ಸುಸಜ್ಜಿತ ಕಟ್ಟಡದಲ್ಲಿ ಚಿಕಿತ್ಸೆ ಅಪೂರ್ಣ


Team Udayavani, Mar 9, 2020, 4:02 PM IST

hv-tdy-1

ರಾಣಿಬೆನ್ನೂರ: ಉತ್ತರ ಕರ್ನಾಟಕದ ಹೆಬ್ಟಾಗಿಲು ಎಂದೆ ಕರೆಯಲ್ಪಡುವ ಹಾವೇರಿ ಜಿಲ್ಲೆ ರಾಣಿಬೆನ್ನೂರ ನಗರದಲ್ಲಿ ಹಲಗೇರಿ ರಸ್ತೆಯ ಸಾರ್ವಜನಿಕ ಆಸ್ಪತ್ರೆ ಹಾಗೂ ಇಲ್ಲಿನ ಸ್ಟೇಷನ್‌ ರಸ್ತೆಯ ಸಾರ್ವಜನಿಕ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ಹೆಚ್ಚಾಗಿ ಬಡ ರೋಗಿಗಳು ಚಿಕಿತ್ಸೆ ಪಡೆಯುವುದು ಸಾಮಾನ್ಯ. ಆದರೆ, ಇಲ್ಲಿ ಕೆಲವು ಮೂಲಭೂತ ಸೌಲಭ್ಯ ಕೊರತೆಯಿಂದಾಗಿ ರೋಗಿಗಳ ನಿತ್ಯ ಪರದಾಟ ತಪ್ಪಿಲ್ಲ.

2017ರಲ್ಲಿ ಗ್ರಾಮೀಣ ಮೂಲಭೂತ ಸೌಲಭ್ಯ ನಬಾರ್ಡ್‌ ಯೋಜನೆಯಡಿ 8.5 ಕೋಟಿ ರೂ. ಅನುದಾನದಲ್ಲಿ ಹಲಗೇರಿ ರಸ್ತೆಯ ಸಾರ್ವಜನಿಕ ಆಸ್ಪತ್ರೆಯನ್ನು 50 ಹಾಸಿಗೆಯಿಂದ 100 ಹಾಸಿಗೆ ಮೇಲ್ದರ್ಜೆಗೇರಿಸಲು ವಿಧಾನ ಪರಿಷತ್‌ ಮಾಜಿ ಸಭಾಪತಿ ಕೆ.ಬಿ. ಕೋಳಿವಾಡ ಭೂಮಿಪೂಜೆ ನೆರವೇರಿಸಿದ್ದರು. ಕಟ್ಟಡ ಕಾಮಗಾರಿ 2019ರಲ್ಲಿ ಸಂಪೂರ್ಣ ಮುಗಿದು ಸುಂದರ ಹಾಗೂ ಸುಸಜ್ಜಿತ ಆಸ್ಪತ್ರೆಯಾಗಿ ಕಂಗೊಳಿಸುತ್ತಿದೆ. ಆದರೆ, 50 ರಿಂದ 100 ಹಾಸಿಗೆ ಪರಿವರ್ತಿಸುವ ಕಾರ್ಯ ಮಾತ್ರ ಇಂದಿಗೂ ಕೈಗೂಡಿಲ್ಲ. ಈ ಕುರಿತು ಸ್ಥಳೀಯ ಆಡಳಿತ ವೈದ್ಯಾಧಿಕಾರಿಗಳು ಸರ್ಕಾರಕ್ಕೆ ಕಳುಹಿಸಿದ್ದ ಪ್ರಸ್ತಾವನೆ ಸಚಿವಾಲಯದಲ್ಲಿ ಧೂಳು ಹಿಡಿದಿದ್ದು, ಈ ಕುರಿತು ಕಾಯಕಕ್ಕೆ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ.

