ಇಂದಿನಿಂದ ಬೃಹತ್‌ ಉದ್ಯೋಗ ಮೇಳ


Team Udayavani, Feb 22, 2020, 1:17 PM IST

hv-tdy-1

ಸಾಂಧರ್ಬಿಕ ಚಿತ್ರ

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ. 22 ಮತ್ತು 23ರಂದು ನಗರದ ಹುಕ್ಕೇರಿಮಠದ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಲಿದೆ.

ಫೆ. 22ರಂದು ಬೆಳಗ್ಗೆ 10:30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಹುಕ್ಕೇರಿಮಠದ ಸದಾಶಿವ ಶ್ರೀಗಳು ಸಾನ್ನಿಧ್ಯ ವಹಿಸುವರು. ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹಾಗೂ ಉಪಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ| ಸಿ.ಎನ್‌.ಅಶ್ವತ್‌ನಾರಾಯಣ ಘನ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಯೋಗಮೇಳ ಉದ್ಘಾಟಿಸುವರು. ಕೃಷಿ ಸಚಿವರಾದ ಬಿ.ಸಿ.ಪಾಟೀಲ ಭಾಗವಹಿಸುವರು. ಶಾಸಕ ನೆಹರು ಓಲೇಕಾರ ಅಧ್ಯಕ್ಷತೆ ವಹಿಸುವರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ| ಎಸ್‌.ಸೆಲ್ವಕುಮಾರ್‌, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಆಯುಕ್ತ ಕೆ.ಪಿ.ಮೋಹನ್‌ರಾಜ್‌, ಬೆಳಗಾವಿ ವಿಭಾಗೀಯ(ತರಬೇತಿ) ಜಂಟಿ ನಿರ್ದೇಶಕ ಪಿ.ರಮೇಶ ಪಾಲ್ಗೊಳ್ಳಲಿದ್ದಾರೆ.

ಉದ್ಯೋಗ ಮೇಳದಲ್ಲಿ ಜಿಲ್ಲೆಯ ನಿರುದ್ಯೋಗ ವಿಕಲಚೇತನರಿಗೂ ಆದ್ಯತೆ ನೀಡಲಾಗಿದ್ದು, ವಿಕಲಚೇತನರು ಇತ್ತೀಚಿನ ತಮ್ಮ ಭಾವಚಿತ್ರ, ವಿಕಲಚೇತನರ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ಚುನಾವಣಾ ಗುರುತಿನ ಚೀಟಿ ಹಾಗೂ ವಿದ್ಯಾರ್ಹತೆಯ ಅಂಕಪಟ್ಟಿಯೊಂದಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಸಂಘಟಕರು ಕೋರಿದ್ದಾರೆ. ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಉಚಿತವಾಗಿ ಭಾಗವಹಿಸಿ ತಮ್ಮ ವಿದ್ಯಾರ್ಹತೆ ಹಾಗೂ ಪ್ರತಿಭೆಗನುಗುಣವಾಗಿ ನೇರ ಸಂದರ್ಶನದ ಮೂಲಕ ಉದ್ಯೋಗ ಪಡೆದುಕೊಳ್ಳಬಹುದಾಗಿದೆ. ಉದ್ಯೋಗಮೇಳದಲ್ಲಿ 100 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮ ಕಂಪನಿಗಳಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‌.ಎಲ್‌.ಎಲ್‌.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ವಿವಿಧ ವೃತ್ತಿಪರ ಕೋರ್ಸು, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು, ಅನಕ್ಷರಸ್ಥರು ಸಹ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌, ಶೈಕ್ಷಣಿಕ ದಾಖಲೆ, ಅಂಕಪಟ್ಟಿಗಳು ಹಾಗೂ ಕನಿಷ್ಠ 10 ಬಯೋಡೆಟಾ ಪ್ರತಿಗಳೊಂದಿಗೆ ಸಂದರ್ಶನ ವೇಳೆಯಲ್ಲಿ ಹಾಜರಿರಬೇಕು. ಆನ್‌ಲೈನ್‌ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿದ ಉದ್ಯೋಗಾಕಾಂಕ್ಷಿಗಳು ನೋಂದಣಿ ಪ್ರಿಂಟೆಡ್‌ ಪ್ರತಿಯನ್ನು ಉದ್ಯೋಗಮೇಳದ ದಿನ ತಪ್ಪದೇ ತರಬೇಕು. ಉದ್ಯೋಗಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳನ್ನು ನೇರಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bommai

Loksabha; ಮೋದಿ ಭೇಟಿ ಬಳಿಕ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿದೆ: ಬೊಮ್ಮಾಯಿ

Bommai BJP

BJP; ಹಾವೇರಿ ಬಿಜೆಪಿ ಕಚೇರಿಗೆ ಬೊಮ್ಮಾಯಿ ಆಗಮಿಸುತ್ತಿದಂತೆ ಕೋಲಾಹಲ!

Haveri; ರಾಜ್ಯ ಸರ್ಕಾರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ: ಎಸ್.ವಿ. ಸಂಕನೂರು

Haveri; ರಾಜ್ಯ ಸರ್ಕಾರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ: ಎಸ್.ವಿ. ಸಂಕನೂರು

ನಿಗಿನಿಗಿ ಕೆಂಡವಾಗಿದ್ದ ಬ್ಯಾಡಗಿ ಥಂಡಾ: ಆರೋಪಿಗಳಿಗಾಗಿ ಶೋಧ

ನಿಗಿನಿಗಿ ಕೆಂಡವಾಗಿದ್ದ ಬ್ಯಾಡಗಿ ಥಂಡಾ: ಆರೋಪಿಗಳಿಗಾಗಿ ಶೋಧ

ಬ್ಯಾಡಗಿ ಎಪಿಎಂಸಿ ಪ್ರಕರಣ… ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೇಟಿ ಪರಿಶೀಲನೆ

Byadgi APMC ರೈತಾಕ್ರೋಶ… ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೇಟಿ ಪರಿಶೀಲನೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.