Udayavni Special

ಸ್ಥಳೀಯ ಸಂಸ್ಥೆ ಸಾರಥಿಗಳಿಗೆ ತ್ರಿಶಂಕು ಸ್ಥಿತಿ

ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪಟ್ಟಿಗೆ ಹೈಕೋರ್ಟ್‌ ಬ್ರೇಕ್‌

Team Udayavani, Nov 21, 2020, 5:34 PM IST

ಸ್ಥಳೀಯ ಸಂಸ್ಥೆ ಸಾರಥಿಗಳಿಗೆ ತ್ರಿಶಂಕು ಸ್ಥಿತಿ

ಹಾವೇರಿ: ರಾಜ್ಯ ಸರ್ಕಾರ ನಿಗದಿಗೊಳಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಹೈಕೋರ್ಟ್‌ ರದ್ದುಗೊಳಿಸಿದ್ದು, ಜಿಲ್ಲೆಯ 8 ನಗರ ಸ್ಥಳೀಯ ಸಂಸ್ಥೆಗಳಿಗೆ ಇತ್ತೀಚೆಗೆ ಆಯ್ಕೆಯಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷರು ಮತ್ತೆ ತ್ರಿಶಂಕು ಸ್ಥಿತಿ ಎದುರಿಸುವಂತಾಗಿದೆ.

ಜಿಲ್ಲೆಯ 8 ನಗರ ಸ್ಥಳೀಯ ಸಂಸ್ಥೆಗಳಿಗೆ ಸದಸ್ಯರು ಆಯ್ಕೆಯಾಗಿ ಎರಡು ವರ್ಷ ಕಳೆದಿದ್ದರೂ ಅಧಿಕಾರ ಭಾಗ್ಯ ದೊರಕಿರಲಿಲ್ಲ. ಕೊನೆಗೂ ಅ.8ರಂದು ರಾಜ್ಯ ಸರ್ಕಾರ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಅಂತಿಮಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಈ ಮೀಸಲಾತಿಯನ್ನು ಪ್ರಶ್ನಿಸಿ ಹಲವರು ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್‌ ಏಕ ಸದಸ್ಯ ಪೀಠ ಮೀಸಲಾತಿ ನಿಗದಿಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಗೊಳಿಸಿದೆ. ಅಲ್ಲದೇ, ಈಗಾಗಲೇ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ತಾತ್ಕಾಲಿಕ ಅಮಾನತು ಮಾಡಿದೆ. ಹೀಗಾಗಿ, ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸಂಭ್ರಮಿಸಿದ್ದ ಪ್ರಥಮ ಪ್ರಜೆಗಳಿಗೆ ಈಗ ಮತ್ತೆ ನಿರಾಸೆ ಉಂಟಾಗಿದೆ.

8 ಸ್ಥಳೀಯ ಸಂಸ್ಥೆಗೆ ಚುನಾವಣೆ: ಹಾವೇರಿ ಹಾಗೂರಾಣಿಬೆನ್ನೂರು ನಗರಸಭೆ, ಶಿಗ್ಗಾವಿ, ಹಾನಗಲ್ಲ, ಸವಣೂರು, ಬ್ಯಾಡಗಿ ಪುರಸಭೆ, ಹಿರೇಕೆರೂರು, ಗುತ್ತಲ ಪಟ್ಟಣ ಪಂಚಾಯಿತಿಗಳಿಗೆ ಕಳೆದ ತಿಂಗಳ 31 ರಿಂದ ಈ ತಿಂಗಳ 10ರವರೆಗೆ ವಿವಿಧ ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಕೆಲವು ಕಡೆ ಕಾಂಗ್ರೆಸ್‌ ಮತ್ತೆ ಕೆಲವು ಕಡೆ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದವು.

ಹಾವೇರಿ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದವರ್ಗ ಅ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್‌ ಅಧಿಕಾರ ಹಿಡಿಯಲು ದೊಡ್ಡ ಕಸರತ್ತನ್ನೇ ನಡೆಸಿದ್ದವು. ಕೊನೆಗೆ ಪಕ್ಷೇತರರ ಬೆಂಬಲದೊಂದಿಗೆ ಕಾಂಗ್ರೆಸ್‌ನ ಸಂಜೀವಕುಮಾರ ನೀರಲಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಉಪಾಧ್ಯಕ್ಷ ಸ್ಥಾನವೂ ಕಾಂಗ್ರೆಸ್‌ ಗೆ ಒಲಿದಿತ್ತು.

ರಾಣೆಬೆನ್ನೂರು ನಗರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿ ಬಹುಮತ ಇರುವುದರಿಂದ ನಿರಾಯಾಸವಾಗಿ ಬಿಜೆಪಿಗೆ ಅಧಿಕಾರ ದಕ್ಕಿತ್ತು. ಬ್ಯಾಡಗಿ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಗೆ ಮೀಸಲಾಗಿತ್ತು. ಇಲ್ಲಿ ಬಿಜೆಪಿ ಬಹುಮತ ಹೊಂದಿದ್ದರಿಂದ ಅಧಿಕಾರ ಬಿಜೆಪಿ ಪಾಲಾಗಿತ್ತು.

