ತೈಲ-ವಿದ್ಯುತ್‌ ದರ ಏರಿಕೆಗೆ ಜೆಡಿಎಸ್‌ ಆಕ್ರೋಶ

Team Udayavani, Jun 26, 2021, 10:38 AM IST

ತೈಲ-ವಿದ್ಯುತ್‌ ದರ ಏರಿಕೆಗೆ ಜೆಡಿಎಸ್‌ ಆಕ್ರೋಶ

ಹಾವೇರಿ: ಪೆಟ್ರೋಲ್‌, ಡೀಸೆಲ್‌, ವಿದ್ಯುತ್‌ ದರ ಏರಿಕೆ ಖಂಡಿಸಿ ಹಾಗೂ ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಜೆಡಿಎಸ್‌ ಜಿಲ್ಲಾ ಘಟಕದಿಂದ ಶುಕ್ರವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಜೆಡಿಎಸ್‌ ಮುಖಂಡರು, ದೇಶದಲ್ಲಿ ದಿನದಿಂದದಿನಕ್ಕೆ ಪ್ರಟ್ರೋಲ್‌, ಡೀಸೆಲ್‌ ದರ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗುತ್ತಿದೆ. ತೈಲ ಬೆಲೆ ಏರಿಕೆಯಿಂದಾಗಿ ಸರಕು ಸಾಗಾಣಿಕೆ, ಬಸ್‌ ದರ, ಆಟೋ, ಟ್ಯಾಕ್ಸಿಗಳ ದರ ಸಹ ಹೆಚ್ಚಳವಾಗಿದೆ. ಅಲ್ಲದೇ, ರೈತಾಪಿ ವರ್ಗ ಜಮೀನುಗಳ ಕೆಲಸಕ್ಕೆ ಟ್ರ್ಯಾಕ್ಟರ್‌ಗಳನ್ನು ಬಳಸಲು ಯೋಚಿಸುವಂತಾಗಿದೆ ಎಂದು ದೂರಿದರು.

ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ರೈತರು ಬೆಳೆದಿದ್ದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ನಡುವೆ ದಿನದಿಂದ ದಿನಕ್ಕೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾಗುತ್ತಿರುವುದರಿಂದ ರೈತಾಪಿ ಜನರು ಮತ್ತಷ್ಟು ಸಂಕಷ್ಟ ಪಡುವಂತಾಗಿದೆ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಹಾಗೂ ಜನವಿರೋಧಿ ನೀತಿಗೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಕೊರೊನಾ ಮಹಾಮಾರಿ ಸಂಕಷ್ಟದಿಂದ ತತ್ತರಿಸಿರುವ ಜನರಿಗೆ ತೈಲ ಹಾಗೂ ವಿದ್ಯುತ್‌ ದರ ಏರಿಕೆಯಾಗುತ್ತಿರುವುದು ಬದುಕಿನ ಮೇಲೆ ದೊಡ್ಡ ಹೊಡೆತ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಮೂಲಕ ತೈಲ ಬೆಲೆ ಏರಿಕೆಯನ್ನು ಹಿಂಪಡೆಯುವಂತೆ ಮಾಡಿ ರಾಜ್ಯದಜನತೆಯ ಮೇಲಿರುವ ತೆರಿಗೆ ಒತ್ತಡ ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು.

ಕೋವಿಡ್ ಮೊದಲ ಹಾಗೂ ಎರಡನೇ ಅಲೆಯಿಂದ ದೇಶದಲ್ಲಿ ಸಾಕಷ್ಟು ಕುಟುಂಬಗಳು ಸಂಕಷ್ಟಕ್ಕೆ ತುತ್ತಾಗಿವೆ. ಕೊರೊನಾ ಸೋಂಕಿನಿಂದ ಸಾವಿರಾರು ಜನರು ಜೀವ ಕಳೆದುಕೊಂಡಿದ್ದು,ಅವರನ್ನು ಅವಲಂಬಿಸಿದ ಕುಟುಂಬಗಳು ಬೀದಿಗೆ ಬಿದ್ದಿವೆ. ಇಂತಹ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ ಕಲ್ಪಿಸುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಹಲಗೇರಿ, ಜಿಲ್ಲಾ ಕಾರ್ಯಾಧ್ಯಕ್ಷ ಉಮೇಶ ತಳವಾರ, ಶಿವಕುಮಾರ ಮಠದ, ಆರ್‌ .ಬಿ.ಪಾಟೀಲ, ಸುರೇಶ ನಾಯಕ, ಮಹಬೂಬಲಿ ಸುಗ್ಗಮ್ಮನವರ, ಕೆಂಚಪ್ಪ ಗುದಗಿ, ನವೀನ ಡಾಂಗೆ,ರವಿ ಕೂರಗುಡಿ, ಬಸವಾರಜ ಹಾದಿ, ಕರಬಸಪ್ಪ ಜೆಡಿಎಸ್‌ ಜಿಲ್ಲಾ ಘಟಕದಿಂದ ಜಿಲ್ಲಾ ಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ದಾವಣಗೆರೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.