ಮನೆ ಮರು ನಿರ್ಮಾಣ ಕಾರ್ಯ ಪರಿಶೀಲನೆ

Team Udayavani, Dec 20, 2019, 5:07 PM IST

hv-tdy-01

ಹಾವೇರಿ: ಕರ್ನಾಟಕ ಸರ್ಕಾರದ ವಸತಿ ಇಲಾಖೆ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜಕುಮಾರ ಮೀನಾ ಅವರು ಗುರುವಾರ ಜಿಲ್ಲೆಯ ವಿವಿಧ ನೆರೆ ಸಂತ್ರಸ್ತ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಮನೆ ನಿರ್ಮಾಣ ಕಾರ್ಯ ಆರಂಭ ಕುರಿತಂತೆ ಪರಿಶೀಲನೆ ನಡೆಸಿದರು.

ಶಿಗ್ಗಾವಿ, ಸವಣೂರು, ಹುರಳಿಕೊಪ್ಪಿ, ಕುರುಬರಮಲ್ಲೂರು, ಕುಣಿಮೆಳ್ಳಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರ ಮನೆ ನಿರ್ಮಾಣ ಕುರಿತಂತೆ ಅಧಿಕಾರಿಗಳು ಹಾಗೂ ಸಂತ್ರಸ್ತರೊಂದಿಗೆ ಮಾಹಿತಿ ಪಡೆದರು. ಮಳೆ ಮತ್ತು ನೆರೆಯಿಂದ ಕುಸಿದಿರುವ ಮನೆಗಳನ್ನು ಪುನರ್‌ ನಿರ್ಮಾಣ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳು ಕಾರ್ಯಾದೇಶ ಪತ್ರವನ್ನು ಸಂತ್ರಸ್ತರಿಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮವಹಿಸಿದ್ದಾರೆ. ಕಾರ್ಯಾದೇಶಪತ್ರಗಳು ಸಂತ್ರಸ್ತರಿಗೆ ತಲುಪಿದ ಕುರಿತಂತೆ ಫಲಾನುಭವಿಗಳಿಂದ ಮಾಹಿತಿ ಪಡೆದುಕೊಂಡರು.

ವಸತಿ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಸಂದಾಯವಾಗಿರುವ ಪರಿಹಾರ ಹಣ ಕುರಿತಂತೆ ಫಲಾನುಭವಿಗಳಿಂದ ಮಾಹಿತಿ ಪಡೆದ ಉಸ್ತುವಾರಿ ಕಾರ್ಯದರ್ಶಿ ಮನೋಜಕುಮಾರ, ಪರಿಹಾರ ಹಣ ಜಮೆಯಾಗಿರುವ ಕುರಿತಂತೆ ಸಂತ್ರಸ್ತರ ಬ್ಯಾಂಕ್‌ ಪಾಸ್‌ ಪುಸ್ತಕ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮನೆ ನಿರ್ಮಾಣ ಆರಂಭ ಮಾಡಿದ ಫಲಾನುಭವಿಗಳಿಗೆ ತಕ್ಷಣವೇ ಮನೆ ನಿರ್ಮಾಣ ಆರಂಭ ಮಾಡಿ, ಈಗಾಗಲೇ ನಿಮಗೆ ಮೊದಲ ಕಂತು ಹಣ ಜಮೆಯಾಗಿದೆ. ಎರಡನೇ ಕಂತಿನ ಹಣ ಬಿಡುಗಡೆಗೆ ಇಂದಿನಿಂದಲೇ ಜಿಪಿಎಸ್‌ ಮಾಡಿ ದಾಖಲೆಗಳನ್ನು ನಿಗಮದ ವೆಬ್‌ಸೈಟ್‌ ಗೆ ಅಪ್‌ಲೋಡ್‌ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದರಿಂದ ಎರಡನೇ ಕಂತಿನ ಅನುದಾನ ಬಿಡುಗಡೆಗೆ ಅನುಕೂಲವಾಗಲಿದೆ ಎಂದರು.

ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವತ್ಛತಾ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು. ಕುರಬರಮಲ್ಲಾಪೂರದ ಶುದ್ಧ ನೀರಿನ ಘಟಕ್ಕೆ ಭೇಟಿ ನೀಡಿ ನಳದ ನೀರು ಕುಡಿದು ಪರಿಶೀಲನೆ ನಡೆಸಿದರು. ಹುರಳಿಕೊಪ್ಪ ಗ್ರಾಮದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ತಿಪ್ಪೆಗಳ ಸ್ಥಳಾಂತರ ಹಾಗೂ ಕಸದ ಸಂಸ್ಕರಣೆ ಕುರಿತಂತೆ ಜನರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಗ್ರಾಮಗಳ ಜನರೊಂದಿಗೆ ಮಾತನಾಡಿ, ಕುಡಿಯುವ ನೀರಿನ ಮಿತ ಬಳಕೆ ಹಾಗೂ ಗ್ರಾಮದ ಸ್ವತ್ಛತೆ ಕುರಿತಂತೆ ಗ್ರಾಮಸ್ತರು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಧಿಕಾರಿಗಳೊಂದಿಗೆ ಸಹಕರಿಸಬೇಕು. ಶುದ್ಧ ವಾತಾವರಣ, ಶುದ್ಧ ನೀರು, ಶುದ್ಧ ಪರಿಸರದ ಬಗ್ಗೆ ಜನರು ಕಾಳಜಿ ಹೊಂದಬೇಕು ಎಂದು ಜನರಿಗೆ ತಿಳಿಸಿದರು.

ಜಿಲ್ಲಾಧಿ ಕಾರಿ ಕೃಷ್ಣ ಭಾಜಪೇಯಿ, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿ ಕಾರಿ ಎನ್‌ .ತಿಪ್ಪೇಸ್ವಾಮಿ, ಸವಣೂರು ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಿಪಂ ಸಹಾಯಕ ಕಾರ್ಯದರ್ಶಿ ಜಾಫರ್‌ ಸುತಾರ್‌, ಶಿಗ್ಗಾವಿ ಹಾಗೂ ಸವಣೂರ ತಹಶೀಲ್ದಾರ್‌ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.