ನೆರೆಗೆ ನೂರಾರು ಕೋಟಿ ಬೆಳೆ ಹಾನಿ


Team Udayavani, Aug 25, 2019, 10:59 AM IST

hv-tdy-1

ಹಾವೇರಿ: ಇತ್ತೀಚೆಗೆ ಜಿಲ್ಲೆಯಲ್ಲಿ ಸೃಷ್ಟಿಯಾದ ನೆರೆ ಹಾಗೂ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಅಂದಾಜು ಒಂದು ನೂರು ಕೋಟಿ ರೂ.ಗಳಷ್ಟು ಬೆಳೆ ಹಾನಿಯಾಗಿದೆ.

ಕೃಷಿ ಬೆಳೆಗೆ ಸಂಬಂಧಿಸಿ 73.21 ಕೋಟಿ ರೂ., ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ 10.30 ಕೋಟಿ ರೂ., ರೇಷ್ಮೆ ಬೆಳೆಗೆ ಸಂಬಂಧಿಸಿ 10.43 ಲಕ್ಷ ರೂ. ಸೇರಿದಂತೆ ಒಟ್ಟು 83.61 ಕೋಟಿ ರೂ. ಹಾಗೂ ಮಣ್ಣು ಹಾನಿ ಸೇರಿ ಅಂದಾಜು ನೂರು ಕೋಟಿ ರೂ.ಗಳಿಗೂ ಅಧಿಕ ಹಾನಿಯಾಗಿದೆ ಎಂದು ಕೃಷಿ ಇಲಾಖೆ ಪ್ರಾಥಮಿಕ ವರದಿ ಸಿದ್ಧಪಡಿಸಿದೆ.

ಜಿಲ್ಲೆಯಲ್ಲಿ 87618 ಹೆಕ್ಟೇರ್‌ ಕೃಷಿ ಬೆಳೆ ಪ್ರದೇಶ ಹಾನಿಯಾಗಿದ್ದರೆ, 8215 ಹೆಕ್ಟೇರ್‌ ತೋಟಗಾರಿಕೆ ಬೆಳೆ ಪ್ರದೇಶ ಹಾನಿಯಾಗಿದೆ. 53.84 ಹೆಕ್ಟೇರ್‌ ರೇಷ್ಮೆ ಬೆಳೆ, 30 ರೇಷ್ಮೆ ಸಾಕಾಣಿಕೆ ಮನೆಗಳು, 3450 ಮೊಟ್ಟೆಗಳು ಹಾನಿಯಾಗಿವೆ. ಬಿತ್ತನೆಯಾದ ಒಟ್ಟು 3,11,462 ಹೆಕ್ಟೇರ್‌ ಕೃಷಿ ಬೆಳೆಗಳಲ್ಲಿ 87,681 ಹೆಕ್ಟೇರ್‌ ಪ್ರದೇಶದ ಬೆಳೆ, 44,481ಹೆಕ್ಟೇರ್‌ ತೋಟಗಾರಿಕೆ ಪ್ರದೇಶದಲ್ಲಿ 8215 ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿದೆ.

