Udayavni Special

ಸತ್ತವನು ನಾನಲ್ಲ, ಮೃತದೇಹ ಯಾರಧ್ದೋ ಗೊತ್ತಿಲ್ಲ!

Team Udayavani, Aug 15, 2017, 10:57 AM IST

15-STATE-7.jpg

ಹಾವೇರಿ/ರಾಣಿಬೆನ್ನೂರು: ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾನೆಂದು ಭಾವಿಸಲಾಗಿದ್ದ ವ್ಯಕ್ತಿ ಎಂಟು ತಿಂಗಳ ಬಳಿಕ ದಿಢೀರನೇ ಪ್ರತ್ಯಕ್ಷನಾಗಿ “ತಾನು ಸತ್ತಿಲ್ಲ’ ಎಂದು ಅಧಿಕಾರಿಗಳ ಎದುರು ಹೇಳಿದ್ದಾನೆ!

ಆಶ್ಚರ್ಯವಾದ್ರೂ ದಿಟ. ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಣಿಬೆನ್ನೂರು ಬಸ್‌ ಘಟಕದಲ್ಲಿ ಜನವರಿ 1ರಂದು ರಾತ್ರಿ ಬಸ್‌ಗೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿತ್ತು. ಕರಕಲಾದ ಬಸ್ಸಿನೊಳಗೆ ಭಸ್ಮವಾದ ಒಂದು ದೇಹವೂ ಪತ್ತೆಯಾಗಿತ್ತು. ಈ ದೇಹ ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿ ಲಿಂಗರಾಜ ಪಾಲಾಕ್ಷ ಬೆಳಗುತ್ತಿ (32) ಅವರದ್ದೆಂದು ಅಂದಾಜಿಸಲಾಗಿತ್ತು. ಘಟಕದಲ್ಲಿ ಡೀಸೆಲ್‌ ಕಳ್ಳತನ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಯಲು ಯತ್ನಿಸಿದಾಗ ದುಷ್ಕರ್ಮಿಗಳು ತಮ್ಮ ಪತಿಯನ್ನು ಬಸ್ಸಿನಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ. ಈ ಕುರಿತು ತನಿಖೆ ಮಾಡುವಂತೆ ಲಿಂಗರಾಜ ಅವರ ಪತ್ನಿ ನೇತ್ರಾವತಿ ಹಾಗೂ ತಾಯಿ ನೀಲಮ್ಮ ಬೆಳಗುತ್ತಿ ಹಲಗೇರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸ್‌ ತನಿಖೆ ಕೂಡ ಮುಂದುವರಿದಿತ್ತು.

ನಾನೇ ಸರ್‌ ಅವನು: ಈ ಮಧ್ಯೆ ಭಾನುವಾರ ಹುಬ್ಬಳ್ಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಪ್ರತ್ಯಕ್ಷನಾದ ಲಿಂಗರಾಜ ಬೆಳಗುತ್ತಿ, “ಸರ್‌, ನಾನೇ ರಾಣಿಬೆನ್ನೂರು ಘಟಕದ ಭದ್ರತಾ ಸಿಬ್ಬಂದಿ ಲಿಂಗರಾಜ. ನಾನು ಸತ್ತಿಲ್ಲ’ ಎಂದು ಹೇಳಿದ್ದಾನೆ. ಅಧಿಕಾರಿಗಳು ಈತನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ದಾಖಲೆಗಳ ಪ್ರಕಾರ ವ್ಯಕ್ತಿ ಸತ್ತು ಎಂಟು ತಿಂಗಳಾಗಿವೆ. ಮೃತನ ಅಂತ್ಯ ಸಂಸ್ಕಾರವೂ ನಡೆದು ಹೋಗಿದೆ. ಈ ವ್ಯಕ್ತಿಯ ಸಂಬಂಧಿಕರಿಗೆ ಸರ್ಕಾರದಿಂದ ಆರ್ಥಿಕ ನೆರವು ಕೊಡಲಾಗಿದೆ. 

ಮನೆ ಮಂದಿ ಕಣ್ಣೀರಿನ ಕೋಡಿಯನ್ನೇ ಹರಿಸಿದ್ದೂ ಆಗಿದೆ. ಈಗ ದಿಢೀರನೇ ಪ್ರತ್ಯಕ್ಷನಾದ ಲಿಂಗರಾಜ ಎಲ್ಲರಲ್ಲಿಯೂ ಆಶ್ಚರ್ಯ ಮೂಡಿಸಿದ್ದಾನೆ. ಲಿಂಗರಾಜ ಬೆಳಗುತ್ತಿ ಇಷ್ಟು ದಿನ ಎಲ್ಲಿದ್ದ? ಯಾರಾದರೂ ಅಪಹರಣ ಮಾಡಿದ್ದರೆ? ಬಸ್‌ ಘಟಕದಲ್ಲಿ ಅಗ್ನಿ ದುರಂತ ಹೇಗೆ ಸಂಭವಿಸಿತು? ಬಸ್‌ನಲ್ಲಿದ್ದ ಕರಕಲಾಗಿದ್ದ ಶವ ಯಾರದ್ದು? ಇಂಬಿತ್ಯಾದಿ ಪ್ರಶ್ನೆಗಳಿಗೆ ಪೊಲೀಸರ ತನಿಖೆಯಿಂದಲೇ ಉತ್ತರ ಸಿಗಬೇಕಿದೆ. 

 ಘಟನಾ ಸ್ಥಳದಲ್ಲಿ ಸಿಕ್ಕ ದೇಹದ ಡಿಎನ್‌ಎ ಪರೀಕ್ಷೆ ವರದಿ ಎರಡೂರು ದಿನಗಳ ಹಿಂದಷ್ಟೇ ಬಂದಿದ್ದು, ಅದು ಲಿಂಗರಾಜನಿಗೆ ಹೊಂದಾಣಿಕೆಯಾಗಿಲ್ಲ ಎಂಬುದು ಪೊಲೀಸ್‌ ಇಲಾಖೆಗೆ ತಿಳಿದಿತ್ತು. ತನಿಖೆ ಮುಂದುವರಿಯುತ್ತಿದ್ದಂತೆ ಲಿಂಗರಾಜ ಸ್ವತಃ ನಮ್ಮ ಎದುರು ಬಂದಿದ್ದಾನೆ. ಪ್ರಾಥಮಿಕ ವಿಚಾರಣೆಯಿಂದ ಬಂದಿರುವ ವ್ಯಕ್ತಿ ಲಿಂಗರಾಜ ಬೆಳಗುತ್ತಿಯೇ ಆಗಿದ್ದಾನೆ ಎಂಬುದು ಖಚಿತಪಟ್ಟಿದೆ. ಈವರೆಗೆ ಆತ ಎಲ್ಲಿದ್ದ? ಏಕಿದ್ದ? ಮುಂತಾದ ವಿಚಾರಗಳು ವಿಚಾರಣೆ ಪೂರ್ಣಗೊಂಡ ಬಳಿಕವಷ್ಟೇ ಗೊತ್ತಾಗಲಿವೆ. 
ಕೆ. ಪರಶುರಾಮ, ಎಸ್ಪಿ, ಹಾವೇರಿ

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.