ಡಾಂಬರ್‌ ಮಿಶ್ರಣ ಘಟಕ ಸ್ಥಳಾಂತರಿಸಲು ಒತ್ತಾಯ

ಘಟಕದಿಂದ ಹೊರಹೊಮ್ಮುವ ಧೂಳು,ಹೊಗೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

Team Udayavani, May 6, 2019, 4:28 PM IST

haveri-3-tdy..

ಬಂಕಾಪುರ: ಗುತ್ತಿಗೆದಾರನನ್ನು ತರಾಟೆ ತೆಗೆದುಕೊಂಡ ಸಾರ್ವಜನಿಕರು.

ಬಂಕಾಪುರ: ನಗರೋತ್ಥಾನ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ರಸ್ತೆ ಕಾಮಗಾರಿಗಳಿಗಾಗಿ ಪಟ್ಟಣದ ಅಲ್ಲಾವುದ್ದೀನ್‌ ಶಾ ಖಾದ್ರಿದರ್ಗಾ ಪಕ್ಕದ ಖಾಲಿ ಜಾಗೆಯಲ್ಲಿ ತಾತ್ಕಾಲಿಕ ಆರಂಭಗೊಂಡಿರುವ ಡಾಂಬರ್‌ ಮಿಶ್ರಣ ಘಟಕದಿಂದ ಹೊರಬರುತ್ತಿರುವ ಭಾರಿ ಪ್ರಮಾಣದ ವಿಷಯುಕ್ತ ಹೊಗೆ ಮತ್ತು ಧೂಳಿನಿಂದ ರೋಸಿ ಹೋದ ಸಾರ್ವಜನಿಕರು ಘಟಕಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ವಿಷಕಾರಿತೈಲ ಮಿಶ್ರಿತ ಡಾಂಬರ್‌ ಮಿಶ್ರಣಾ ಘಟಕದ ಹೊಗೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕೂಡಲೇ ಘಟಕ ಸ್ಥಳಾಂತರಕ್ಕೆ ಒತ್ತಾಯಿಸಿ ಗುತ್ತಿಗೆದಾರ ವಿರುದ್ಧ ಸಾರ್ವಜನಿಕರು ಪ್ರತಿಭಟಿಸಿದರು. ಇಲ್ಲಿ ತಯಾರಿಸುತ್ತಿರುವ ಡಾಂಬರ್‌ ಮಿಶ್ರಣದಲ್ಲಿ ವಿಷಕಾರಿ ತೈಲ ಮಿಶ್ರಣ ಹಾಕಲಾಗುತ್ತಿದ್ದು, ಈ ತೈಲದ ವಾಸನೆ ಗಾಳಿಯೊಂದಿಗೆ ಬೆರೆತು ಜನರ ಉಸಿರಾಟಕ್ಕೆ ತೊಂದರೆ ಉಂಟಾಗುತ್ತಿದೆ. ಇದರ ದುರ್ವಾಸನೆಯಿಂದ ಜನರು ಮನೆಯಲ್ಲಿ ಊಟ ಸಹ ಮಾಡದಂತಾಗಿದೆ. ನೀರಿನತೊಟ್ಟಿ, ಬಟ್ಟೆ, ಮನೆಗಳ ಮೇಲ್ಛಾವಣಿ, ಕೊಠಡಿಗಳು ಧೂಳಿನಿಂದ ತುಂಬಿಕೊಂಡಿವೆ. ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಅನಾರೋಗ್ಯಕ್ಕೀಡಾಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪುರಸಭೆ ಮುಖ್ಯಾಧಿಕಾರಿ ಪಿ.ಕೆ.ಕಲ್ಯಾಣಶೆಟ್ಟಿ ಹಾಗೂ ಎಂಜನಿಯರ್‌ ಚವ್ಹಾಣ ಅವರನ್ನು ಪ್ರತಿಭಟನಾಕಾರರು ತರಾಟೆ ತೆಗೆದುಕೊಂಡು, ಈ ಹಿಂದೆಯೆ ನಿಮಗೆ ಮೌಕಿಕ ಹಾಗೂ ಲಿಖೀತವಾಗಿ ಈ ಕುರಿತು ಮನವಿ ಮಾಡಿಕೊಂಡರೂ ಈ ಘಟಕ ಸ್ಥಳಾಂತರಿಸಿಲ್ಲ. ಈ ಕೂಡಲೇ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿದರು. ಮುಖ್ಯಾಧಿಕಾರಿ ಹಾಗೂ ಸಾರ್ವಜನಿಕರ ಮಧ್ಯ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಮಧ್ಯ ಪ್ರವೇಶಿಸಿದ ಪಿಎಸ್‌ಐ ಸಂತೋಷ ಪಾಟೀಲ ಅವರು ಗುತ್ತಿಗೆದಾರ, ಪುರಸಭೆ ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಠಾಣೆಗೆ ಕರೆಯಿಸಿ ಚರ್ಚಿಸಿದರು.

ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವ ಡಾಂಬರ್‌ ಮಿಶ್ರಣ ಘಟಕವನ್ನು ಬೇರೆ ಕಡೆ ಸ್ಥಳಾಂತರಿಸಬೇಕು. ಇಲ್ಲದಿದ್ದರೆ ಸೂಕ್ತ ಕಾನೂನು ಕ್ರಮ ಜರಗಿಸುವುದಾಗಿ ಎಚ್ಚರಿಸಿದರು. ಇದಕ್ಕೆ ಗುತ್ತಿಗೆದಾರರು ಸಮ್ಮತಿ ಸೂಚಿಸಿದಾಗ ಸಾರ್ವಜನಿಕರು ಪ್ರತಿಭಟನೆ ಹಿಂಪಡೆದರು.

ಪುರಸಭೆ ಸದಸ್ಯ ಎನ್‌.ವಿ.ಪದ್ಮ, ಸುಭಾಸಗೌಡ ಪಾಟೀಲ, ರವಿ ಕಂಚಾರಬಾಟ್, ಅಲ್ಲಾವುದ್ದೀನ್‌ ಮನಿಯಾರ್‌, ಪ್ರಮೋದ ಚಲವಾದಿ, ಶಾರದಾ ಡಂಬಳ, ಎಸ್‌.ಎಂ. ಹಿರೇಮಠ, ಶಾಂತವೀರಯ್ಯ ಗಚ್ಚಿನಮಠ, ಹೊನ್ನಪ್ಪ ಹೂಗಾರ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

bjpBSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

BSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Charmady Ghat: ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ

Charmady Ghat: ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ

Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ

Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ

ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ: ಗಣೇಶ್‌ ರಾವ್‌

ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ: ಗಣೇಶ್‌ ರಾವ್‌

Boliyar Incident:ಬಿಜೆಪಿಯಿಂದ ಶಾಂತಿ ಕದಡುವ ಕೆಲಸ: ಮಂಜುನಾಥ ಭಂಡಾರಿ

Boliyar Incident:ಬಿಜೆಪಿಯಿಂದ ಶಾಂತಿ ಕದಡುವ ಕೆಲಸ: ಮಂಜುನಾಥ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandswamy Gaddadevarmath on haveri defeat

Haveri; ಮೋದಿ‌ ಅಲೆಗಿಂತ ಬಿಜೆಪಿ ಅಲೆ ಹೆಚ್ಚಿತ್ತು: ಆನಂದಸ್ವಾಮಿ ಗಡ್ಡದೇವರಮಠ

ಪರಿಸರ ಉಳಿದರೆ ಮನುಕುಲ ಉಳಿದೀತು: ಬಸವಶಾಂತಲಿಂಗ ಸ್ವಾಮೀಜಿ

ಪರಿಸರ ಉಳಿದರೆ ಮನುಕುಲ ಉಳಿದೀತು: ಬಸವಶಾಂತಲಿಂಗ ಸ್ವಾಮೀಜಿ

Bribe: ಬಾಂಡ್ ನೀಡಲು ಫಲಾನುಭವಿಗಳಿಂದ ಲಂಚ… ಸರ್ಕಾರಿ ನೌಕರ ಲೋಕಾಯುಕ್ತ ಬಲೆಗೆ

Bribe: ಬಾಂಡ್ ನೀಡಲು ಫಲಾನುಭವಿಗಳಿಂದ ಲಂಚ… ಸರ್ಕಾರಿ ನೌಕರ ಲೋಕಾಯುಕ್ತ ಬಲೆಗೆ

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

bjpBSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

BSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

pinarayi

ಅಗ್ನಿ ದುರಂತ; ಕುವೈಟ್‌ಗೆ ತೆರಳಲು ಸಚಿವೆಗೆ ಕೇಂದ್ರ ಅಡ್ಡಿ: ಕೇರಳ ಸಿಎಂ

1-rt

ಗಲಾಟೆ ವಿವಾದ: ವ್ಯಕ್ತಿ ವಿರುದ್ಧ ಕೇಸು ದಾಖಲಿಸಿದ ರವೀನಾ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.