ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಅರಿವು ಮೂಡಿಸಲಿ


Team Udayavani, Jul 13, 2019, 4:40 PM IST

hv-tdy-4..

ಹಾವೇರಿ: ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಕಾರ್ಯಾಗಾರದಲ್ಲಿ ಮಾತನಾಡಿದರು.

ಹಾವೇರಿ: ಸ್ವಚ್ಛತೆ ಮತ್ತು ನೈರ್ಮಲ್ಯ ಇಂದಿನ ತುರ್ತು ಅಗತ್ಯ. ಸ್ವಚ್ಛತೆ ಕುರಿತು ಶಿಕ್ಷಕರು ಇಂದು ಮಕ್ಕಳಲ್ಲಿ ಬಿತ್ತಿದ ಬೀಜ ಮುಂದೆ ಹೆಮ್ಮರವಾಗಿ ಬೆಳೆಯುತ್ತದೆ. ಆದ್ದರಿಂದ ಶಿಕ್ಷಕರು ಮಕ್ಕಳಲ್ಲಿ ಸ್ವಚ್ಛತೆ ಅರಿವು ಮೂಡಿಸಬೇಕು ಎಂದು ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಹೇಳಿದರು.

ಜಿಪಂ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಜಿಪಂ ಸಹಯೋಗದಲ್ಲಿ ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಸ್ವಚ್ಛ ಮೇವ ಜಯತೆ ಆಂದೋಲನ ಅಂಗವಾಗಿ ಗ್ರಾಪಂಗಳಲ್ಲಿ ಮತ್ತು ಶಾಲೆಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ನಿರ್ವಹಣೆ ಕುರಿತು ಗ್ರಾಮೀಣ ಸಮುದಾಯಕ್ಕೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲು ಗ್ರಾಮೀಣ ಪ್ರದೇಶದ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಏರ್ಪಡಿಸಿದ್ದ ಒಂದು ದಿನದ ಘನ ತ್ಯಾಜ್ಯ ನಿರ್ವಹಣೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕೆ ಹಿರಿಯರು ಶ್ರಮಿಸಿದಂತೆ, ದೇಶದ ಸ್ವಚ್ಛತೆಗೆ ಎಲ್ಲರೂ ಕೈಜೋಡಿಸುವುದು ಅಗತ್ಯ. ಗ್ರಾಮಗಳ ಸ್ವಚ್ಛತೆಗೆ ವಿದ್ಯಾರ್ಥಿಗಳು, ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದರು.

ಮಹಾತ್ಮ ಗಾಂಧಿಧೀಜಿಯವರು ರಸ್ತೆಗಳ ಕಸ ಗೂಡಿಸಿದರು ಹಾಗೂ ಶೌಚಾಲಯ ಶುಚಿಗೊಳಿಸುವ ಮೂಲಕ ಸ್ವಚ್ಛ ಭಾರತದ ಕನಸು ಕಂಡಿದ್ದರು. ಗಾಂಧಿಧೀಜಿಯವರ ಮಾದರಿಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮುಂದುವರಿಯಬೇಕು. ಆರೋಗ್ಯವಂತ ಸಮಾಜದಿಂದ ಸದೃಢ ರಾಷ್ಟ್ರ ಕಟ್ಟಲು ಸಾಧ್ಯವಾಗುತ್ತದೆ. ವಾರಕ್ಕೆ ಒಂದು ದಿನವಾದರೂ ವಿದ್ಯಾರ್ಥಿಗಳ ತಂಡದೊಂದಿಗೆ ಗ್ರಾಮದೊಳಗೆ ಸಂಚರಿಸಿ ಗ್ರಾಮಸ್ಥರಿಗೆ ಸ್ವಚ್ಛತೆಯ ಜಾಗೃತಿ, ಮಿತ ನೀರು ಬಳಕೆ, ಶೌಚಾಲಯ ಬಳಕೆ ಕುರಿತಂತೆ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.

ಜಿಪಂ ಸಿಇಒ ಕೆ.ಲೀಲಾವತಿ ಪ್ರಾಸ್ತಾವಿಕ ಮಾತನಾಡಿ, ನಗರ ಪ್ರದೇಶಕ್ಕೆ ಸೀಮಿತವಾಗಿದ್ದ ಪ್ಲಾಸ್ಟಿಕ್‌ ಬಳಕೆ ಘನತ್ಯಾಜ್ಯ ವಿಲೇವಾರಿ ಸಮಸ್ಯೆ ಹಳ್ಳಿಗಳಲ್ಲೂ ಪ್ಲಾಸ್ಟಿಕ್‌ ಬಳಕೆ ಅಧಿಕವಾಗಿದೆ. ಘನ ತ್ಯಾಜ್ಯ ವಿಲೇವಾರಿ ಸಮಸ್ಯೆ ಎದುರಾಗಿದೆ. ನಗರದಂತೆ ಹಳ್ಳಿಗಳಲ್ಲೂ ಒಣ ಹಾಗೂ ಹಸಿ ಕಸ ವಿಂಗಡಣೆ, ಸ್ವಚ್ಛತೆ ಹಾಗೂ ಶೌಚಾಲಯ ಬಳಕೆ ಪ್ರತಿ ಕುಟುಂಬ ಅವಿಭಾಜ್ಯ ಅಂಗ ಎಂಬುದರ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಶಾಲಾ ಮಕ್ಕಳ ಮೂಲಕ ಸಂದೇಶ ತಲುಪಿಸಲು ಶಿಕ್ಷಕರಿಗೆ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಪಂ ಸಿಇಒ ಕೆ. ಲೀಲಾವತಿ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಜಿಪಂ ಉಪಕಾರ್ಯದರ್ಶಿ ಜಿ.ಗೋವಿಂದಸ್ವಾಮಿ, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.