ರಾಜಕಾರಣಿಗಳ ಸ್ವಹಿತಾಸಕ್ತಿಗೆ ಅಭಿವೃದ್ಧಿ ಬಲಿ

•ವೈಯಕ್ತಿಕ ಗೌರವ ಜತೆ ರಾಜ್ಯದ ಗೌರವಕ್ಕೂ ಧಕ್ಕೆ•ಮುಂದಿನ ದಿನದಲ್ಲಿ ತಕ್ಕ ಪಾಠ ಕಲಿಸೋಣ

Team Udayavani, Jul 22, 2019, 11:00 AM IST

hv-tdy-1

ಹಾವೇರಿ: ರೈತ ಹುತಾತ್ಮ ದಿನಾಚರಣೆ ನಿಮಿತ್ತ ನಗರದ ಸಿದ್ದಪ್ಪ ವೃತ್ತದಲ್ಲಿ ರೈತರು ಸಮಾವೇಶಗೊಂಡರು.

ಹಾವೇರಿ: ರಾಜ್ಯದ ರಾಜಕಾರಣಿಗಳು ಇಂದು ತಮ್ಮ ವೈಯಕ್ತಿಕ ಗೌರವದ ಜತೆಗೆ ರಾಜ್ಯದ ಗೌರವವನ್ನೂ ಕಳೆಯುತ್ತಿದ್ದಾರೆ. ಸ್ವಹಿತಾಸಕ್ತಿಗಾಗಿ ರಾಜ್ಯದ ಅಭಿವೃದ್ಧಿ ಬಲಿ ಕೊಡುತ್ತಿರುವುದನ್ನು ಯಾರೂ ಸಹಿಸಲು ಸಾಧ್ಯವಿಲ್ಲ. ರೈತರು ಎಚ್ಚೆತ್ತುಕೊಂಡು ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಗೌಡ ಹೇಳಿದರು.

ಇಲ್ಲಿಯ ಹುಕ್ಕೇರಿಮಠದಲ್ಲಿ ರೈತ ಹುತಾತ್ಮ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ರಾಜ್ಯಮಟ್ಟದ ರೈತ ಸಮಾವೇಶದಲ್ಲಿ ಅವರು ಮಾತನಾಡಿದರು.

ರಾಜ್ಯದ ಅಭಿವೃದ್ಧಿ, ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ರಾಜಕಾರಣಿಗಳು ಇಂದು ಸ್ವಹಿತಕ್ಕಾಗಿ ರೆಸಾರ್ಟ್‌ ರಾಜಕಾರಣ ಮಾಡುತ್ತಿರುವುದು ರಾಜ್ಯ ಜನತೆ ತಲೆ ತಗ್ಗಿಸುವಂತಾಗಿರುವುದು ವಿಷಾದನೀಯ ಎಂದರು.

ನ್ಯಾಯ ಸಮ್ಮತ ರೈತರ ಹೋರಾಟದ ಸಂದರ್ಭದಲ್ಲಿ ಹಲವಾರು ರೈತರು ಹುತಾತ್ಮರಾಗಿದ್ದಾರೆ. ಅವರ ಬಲಿದಾನಕ್ಕೆ ನ್ಯಾಯ ದೊರಕಿಸಬೇಕು ಅಂದಾಗ ಮಾತ್ರ ಅವರ ಆತ್ಮಕ್ಕೆ ಶಾಂತಿ ದೊರಕುತ್ತದೆ. ಈ ನಿಟ್ಟಿನಲ್ಲಿ ರೈತರು ಸಂಘಟನೆಗೊಂಡು ಹೋರಾಟಕ್ಕೆ ಮುಂದಾಗಬೇಕು. 1985ರಿಂದ ಆರಂಭಗೊಂಡ ರೈತ ಸಂಘ ಸುಮಾರು 39 ವರ್ಷಗಳಿಂದ ಹೋರಾಟ ಮಾಡುತ್ತಿದೆ. ಸರ್ಕಾರ ಮಾತ್ರ ರೈತರ ಬೇಡಿಕೆಗಳಿಗೆ ಸ್ಪಂದಿಸದೇ ರೈತರನ್ನು ಕಡೆಗಣಿಸುತ್ತಿರುವುದು ಖೇದಕರ ಸಂಗತಿ ಎಂದರು.

ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಹಿರೇಮಠ ಮಾತನಾಡಿ, ಇಂದಿನ ದಿನಗಳಲ್ಲಿ ಮಹಿಳೆಯರು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ರಾಜಕಾರಣಿಗಳು ರೈತರನ್ನು ಹಾಗೂ ರೈತ ಮಹಿಳೆಯರನ್ನು ಕೇವಲ ಮತ ಬ್ಯಾಂಕ್‌ ಮಾಡಿಕೊಂಡಿದ್ದಾರೆ. ಅವರಿಗೆ ನಿಜವಾಗಿಯೂ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಷ್ಟಗಳನ್ನು ಬಗೆಹರಿಸುವ ಉದ್ದೇಶವಿಲ್ಲ. ಇದನ್ನು ರೈತರು ಅರ್ಥ ಮಾಡಿಕೊಳ್ಳಬೇಕು. ಹೋರಾಟ ಮಾಡುವ ಮೂಲಕ ನಮ್ಮ ಹಕ್ಕುಗಳನ್ನು ಪಡೆಯೋಣ ಎಂದರು.

ರೈತ ಮುಖಂಡರಾದ ಅಣ್ಣಪ್ಪ ದೇಸಾಯಿ, ಈರಣ್ಣ ಹಲಗೇರಿ, ಹನುಮಂತಪ್ಪ ಕಬ್ಟಾರ, ಎಫ್‌.ವೈ. ಕುರಿ, ಉಮಾದೇವಿ, ಪುಟ್ಟಣ್ಣಯ ಟಿ., ಮಹೇಶ್ವರ ಸ್ವಾಮಿ, ಶಂಶಾದ್‌ಬೇಗಂ, ಲೋಕನಾಥ ಹೆಬಸೂರ, ಮಂಜುನಾಥ ಗೌಡಶಿವಣ್ಣವರ, ಕಲ್ಲಪ್ಪ ಕಾಮಣ್ಣನವರ, ವಿರುಪಾಕ್ಷಪ್ಪ ಕಳ್ಳಿಮನಿ ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಹುಕ್ಕೇರಿಮಠದಿಂದ ಹೊಸಮನಿ ಸಿದ್ದಪ್ಪ ವೃತ್ತದ ವರೆಗೆ ಪಾದಯಾತ್ರೆ ನಡೆಸಿ, ಹುತಾತ್ಮ ರೈತರ ವೀರಗಲ್ಲಿಗೆ ಮಾಲಾರ್ಪಣೆ ಮಾಡಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.