ಸಾರ್ವಜನಿಕರು ಆಸ್ಪತ್ರೆಯ ಹೊರನೋಟ ಕಂಡು ಉತ್ತಮ ಚಿಕಿತ್ಸೆ ಸಿಗಬಹುದು ಎಂದು ಒಳಗೆ ಬಂದರೆ ಅವರ ನಿರೀಕ್ಷೆ ಹುಸಿಯಾಗಲಿದ್ದು, ಸೂಕ್ತ ಸ್ಪಂದನೆ ಬದಲಾಗಿ ಸಮಸ್ಯೆಗಳ ಸರಮಾಲೆಯೇ ಸ್ವಾಗತಿಸುವುದು ಪಕ್ಕಾ.

ವೈದ್ಯರು ಮತ್ತು ಸಿಬ್ಬಂದಿ ಕೊರತೆ: 9 ವೈದ್ಯರು ಕಾರ್ಯ ನಿರ್ವಹಿಸಬೇಕಿದ್ದು, ಇನ್ನು ಇಬ್ಬರು ವೈದ್ಯರ 2 ಹುದ್ದೆ ಖಾಲಿ ಇದೆ. ಸ್ಟಾಪ್‌ನರ್ಸ್‌ 18, 5 ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಯಲ್ಲಿ 3 ಸಹಾಯಕರು ಸೇವೆ ಸಲ್ಲಿಸುತ್ತಿದ್ದು, ಇನ್ನೂ 2 ಹುದ್ದೆ ಖಾಲಿ ಇವೆ. 1 ಲ್ಯಾಬ್‌ ಟೆಕ್ನಿಷಿಯನ್‌ ಹುದ್ದೆ ಖಾಲಿ ಇದೆ. ಇಲ್ಲಿ ರಕ್ತ ನಿಧಿ  ಕೇಂದ್ರ ಇಲ್ಲ, ಆದರೆ, ರಕ್ತ ಸಂಗ್ರಹಸಿಡುವ ಶೀಥಲೀಕರಣ ಘಟಕ ಇದೆ. ಡಯಾಲಿಸಿಸ್‌ ಘಟಕವಿದ್ದು, ತಜ್ಞ ವೈದ್ಯರ ಹುದ್ದೆ ಇಲ್ಲ. ಇದರಿಂದ ಡಯಾಲಿಸಿಸ್‌ ಮಾಡಿಸಿಕೊಳ್ಳುವ ರೋಗಿಗಳಿಗೆ ಪೂರ್ಣ ಪ್ರಮಾಣದ ಚಿಕಿತ್ಸೆ ದೊರೆಯದ ಪರಿಣಾಮ ಖಾಸಗಿ ಆಸ್ಪತ್ರೆಗೆ ತೆರಳುವಂತಾಗಿದೆ.

ಹೊರ ರೋಗಿಗಳಾಗಿ ಚಿಕಿತ್ಸೆ: ಇಲ್ಲಿ ಸುಮಾರ ಪ್ರತಿದಿನ 300 ರೋಗಿಗಳು ಹೊರ ರೋಗಿಗಳಾಗಿ ಉಪಚಾರ ಪಡೆಯುತ್ತಿದ್ದು, ಅವರಲ್ಲಿ 10 ರಿಂದ 20 ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಾರೆ. ಒಟ್ಟು 50 ರೋಗಿಗಳಿಗೆ ಮಾತ್ರ ಅವಕಾಶವಿದ್ದು, ಮಿಕ್ಕಿದ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ರವಾನಿಸಲಾಗುತ್ತದೆ. ಇದರಿಂದ ಬಡರೋಗಿಗಳಿಗೆ ತೊಂದರೆಯಾಗುತ್ತಿದೆ.