ತಾಲೂಕಾವಾರು ಕೃಷಿ ಹಾನಿ: ಹಾವೇರಿ ತಾಲೂಕಿನಲ್ಲಿ ಬಿತ್ತನೆಯಾದ 55410 ಹೆಕ್ಟೇರ್‌ ಬಿತ್ತನೆ ಪ್ರದೇಶದಲ್ಲಿ 9742 ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿ 662 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಹಾನಗಲ್ಲ ತಾಲೂಕಿನಲ್ಲಿ 41,526 ಹೆಕ್ಟೇರ್‌ ಬಿತ್ತನೆ ಪ್ರದೇಶದಲ್ಲಿ 18,010 ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿ 1843 ಲಕ್ಷ ರೂ. ನಷ್ಟವಾಗಿದೆ. ಶಿಗ್ಗಾವಿ ತಾಲೂಕಿನಲ್ಲಿ 36933 ಹೆಕ್ಟೇರ್‌ ಬಿತ್ತನೆ ಪ್ರದೇಶದಲ್ಲಿ 26,047 ಹೆಕ್ಟೇರ್‌ ಪ್ರದೇಶದ ಬೆಳೆ ಹಾಳಾಗಿ 2315 ಲಕ್ಷ ರೂ. ಹಾನಿಯಾಗಿದೆ. ಬ್ಯಾಡಗಿ ತಾಲೂಕಿನ 30,292 ಹೆಕ್ಟೇರ್‌ ಬಿತ್ತನೆ ಪ್ರದೇಶದಲ್ಲಿ 7994 ಹೆಕ್ಟೇರ್‌ ಪ್ರದೇಶದ ಬೆಳೆ ಹಾಳಾಗಿದ್ದು 591 ಲಕ್ಷ ರೂ. ಗಳಷ್ಟು ನಷ್ಟವಾಗಿದೆ. ಹಿರೇಕೆರೂರು ತಾಲೂಕಿನಲ್ಲಿ 50,374 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಅದರಲ್ಲಿ 1653 ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿದ್ದು 112 ಲಕ್ಷ ರೂ.ಗಳಷ್ಟು ನಷ್ಟ ಸಂಭವಿಸಿದೆ. ರಾಣಿಬೆನ್ನೂರು ತಾಲೂಕಿನಲ್ಲಿ 54,316 ಹೆಕ್ಟೇರ್‌ ಪ್ರದೇಶದಲ್ಲಿ 5349 ಹೆಕ್ಟೇರ್‌ ಪ್ರದೇಶದ ಬೆಳೆ ಹಾಳಾಗಿ 508 ಲಕ್ಷ ರೂ.ಗಳಷ್ಟು ಹಾನಿಯಾಗಿದೆ.

ತಾಲೂಕಾವಾರು ತೋಟಗಾರಿಕೆ ಹಾನಿ: ಹಾವೇರಿ ತಾಲೂಕಿನ 13,721 ಹೆಕ್ಟೇರ್‌ ತೋಟಗಾರಿಕೆ ಪ್ರದೇಶದಲ್ಲಿ 3056 ಹೆಕ್ಟೇರ್‌ನ ಬೆಳೆ ಹಾಳಾಗಿದ್ದು ಅಂದಾಜು 426 ಲಕ್ಷ ರೂ.ಗಳಷ್ಟು ನಷ್ಟವಾಗಿದೆ. ಹಾನಗಲ್ಲ ತಾಲೂಕಿನ 5915 ಹೆಕ್ಟೇರ್‌ ಪ್ರದೇಶ ತೋಟಗಾರಿಕೆ ಬೆಳೆಯಲ್ಲಿ 1144 ಹೆಕ್ಟೇರ್‌ಗಳಷ್ಟು ಬೆಳೆ ಹಾಳಾಗಿ 159 ಲಕ್ಷ ರೂ.ಗಳಷ್ಟು ನಷ್ಟವಾಗಿದೆ. ಸವಣೂರು ತಾಲೂಕಿನ 2596 ಹೆಕ್ಟೇರ್‌ ತೋಟಗಾರಿಕೆ ಪ್ರದೇಶದಲ್ಲಿ 606 ಹೆಕ್ಟೇರ್‌ ಪ್ರದೇಶದ ಬೆಳೆ ಹಾಳಾಗಿದ್ದು 84.33 ಲಕ್ಷ ರೂ.ಗಳಷ್ಟು ಹಾನಿಯಾಗಿದೆ. ಶಿಗ್ಗಾವಿ ತಾಲೂಕಿನ 5151 ಹೆಕ್ಟೇರ್‌ ತೋಟಗಾರಿಕೆ ಪ್ರದೇಶದಲ್ಲಿ 265 ಹೆಕ್ಟೇರ್‌ ಪ್ರದೇಶದ ಬೆಳೆ ಹಾಳಾಗಿ 22.64 ಲಕ್ಷ ರೂ.ಗಳಷ್ಟು ಹಾನಿ ಸಂಭವಿಸಿದೆ.

