ಅತಿವೃಷ್ಟಿಯಿಂದ ನಗರಗಳಲ್ಲಿ ಹೆಚ್ಚಿದ ಹಾನಿ

Team Udayavani, Sep 15, 2019, 11:30 AM IST

hv-tdy-1

ಹಾವೇರಿ: ಇತ್ತೀಚೆಗೆ ಜಿಲ್ಲೆಯಲ್ಲಿ ಉಲ್ಬಣಿಸಿದ ನೆರೆ ಹಾಗೂ ಅತಿವೃಷ್ಟಿಯಿಂದ ಗ್ರಾಮೀಣ ಪ್ರದೇಶಗಳಷ್ಟೇ ಅಲ್ಲ ನಗರ ಪ್ರದೇಶಗಳಲ್ಲಿಯೂ ಅಪಾರ ಪ್ರಮಾಣದಲ್ಲಿ ನಷ್ಟವಾಗಿದ್ದು ಒಟ್ಟು 1.78ಕೋಟಿ ರೂ.ಗಳಷ್ಟು ಹಾನಿ ಅಂದಾಜಿಸಲಾಗಿದೆ.

ನದಿಗಳು ಉಕ್ಕಿ ಹರಿದ ಪರಿಣಾಮ ಉಂಟಾದ ನೆರೆಯಿಂದ ನಗರ-ಪಟ್ಟಣಗಳಲ್ಲಿ ಹೆಚ್ಚಾಗಿ ಹಾನಿಯಾಗದೆ ಇದ್ದರೂ ನಿರಂತರವಾಗಿ ಸುರಿದ ಭಾರಿ ಮಳೆಯ ಪರಿಣಾಮವಾಗಿ ರಸ್ತೆ, ಕುಡಿಯುವ ನೀರು ಪೂರೈಸುವ ಪಂಪ್‌ಹೌಸ್‌, ವಿದ್ಯುತ್‌ ಘಟಕ ಹಾಗೂ ನೀರು ಸರಬರಾಜು ಮಾಡುವ ಉಪಕರಣಗಳಿಗೆ ಹಾನಿಯಾಗಿದೆ.

ಅತಿವೃಷ್ಟಿಯಿಂದ ಕುಸಿದ ಮನೆಗಳು, ಸರ್ಕಾರಿ ಕಟ್ಟಡಗಳನ್ನು ಹೊರತುಪಡಿಸಿ ಜಿಲ್ಲಾಡಳಿತ ನಗರ ಪಟ್ಟಣಗಳಲ್ಲಿ ಹಾಳಾದ ರಸ್ತೆ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಆಗಿರುವ ನಷ್ಟವನ್ನು ಪ್ರತ್ಯೇಕವಾಗಿ ಸಮೀಕ್ಷೆ ಮಾಡಿದೆ. ಆ ಪ್ರಕಾರವಾಗಿ ಜಿಲ್ಲೆಯ ನಗರ ಪ್ರದೇಶಗಳಲ್ಲಿನ ಒಟ್ಟು 31 ಕಿಮೀ ರಸ್ತೆ ಮಳೆಯಿಂದ ಹಾನಿಯಾಗಿದ್ದು, 114ಲಕ್ಷ ರೂ.ಗಳಷ್ಟು ಹಾನಿಯಾಗಿದೆ. ನಗರ-ಪಟ್ಟಣಗಳಿಗೆ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿ 64ಲಕ್ಷ ರೂ.ಗಳಷ್ಟು ನಷ್ಟವಾಗಿದೆ.

18.6ಲಕ್ಷ ಪರಿಹಾರ ನಿರೀಕ್ಷೆ: ಅತಿವೃಷ್ಟಿಯಿಂದ ಹಾವೇರಿ ನಗರದಲ್ಲಿ 7.5ಕಿಮೀ, ರಾಣಿಬೆನ್ನೂರು ನಗರದಲ್ಲಿ 10ಕಿಮೀ, ಬ್ಯಾಡಗಿ ಪಟ್ಟಣದಲ್ಲಿ 2 ಕಿಮೀ., ಹಿರೇಕೆರೂರು ಪಟ್ಟಣದಲ್ಲಿ 1.5ಕಿಮೀ, ಸವಣೂರು ಪಟ್ಟಣದಲ್ಲಿ 2 ಕಿಮೀ, ಶಿಗ್ಗಾವಿ ಪಟ್ಟಣದಲ್ಲಿ 5ಕಿಮೀ, ಹಾನಗಲ್ಲ ಪಟ್ಟಣದಲ್ಲಿ 3ಕಿಮೀಯಷ್ಟು ರಸ್ತೆ ಹಾಳಾಗಿದೆ. ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ನಿಯಮಾನುಸಾರ 18.6ಲಕ್ಷ ರೂ.ಗಳ ಪರಿಹಾರ ನಿರೀಕ್ಷಿಸಲಾಗಿದೆ.
ಅಸಮರ್ಪಕ ನಿರ್ವಹಣೆ: ಅತಿವೃಷ್ಟಿಯಿಂದ ಆಗಿರುವ ಆಕಸ್ಮಿಕ ಹಾನಿಯ ಜತೆಗೆ ಸ್ಥಳೀಯ ಆಡಳಿತ ಸಂಸ್ಥೆಗಳ ನಿರ್ಲಕ್ಷ್ಯ ಹಾಗೂ ಅಸಮರ್ಪಕ ನಿರ್ವಹಣೆಯಿಂದಾಗಿಯೂ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಈ ಬಗ್ಗೆ ಯಾರೂ ಹಾನಿ ಲೆಕ್ಕ ಹಾಕಿಲ್ಲ. ಪಟ್ಟಣಗಳ ರಾಜಕಾಲುವೆ, ಚರಂಡಿ, ಗಟಾರಗಳ ನಿರ್ವಹಣೆ ಮಾಡದೆ ಇರುವುದರಿಂದ ನಗರ-ಪಟ್ಟಣಗಳಲ್ಲಿ ಮಳೆ ನೀರು ಮನೆ, ಅಂಗಡಿ, ಕಚೇರಿಗಳಿಗೆ ನುಗ್ಗಿ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಕೆಲ ಬಟ್ಟೆ ಅಂಗಡಿಕಾರರಂತೂ ಮಳೆ ನೀರು, ಕೊಳಚೆ ನೀರು ನುಗ್ಗಿದ್ದರಿಂದ ಅಪಾರ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಒಟ್ಟಾರೆ ಅತಿವೃಷ್ಟಿ ಗ್ರಾಮೀಣ ಜನಜೀವನ, ಆಸ್ತಿಪಾಸ್ತಿಗೆ ಹಾನಿ ಮಾಡುವ ಜತೆಗೆ ನಗರವಾಸಿಗಳಿಗೂ ತನ್ನ ಬಿಸಿ ಮುಟ್ಟಿಸಿ ಅಪಾರ ಪ್ರಮಾಣದಲ್ಲಿ ನಷ್ಟವನ್ನುಂಟು ಮಾಡಿದೆ.
•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.