ನಿರ್ಮಿಸದಿರುವುದೇ ಇಷ್ಟೆಲ್ಲ ತೊಂದರೆಗೆ ಕಾರಣವಾಗಿದೆ. ಹೆದ್ದಾರಿಗೆ ಹೊಂದಿಕೊಂಡು ಸೇವಾ ರಸ್ತೆ ಇಲ್ಲದೇ ಇರುವುದರಿಂದ ಗ್ರಾಮಸ್ಥರು ಗ್ರಾಮದ ಹಳೆ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿ ಮೇಲೆಯೇ ಓಡಾಡುವ ಸ್ಥಿತಿ ಇದೆ. ಕೆಳ ಸೇತುವೆ ಇಲ್ಲದ ಕಾರಣ ಗ್ರಾಮಸ್ಥರು ಅತ್ತಿತ್ತ ನೋಡುತ್ತ ಜೀವ ಕೈಯಲ್ಲಿ ಹಿಡಿದುಕೊಂಡೇ ಭರ್ರ… ಎಂದು ಬರುವ ವಾಹನ ಸಂಚಾರದ ಹೆದ್ದಾರಿ ದಾಟಬೇಕಾಗಿದೆ. ಹೀಗೆ ದಾಟುವಾಗಲೇ ಬಹಳಷ್ಟು ಅಪಘಾತಗಳು ಸಂಭವಿಸಿ, ಹಲವು ಪ್ರಾಣಪಕ್ಷಿ ಹಾರಿ ಹೋಗಿವೆ.

ಹೆದ್ದಾರಿ ಆಚೆಗೆ ಕಲ್ಲಿಹಾಳ, ವೀರಾಪುರ ಗ್ರಾಮಗಳಿವೆ. ಆ ಗ್ರಾಮಕ್ಕೆ ಹೋಗುವಾಗ ಹೆದ್ದಾರಿ ದಾಟಿಯೇ ಹೋಗಬೇಕು. ಹೆದ್ದಾರಿ ಆಚೆಗೆ ಹಳ್ಳವೊಂದಿದ್ದು ನೀರಿಗಾಗಿ, ಬಟ್ಟೆ ತೊಳೆಯಲು, ಬಹಿರ್ದೆಸೆಗೆ ಮಕ್ಕಳು, ಮಹಿಳೆಯರಾದಿಯಾಗಿ ಬಹುತೇಕರು ಅಲ್ಲಿ ಹೋಗುತ್ತಾರೆ. ಹೀಗೆ ಹೋಗುವಾಗ ಹೆದ್ದಾರಿ ದಾಟುವುದು ಅನಿವಾರ್ಯ. ಈ ಸಂದರ್ಭದಲ್ಲಿಯೇ ಜನ, ಜಾನುವಾರು, ಚಕ್ಕಡಿ, ಟ್ರ್ಯಾಕ್ಟರ್‌ಗಳು ಅಪಘಾತಕ್ಕೊಳಗಾಗಿ ಹಲವರ ಜೀವಕ್ಕೆ ಕುಂದುಂಟಾಗಿದೆ. ಹೆದ್ದಾರಿಗೆ ಹೊಂದಿಕೊಂಡು ಹಿರಿಯ ಪ್ರಾಥಮಿಕ ಶಾಲೆಗಳಿದ್ದು, ಮಕ್ಕಳು ಆಟೋಟ ಸಂದರ್ಭದಲ್ಲಿ ಅರಿವಿಲ್ಲದೆ ಹೆದ್ದಾರಿಗೆ ಬರುತ್ತಾರೆ. ಪಾಲಕರಿಗಂತೂ ಹೆದ್ದಾರಿಯೇ ಒಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಕೊಳಚೆ ಹೊಂಡ: ರಾ.ಹೆ. ಪ್ರಾ ಧಿಕಾರದವರು ಗ್ರಾಮದಿಂದ ಸ್ವಲ್ಪ ದೂರದಲ್ಲಿ ಕೆಳ ಸೇತುವೆಯೇನೋ ನಿರ್ಮಿಸಿದೆ. ಆದರೆ, ಅದೂ ಓಡಾಡಲು ರಸ್ತೆ ಇಲ್ಲದೇ ಅವೈಜ್ಞಾನಿಕವಾಗಿ ನಿರ್ಮಿಸಿದ್ದಾರೆ. ಕೆಳಸೇತುವೆ ತುಂಬೆಲ್ಲ ಆಳೆತ್ತರ ಕೊಳಚೆ ನೀರು ತುಂಬಿದೆ. ಕೆಳಸೇತುವೆಯ ಎತ್ತರ ತೀರಾ ಕಡಿಮೆಯಿದ್ದು, ಬೆಳೆ ತುಂಬಿದ ಚಕ್ಕಡಿ, ಟ್ರ್ಯಾಕ್ಟರ್‌ ಓಡಾಡಲು ಆಗದು. ಹೀಗಾಗಿ ಈ ಕೆಳಸೇತುವೆ ಇದ್ದೂ ಇಲ್ಲದಂತಾಗಿದೆ.

ಬರೀ ಭರವಸೆ: ರಾಷ್ಟ್ರೀಯ ಹೆದ್ದಾರಿಯಿಂದಾಗುತ್ತಿರುವ ಅವಘಡ ತಪ್ಪಿಸಲು ಕೂಡಲೇ ಸೇವಾರಸ್ತೆ ಮತ್ತು ಸಮರ್ಪಕ ಕೆಳಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಐದಾರು ಬಾರಿ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿ ಬಾರಿಯೂ ಅಧಿಕಾರಿಗಳು, ಹೆದ್ದಾರಿ ಪ್ರಾಧಿಕಾರದವರು ಭರವಸೆ ನೀಡುತ್ತಲೇ ಬಂದಿದ್ದಾರೆ. ಆದರೆ, ಯಾವ ಭರವಸೆಯೂ ಅನುಷ್ಠಾನಕ್ಕೆ ಬಂದಿಲ್ಲ. ಇದರಿಂದ ಕೆರಳಿರುವ ಗ್ರಾಮಸ್ಥರು ಈಗ ಅಧಿಕಾರಿಗಳಿಗೆ ಕಾಲಮಿತಿ ಗಡುವು ನೀಡಿ ಹೆದ್ದಾರಿ ಬಂದ್‌ ಮಾಡಿ ಉಗ್ರ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. 

ದಿವ್ಯ ನಿರ್ಲಕ್ಷ್ಯ 
ಅಪಘಾತ ನಡೆದಾಗೊಮ್ಮೆ ಪ್ರತಿಭಟನೆ, ಭರವಸೆ ಮಾಮೂಲಿ ಆಗಿದೆ. ನಂತರ ಅಧಿಕಾರಿಗಳು ನಾಪತ್ತೆಯಾಗುವರು. ಈಗ ಹೆದ್ದಾರಿಯನ್ನು ಚತುಷ್ಪಥ ಮಾಡುವುದಾಗಿ ಹೇಳುತ್ತಿದ್ದಾರೆ. ಮತ್ತೆ ಭೂಮಿ ಕೊಡಬೇಕು. ಆಗಲೂ ಸರಿಯಾದ ಸರ್ವಿಸ್‌ ರಸ್ತೆ ಮಾಡದಿದ್ದರೆ ಮತ್ತೆದೇ ತೊಂದರೆ ಮುಂದುವರಿಯುವ ಆತಂಕ.
. ಮಂಜುನಾಥಸ್ವಾಮಿ ಹಿರೇಮಠ,
ನೆಲೋಗಲ್ಲ ಗ್ರಾಮಸ್ಥ

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.