ಹಾನಗಲ್ಲ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿತ್ತು. ಇಲ್ಲಿ ಕಾಂಗ್ರೆಸ್‌ಗೆ ಬಹುಮತ ಇದ್ದಿದ್ದರಿಂದ ಕೈ ಪಕ್ಷ ಅಧಿಕಾರದ ಗದ್ದುಗೆ ಏರಿತ್ತು. ಸವಣೂರು ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಸೀಮಿತವಾಗಿತ್ತು. ಅಧ್ಯಕ್ಷ ಸ್ಥಾನ ಹಿಂದುಳಿದ ಬ ವರ್ಗದ ಮಹಿಳಾ ಮೀಸಲಾತಿ ಘೋಷಣೆಯಾಗಿದ್ದರಿಂದ ಬಹುಮತ ಹೊಂದಿದ್ದ ಕಾಂಗ್ರೆಸ್‌ ಪಕ್ಷದಲ್ಲಿ ಈ ಮೀಸಲಾತಿಗೆ ಅನ್ವಯವಾಗುವಂತೆ ಸದಸ್ಯರು ಇಲ್ಲದ ಕಾರಣ ಅನಿವಾರ್ಯಾವಾಗಿ ಬಹುಮತ ಇಲ್ಲದ ಬಿಜೆಪಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವಂತಾಗಿತ್ತು.

ಶಿಗ್ಗಾವಿ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಇಲ್ಲಿ ಬಿಜೆಪಿ ಪಕ್ಷೇತರರ ಬೆಂಬಲ ಪಡೆದು ಅಧಿಕಾರದ ಗದ್ದುಗೆ ಏರಿತ್ತು.

ಪಟ್ಟಣ ಪಂಚಾಯಿತಿಗೆ ಸಂಬಂಧಿ ಸಿದಂತೆ ಹಿರೇಕೆರೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗುತ್ತು. ಇಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿತ್ತು. ಗುತ್ತಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಇಲ್ಲಿ ಕಾಂಗ್ರೆಸ್‌ ಬಹುಮತ ಹೊಂದಿದ್ದರಿಂದ ಅಧಿಕಾರ ಕಾಂಗ್ರೆಸ್‌ ಪಕ್ಷದ ಪಾಲಾಗಿತ್ತು. ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕಿದೆ.

ಅಧಿಕಾರ ಸಿಗದವರ ಆಶಾವಾದ :  ಸದ್ಯ ಹೈಕೋರ್ಟ್‌ ಆದೇಶದಿಂದಾಗಿ ಹಿಂದಿನ ಮೀಸಲಾತಿ ರದ್ದುಗೊಂಡಿದ್ದು, ಕೆಲವೇ ದಿನಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ. ಹೊಸ ಮೀಸಲಾತಿ ಪಟ್ಟಿಯನ್ನು ಸರ್ಕಾರ ಪ್ರಕಟಿಸಬೇಕಿದೆ. ಅದರಂತೆ ಹೊಸದಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕಿದ್ದು, ಅಧಿಕಾರ ಗದ್ದುಗೆ ಹಿಡಿಯುವಲ್ಲಿ ವಿಫಲರಾದವರಿಗೆ ಈ ಆದೇಶದಿಂದ ಮತ್ತೆ ಆಸೆ ಚಿಗುರೊಡೆಯುವಂತೆ ಮಾಡಿದೆ

 

ವೀರೇಶ ಮಡ್ಲೂರ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

2 ವರ್ಷಗಳ ಗರಿಷ್ಠಕ್ಕೆ ಪೆಟ್ರೋಲ್‌ ಬೆಲೆ ಏರಿಕೆ

2 ವರ್ಷಗಳ ಗರಿಷ್ಠಕ್ಕೆ ಪೆಟ್ರೋಲ್‌ ಬೆಲೆ ಏರಿಕೆ

r-ashok

ಈ ಬಾರಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ: ಆರ್ ಅಶೋಕ್

bsy

ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೆ ತೀರ್ಮಾನ: ಸಿಎಂ ಬಿಎಸ್ ವೈ

grama

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ಹಂತದ ಗ್ರಾ.ಪಂ ಚುನಾವಣೆ ನಡೆಸುವಂತೆ ಆದೇಶ !

ashwath

HDK ಬಿಜೆಪಿ ಜೊತೆ ಸೇರಿದ್ದರೆ ಸಿಎಂ ಆಗುತ್ತಿರಲಿಲ್ಲ; BSY ನಮ್ಮ ನಾಯಕ: ಅಶ್ವತ್ಥನಾರಾಯಣ

ಮಂಗಳೂರು ಉಗ್ರರ ಪರ ಗೋಡೆ ಬರಹ ಪ್ರಕರಣ : ಇಬ್ಬರ ಬಂಧನ 

ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಇಬ್ಬರ ಬಂಧನ 

ಚಿಕ್ಕಬಳ್ಳಾಪುರ ನಗರದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಲು ಕ್ರಮ: ಡಿಎಸ್ ಆನಂದ್‍ರೆಡ್ಡಿ