ಬ್ಯಾಡಗಿ ತಾಲೂಕಿನಲ್ಲಿ 1492 ಹೆಕ್ಟೇರ್‌ ಪ್ರದೇಶದ ತೋಟಗಾರಿಕೆ ಬೆಳೆಯಲ್ಲಿ 619 ಹೆಕ್ಟೇರ್‌ ಪ್ರದೇಶದ ಬೆಳೆ ಹಾಳಾಗಿದ್ದು ಹಾನಿ ಮೌಲ್ಯ 75.73 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಹಿರೇಕೆರೂರು ತಾಲೂಕಿನ 2868 ಹೆಕ್ಟೇರ್‌ ತೋಟಗಾರಿಕೆ ಪ್ರದೇಶದಲ್ಲಿ 616 ಹೆಕ್ಟೇರ್‌ ಪ್ರದೇಶದ ಬೆಳೆ ಹಾಳಾಗಿದ್ದು 89.19 ಲಕ್ಷ ರೂ.ಗಳಷ್ಟು ಹಾನಿ ಸಂಭವಿಸಿದೆ. ರಾಣಿಬೆನ್ನೂರು ತಾಲೂಕಿನ 13105 ಹೆಕ್ಟೇರ್‌ ತೋಟಗಾರಿಕೆ ಪ್ರದೇಶದಲ್ಲಿ 1908 ಹೆಕ್ಟೇರ್‌ ಪ್ರದೇಶದ ಬೆಳೆ ಹಾಳಾಗಿದ್ದು 180 ಲಕ್ಷ ರೂ.ಗಳಷ್ಟು ನಷ್ಟ ಸಂಭವಿಸಿದೆ.

2550 ಹೆಕ್ಟೇರ್‌ ಮಣ್ಣು ಹಾನಿ!: ಇದಲ್ಲದೇ ನದಿ ಪ್ರವಾಹದಿಂದ ಮಣ್ಣು ತುಂಬಿಕೊಂಡು 2616 ಹೆಕ್ಟೇರ್‌ ಕೃಷಿ ಭೂಮಿ ಹಾಗೂ ನೆರೆಯಿಂದ ಮಣ್ಣು ಕೊಚ್ಚಿ ಹೋಗಿ 2550 ಹೆಕ್ಟೇರ್‌ನಷ್ಟು ಮಣ್ಣು ಹಾನಿಯಾಗಿದೆ. ಹಾನಿಯಾಗಿರುವ ಬೆಳೆಗಳಲ್ಲಿ ಮೆಕ್ಕೆಜೋಳ, ಹತ್ತಿ, ಭತ್ತ, ಶೇಂಗಾ, ಕಬ್ಬು ಹಾಗೂ ಸೊಯಾಬಿನ್‌ ಪ್ರಮುಖವಾಗಿವೆ. ಈ ಬಾರಿ ಮುಂಗಾರು ವಿಳಂಬವಾಗಿದ್ದರಿಂದ ಜುಲೈ ಎರಡನೇ ವಾರದಲ್ಲಿ ಒಟ್ಟು 311462 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಇದರಲ್ಲಿ 1.93 ಲಕ್ಷ ಹೆಕ್ಟೇರ್‌ ಮೆಕ್ಕೆಜೋಳ, 51,097 ಹೆಕ್ಟೇರ್‌ ಹತ್ತಿ, 33,282 ಹೆಕ್ಟೇರ್‌ ಭತ್ತ, 19,085 ಹೆಕ್ಟೇರ್‌ ಶೇಂಗಾ, 6618 ಹೆಕ್ಟೇರ್‌ ಕಬ್ಬು, 9083 ಹೆಕ್ಟೇರ್‌ ಸೊಯಾಬಿನ್‌ ಬಿತ್ತನೆಯಾಗಿತ್ತು. ಬಿತ್ತಿದ ಎರಡೇ ವಾರದಲ್ಲಿ ಅತಿವೃಷ್ಟಿ ಹಾಗೂ ನೆರೆ ಬಂದು ಶೇ.40ಕ್ಕೂ ಹೆಚ್ಚು ಬೆಳೆ ಹಾನಿಯಾಗಿದೆ ಎಂದು ಕೃಷಿ ಅಧಿಕಾರಿ ಮಾಹಿತಿ ನೀಡಿದ್ದಾರೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.