ಕುಂದುಕೊರತೆ ಸ್ವಿಕಾರ ಪೆಟ್ಟಿಗೆ ಅಳವಡಿಸಿ

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೇಜರ್‌ ಮಣಿವಣ್ಣನ್‌ ಸೂಚನೆ

Team Udayavani, May 30, 2022, 11:25 AM IST

7

ಹಾವೇರಿ: ಸಮಸ್ಯೆಗಳು, ಕುಂದುಕೊರತೆಗಳ ನಿವಾರಣೆಗಾಗಿ ಸರ್ಕಾರಿ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರ ಬಗ್ಗೆ ಚಿಂತನೆ ಇರಲಿ. ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸದಿದ್ದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಈ ಬಗ್ಗೆ ಎಲ್ಲ ಇಲಾಖಾ ಅಧಿಕಾರಿಗಳು ಗಮನ ಹರಿಸಿ ಕೆಲಸ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೇಜರ್‌ ಮಣಿವಣ್ಣನ್‌ ಸೂಚನೆ ನೀಡಿದರು.

ರವಿವಾರ ಬ್ಯಾಡಗಿ ತಹಶೀಲ್ದಾರ್‌ ಕಚೇರಿ, ತಾಲೂಕು ಪಂಚಾಯತಿ ಕಚೇರಿ ಹಾಗೂ ಪುರಸಭೆ ಕಚೇರಿಗಳಿಗೆ ಭೇಟಿ ನೀಡಿ ಕಚೇರಿಯ ಸ್ವಚ್ಛತೆ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣೆಗೆ ಕೈಗೊಂಡಿರುವ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.

ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ಸ್ವೀಕಾರಕ್ಕೆ ಜಿಲ್ಲೆಯ ಎಲ್ಲ ತಹಶೀಲ್ದಾರ್‌ ಹಾಗೂ ತಾಲೂಕು ಪಂಚಾಯತಿ ಕಚೇರಿಗಳಲ್ಲಿ ಸಾರ್ವಜನಿಕ ಕುಂದುಕೊರತೆ ಸ್ವೀಕಾರ ಪೆಟ್ಟಿಗೆ ಅಳವಡಿಸಿ, ತಿಂಗಳಿಗೊಮ್ಮೆ ಸಾರ್ವಜನಿಕರ ಎದುರು ತೆರೆದು ಸಮಸ್ಯೆಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಅಲ್ಲದೇ, ತಹಶೀಲ್ದಾರ್‌ ಕಚೇರಿಯ ವಿವಿಧ ವಿಷಯಗಳ ನಿರ್ವಾಹಕರ ಕಡತ ವಿಲೇವಾರಿ ಕುರಿತಂತೆ ಪರಿಶೀಲನೆ ನಡೆಸಿದರು. ಬೆಳೆ ವಿಮೆ ನೋಂದಣಿಗೆ ನೆರವಾಗಲು ಅನುಕೂಲವಾಗುವಂತೆ ಹೆಲ್ಪ ಡೆಸ್ಕ್ಗಳ ಸಂಪರ್ಕ ಸಂಖ್ಯೆಯನ್ನು ಕೃಷಿ ಇಲಾಖೆ ಸೇರಿದಂತೆ ತಹಶೀಲ್ದಾರ್‌ ಕಚೇರಿ ಹೊರ ಆವರಣದಲ್ಲಿ ನಾಮಫಲಕ ಅಳವಡಿಸುವಂತೆ ಸೂಚನೆ ನೀಡಿದರು.

ಎಸಿಬಿ ನಂಬರ್‌ ಚೆಕ್‌: ಬ್ಯಾಡಗಿ ಪುರಸಭೆ ಕಚೇರಿ ಮುಂಭಾಗದಲ್ಲಿ ಅಳವಡಿಸಲಾದ ಭ್ರಷ್ಟಾಚಾರ ನಿಗ್ರಹ ದಳದ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರವಾಣಿಗಳು ಸಕ್ರಿಯವಾಗಿರುವ ಕುರಿತಂತೆ ಪರಿಶೀಲನೆ ನಡೆಸಿದರು.

ತಹಶೀಲ್ದಾರ್‌ ತಿಪ್ಪೇಸ್ವಾಮಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಹಾಗೂ ಪುರಸಭೆ ಮುಖ್ಯಾಕಾರಿಗಳು, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಫಲಾನುಭವಿಗಳಿಗೆ ಪರಿಹಾರ ಹಣ ನೀಡಲು ಸೂಚನೆ: ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಹಣ ಮಿಸ್‌ ಮ್ಯಾಚ್‌ ಕಾರಣ ನಿಜವಾದ ಫಲಾನುಭವಿಗೆ ತಲುಪದೇ ಬೇರೆ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಹಣ ಹೋಗಿರುವ ಕುರಿತಂತೆ ಸಾರ್ವಜನಿಕರೊಬ್ಬರ ದೂರುಗಳ ಹಿನ್ನೆಲೆಯಲ್ಲಿ, ಒಂದು ವಾರದೊಳಗಾಗಿ ಪರಿಶೀಲನೆ ನಡೆಸಿ ನೈಜ ಫಲಾನುಭವಿಗಳಿಗೆ ಪರಿಹಾರ ಹಣ ಪಾವತಿಗೆ ಕ್ರಮ ವಹಿಸುವಂತೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೀರಭದ್ರಪ್ಪ ಅವರಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.