ಚಿಕ್ಕಬಳ್ಳಾಪುರ ನಗರದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ: ಡಿಎಸ್ ಆನಂದ್‍ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಮನೆಯಲ್ಲಿ ಎರಡು ದಿನದಲ್ಲಿ ನಾಲ್ಕು ಹಾವು ಪ್ರತ್ಯಕ್ಷ: ಕುಟುಂಬಸ್ಥರ ಆತಂಕ

ಈ ಮನೆಯಲ್ಲಿ ಎರಡು ದಿನದಲ್ಲಿ ನಾಲ್ಕು ಹಾವು ಪ್ರತ್ಯಕ್ಷ: ಕುಟುಂಬಸ್ಥರ ಆತಂಕ

ಕನಕದಾಸರು ಸರಳ ಬದುಕಿನ ಸಂದೇಶ ವಾಹಕರು

ಕನಕದಾಸರು ಸರಳ ಬದುಕಿನ ಸಂದೇಶ ವಾಹಕರು

ಮತಗಟ್ಟೆವಾರು ವೈಯಕ್ತಿಕ ಗಮನ ಹರಿಸಿ

ಮತಗಟ್ಟೆವಾರು ವೈಯಕ್ತಿಕ ಗಮನ ಹರಿಸಿ

ದೆಹಲಿಯ ರೈತರ ಹೋರಾಟ ಬೆಂಬಲಿಸಿ ಹಾವೇರಿಯಲ್ಲಿ ಪ್ರತಿಭಟನೆ: ಪೊಲೀಸರಿಂದ ರೈತ ಮುಖಂಡರ ಬಂಧನ

ದೆಹಲಿಯ ರೈತರ ಹೋರಾಟ ಬೆಂಬಲಿಸಿ ಹಾವೇರಿಯಲ್ಲಿ ಪ್ರತಿಭಟನೆ: ಪೊಲೀಸರಿಂದ ರೈತ ಮುಖಂಡರ ಬಂಧನ

ಸಚಿವ ಸಂಪುಟ ವಿಸ್ತರಣೆಗೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗದು; ಬೊಮ್ಮಾಯಿ

ಸಚಿವ ಸಂಪುಟ ವಿಸ್ತರಣೆಗೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗದು; ಬೊಮ್ಮಾಯಿ

MUST WATCH

udayavani youtube

ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಇಬ್ಬರ ಬಂಧನ

udayavani youtube

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಬಂದ್ | Udayavani

udayavani youtube

ಮಂಗಳೂರು ದೋಣಿ ದುರಂತದಲ್ಲಿ ಮೃತಪಟ್ಟವರಲ್ಲಿ ಅನ್ಸಾರ್ ಎಂಬಾತನ ಮೃತ ದೇಹಕ್ಕಾಗಿ ಹುಡುಕಾಟ

udayavani youtube

ಕುಂದಾಪುರ: ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

udayavani youtube

ಅನಾರೋಗ್ಯಕ್ಕೆ ಕುಗ್ಗದೆ ಕೃಷಿಯಲ್ಲಿ ಬದುಕು ಬದಲಿಸಿಕೊಂಡ ಸಾಧಕ

ಹೊಸ ಸೇರ್ಪಡೆ

2 ವರ್ಷಗಳ ಗರಿಷ್ಠಕ್ಕೆ ಪೆಟ್ರೋಲ್‌ ಬೆಲೆ ಏರಿಕೆ

2 ವರ್ಷಗಳ ಗರಿಷ್ಠಕ್ಕೆ ಪೆಟ್ರೋಲ್‌ ಬೆಲೆ ಏರಿಕೆ

Udupi-2ಜನಸಾಮಾನ್ಯ ಕಲ್ಯಾಣ ಯೋಜನೆ ಅನುಷ್ಠಾನಿಸಿ: ಡಾ| ಎಂ.ಟಿ. ರೆಜು

ಜನಸಾಮಾನ್ಯ ಕಲ್ಯಾಣ ಯೋಜನೆ ಅನುಷ್ಠಾನಿಸಿ: ಡಾ| ಎಂ.ಟಿ. ರೆಜು

Udupi-2″ಮತದಾರರ ಪಟ್ಟಿ ಪಾರದರ್ಶಕವಾಗಿರಲಿ’

“ಮತದಾರರ ಪಟ್ಟಿ ಪಾರದರ್ಶಕವಾಗಿರಲಿ’

r-ashok

ಈ ಬಾರಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ: ಆರ್ ಅಶೋಕ್

bsy

ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೆ ತೀರ್ಮಾನ: ಸಿಎಂ ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.