ಕೋವಿಡ್ ನಿಂದ ಮೃತಪಟ್ಟ ಮಹಿಳೆ: ಅಂತ್ಯಕ್ರಿಯೆ ನಡೆಸಲು ಬಾರದ ಆರೋಗ್ಯ ಇಲಾಖೆ ಸಿಬ್ಬಂದಿ

Team Udayavani, Apr 28, 2021, 7:16 PM IST

ಕೋವಿಡ್ ನಿಂದ ಮೃತಪಟ್ಟ ಮಹಿಳೆ: ಅಂತ್ಯಕ್ರಿಯೆ ನಡೆಸಲು ಬಾರದ ಆರೋಗ್ಯ ಇಲಾಖೆ ಸಿಬ್ಬಂದಿ

ಹಾವೇರಿ: ಕೋವಿಡ್ ಸೋಂಕಿನಿಂದ ಮಹಿಳೆಯೊಬ್ಬಳು ಮೃತಪಟ್ಟಿದ್ದು, ಅಂತ್ಯಕ್ರಿಯೆ ನಡೆಸಲು ಆರೋಗ್ಯ ಇಲಾಖೆ ಸಿಬ್ಬಂದಿ ಆಗಮಿಸದ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ ಘಟನೆ ಬುಧವಾರ ಹಾನಗಲ್ಲ ತಾಲೂಕಿನ ಮಲಗುಂದ ಗ್ರಾಮದಲ್ಲಿ ನಡೆದಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಡುವವರ ಸಂಖ್ಯೆ ಅಧಿಕಗೊಂಡಿದ್ದು, ನಿತ್ಯ ಸರಾಸರಿ 2-3 ಸೋಂಕಿತರು ಮೃತರಾಗುತ್ತಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ 50 ವರ್ಷದ ಮಹಿಳೆಯೋರ್ವಳು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಕೋವಿಡ್ ನಿಯಮಾನುಸಾರ ಮೃತದೇಹವನ್ನು ಪ್ಯಾಕ್ ಮಾಡಿಕೊಂಡು ಆಂಬ್ಯುಲನ್ಸ್‌ನಲ್ಲಿ ಮಲಗುಂದ ಗ್ರಾಮಕ್ಕೆ ತರಲಾಗಿತ್ತು. ಆದರೆ ಕೋವಿಡ್ ಆತಂಕದಿಂದಾಗಿ ಸಂಬಂಧಿಕರು ಹಾಗೂ ಗ್ರಾಮಸ್ಥರು ಅಂತ್ಯಕ್ರಿಯೆ ಮಾಡಲು ಹಿಂದೇಟು ಹಾಕಿದ್ದರಿಂದ ಅಂಬ್ಯುಲೆನ್ಸ್ ಚಾಲಕ ಸುಮಾರು 2 ಗಂಟೆಗಳ ಕಾಲ ಮೃತದೇಹವನ್ನು ವಾಹನದಲ್ಲಿಯೇ ಇಟ್ಟುಕೊಂಡು ಕಾಲಕಳೆಯುವಂತಾಯಿತು.

ಇದನ್ನೂ ಓದಿ : ಕಾಳ್ಗಿಚ್ಚಿನಂತೆ ಹಬ್ಬಿದ ಕೋವಿಡ್ : ರಾಜ್ಯದಲ್ಲಿಂದು 39047 ಪ್ರಕರಣಗಳು ಪತ್ತೆ

ಅಲ್ಲದೇ ಮೃತದೇಹದ ಅಂತ್ಯಕ್ರಿಯೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ, ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಯಾರೋಬ್ಬರು ಸಹ ಬಾರದ ಹಿನ್ನೆಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದರು. ಸ್ಥಳಕ್ಕೆ ಆಡೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲು ಮೃತ ಮಹಿಳೆಯ ಸಂಬಂಧಿಕರು ನಾವೇ ಅಂತ್ಯಸಂಸ್ಕಾರ ಮಾಡುತ್ತೇವೆ ಎಂದು ತಿಳಿಸಿದ್ದರಿಂದ ಪಿಪಿಇ ಕಿಟ್‌ಗಳೊಂದಿಗೆ ಅಂಬ್ಯುಲೆನ್ಸ್‌ನಲ್ಲಿ ಮೃತದೇಹವನ್ನು ಗ್ರಾಮಕ್ಕೆ ಕಳುಹಿಸಿ ಕೊಡಲಾಗಿತ್ತು. ಗ್ರಾಮಕ್ಕೆ ಹೋದ ನಂತರ ಸಂಬಂಧಿಕರು ಅಂತ್ಯಸಂಸ್ಕಾರಕ್ಕೆ ಹಿಂದೇಟು ಹಾಕಿದ್ದಾರೆ ಇದರಿಂದ ಸ್ವಲ್ಪ ಗೊಂದಲ ಉಂಟಾಯಿತು. ನಂತರ ತಾಲೂಕಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.-ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಡಿಎಚ್‌ಒ ಹಾವೇರಿ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.