ಹಲಗೇರಿ ರಸ್ತೆಯ ಸಾರ್ವಜನಿಕ ಆಸ್ಪತ್ರೆ ಹಾಗೂ ಇಲ್ಲಿನ ರೈಲ್ವೆ ಸ್ಟೇಷನ್‌ ರಸ್ತೆಯ ಸಾರ್ವಜನಿಕ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ಒಬ್ಬರೇ ಆಡಳಿತ ವೈದ್ಯಾಧಿಕಾರಿ ಇದ್ದು, ಇಲ್ಲಿನ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸುಮಾರು 100 ಮಕ್ಕಳು ಹೊರರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 20ಕ್ಕೂ ಅಧಿಕ ಮಕ್ಕಳು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 50ಕ್ಕೂ ಅಧಿಕ ಸಂಖ್ಯೆಯಲ್ಲಿ ಗರ್ಭಿಣಿಯರು ಹೆರಿಗೆ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬರು ಮಕ್ಕಳ ತಜ್ಞರಾದ ಡಾ| ಚಂಪಾ ಮಾವಿನತೋಪ ಎರಡು ಆಸ್ತೆಗಳಲ್ಲಿ ನಿರಾಶವಾಗಿ ಸೇವೆ ಸಲ್ಲಿಸುತ್ತಾರೆ ಎಂಬುದು ತಾಯಂದಿರ ಅಭಿಪ್ರಾಯವಾಗಿದೆ.

ಪ್ರಯೋಗಾಲಯ ಕೊರತೆ: ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪೂರ್ಣಪ್ರಮಾಣದ ಪ್ರಯೋಗಾಲಯವೇ ಇಲ್ಲ. ಮಕ್ಕಳ ಹೆಚ್ಚಿನ ರಕ್ತ ತಪಾಸಣೆಗೆ 1 ಕಿಮೀ ದೂರದ ಹಲಗೇರಿ ರಸ್ತೆಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗುತ್ತದೆ. ಈ ಆಸ್ಪತ್ರೆಯಿಂದ ಆ ಆಸ್ಪತ್ರೆಗೆ ತೆರಳಲು ಅಟೋಗೆ ಕನಿಷ್ಟ 100 ರೂ. ನೀಡಬೇಕಾಗುವುದು ಎಂಬುದು ರೋಗಿಗಳ ಆರೋಪ.

100 ಹಾಸಿಗೆಗೆ ಪರಿವರ್ತಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಮಂಜೂರ ಆದ ನಂತರ 100 ಹಾಸಿಗೆಯ ಚಿಕಿತ್ಸೆ ದೊರೆಯಲಿದೆ. ಇಲ್ಲಿನ ವೈದ್ಯರು ಇದ್ದ ಸೌಲಭ್ಯಗಳಲ್ಲಿ ರೋಗಿಗಳಿಗೆ ಉತ್ತಮವಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ಈ ವರೆಗೂ ಯಾವುದೇ ತೊಂದರೆಯಾಗಿಲ್ಲ. ಡಾ| ಗೋವಿಂದ, ಸಾರ್ವಜನಿಕ ಆಸ್ಪತ್ರೆ, ಆಡಳಿತ ವೈದ್ಯಾಧಿಕಾರಿ

ಗ್ರಾಮೀಣ ಮೂಲಭೂತ ಸೌಲಭ್ಯ ನಬಾರ್ಡ್‌ ಯೋಜನೆಯಡಿ 8.5 ಕೋಟಿ ಅನುದಾನದಲ್ಲಿ 50 ರಿಂದ 100 ಹಾಸಿಗೆಗೆ ಮೇಲ್ದರ್ಜೆಗೆ ಪರಿವರ್ತಿಸಲಾಗಿದೆ. ಈ ಕುರಿತು ವೈದ್ಯಾಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದಾರೆ, ಮುಖ್ಯಮಂತ್ರಿಗಳೊಂದಿಗೆ ಈ ಕುರಿತು ಚರ್ಚಿಸಿ ಜರೂರ ಮಂಜೂರು ಮಾಡಲಾಗುವುದು-ಅರುಣಕುಮಾರ ಪೂಜಾರ, ಶಾಸಕ

 

-ಮಂಜುನಾಥ ಎಚ್‌ ಕುಂಬಳೂರ

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.