ಸಾಂಸ್ಕೃತಿಕ ಹಬ್ಬ ನಾಡಿನಾದ್ಯಂತ ಪಸರಿಸಲಿ


Team Udayavani, Aug 30, 2019, 11:41 AM IST

hv-tdy-2

ಹಿರೇಕೆರೂರ: ಬಿ.ಆರ್‌.ತಂಬಾಕದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುವ ವಲಯ ಯುವಜನೋತ್ಸವದ ಕಾರ್ಯಕ್ರಮಗಳ ಭಿತ್ತಿಚಿತ್ರವನ್ನು ಇಫ್ಕೋ ರಾಜ್ಯ ಮಾರಾಟ ವ್ಯವಸ್ಥಾಪಕ ಡಾ| ನಾರಾಯಣಸ್ವಾಮಿ ಬಿಡುಗಡೆಗೊಳಿಸಿದರು.

ಹಿರೇಕೆರೂರ: ಇಲ್ಲಿನ ಬಿ.ಆರ್‌. ತಂಬಾಕದ ಪ್ರಥಮ ದರ್ಜೆ ಕಾಲೇಜು ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಸಹಯೋಗದಲ್ಲಿ ನಡೆಯುವ ಪ್ರಸಕ್ತ ಸಾಲಿನ ವಲಯ ಯುವಜನೋತ್ಸವದ ಕಾರ್ಯಕ್ರಮಗಳ ಭಿತ್ತಿಪತ್ರವನ್ನು ಇಫ್ಕೋ ಸಂಸ್ಥೆಯ ರಾಜ್ಯ ಮಾರಾಟ ವ್ಯವಸ್ಥಾಪಕ ಡಾ| ನಾರಾಯಣಸ್ವಾಮಿ ಸಿ. ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಅವರು, ನಾಡಿನ ಸಂಸ್ಕೃತಿಯ ಕಲೆ ಬಿಂಬಿಸುವ ಈ ಸಾಂಸ್ಕೃತಿಕ ಹಬ್ಬ ನಮ್ಮ ನಾಡಿನ ತುಂಬ ಪಸರಿಸಲಿ, ಇಂದಿನ ಆಧುನಿಕ ಜಗತ್ತಿನಲ್ಲಿ ದೈಹಿಕ ಹಾಗೂ ಮಾನಸಿಕ ಶ್ರಮದಿಂದ ಮಾಡುವ ಸಾಂಸ್ಕೃತಿಕ ಕಲೆಗಳು ನಶಿಸಿ ಹೋಗುತ್ತಿರುವುದು ದೊಡ್ಡ ದುರಂತವಾಗಿದೆ. ಆದ್ದರಿಂದ ಸಾಂಸ್ಕೃತಿಕ ಕಲೆಗಳನ್ನು ಜೀವಂತಗೊಳಿಸಲು ಇಂತಹ ಅಭೂತಪೂರ್ವ ಕಾರ್ಯಕ್ರಮಗಳು ಅವಶ್ಯವಾಗಿವೆ. ಈ ಕಾರ್ಯಕ್ರಮದಲ್ಲಿ ಏರ್ಪಡುವ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇಫ್ಕೋ ಸಂಸ್ಥೆ ವತಿಯಿಂದ ಸಹಕಾರ ನೀಡಲಾಗುವುದು ಎಂದರು.

ಸಿಇಎಸ್‌ ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್‌.ಎಸ್‌.ಪಾಟೀಲ ಮಾತನಾಡಿ, ಕರ್ನಾಟಕ ವಿಶ್ವವಿದ್ಯಾಲಯದ ಯುವ ಜನೋತ್ಸವವು ನಾಡಿನ ಭವ್ಯ ಸಂಸ್ಕೃತಿ ಬಿಂಬಿಸುವ ಹಬ್ಬವಾಗಿದೆ. ಆ ಹಬ್ಬವು ಸಾಂಸ್ಕೃತಿಕೆ ಶ್ರೀಮಂತಿಕೆಯನ್ನು ಅಚ್ಚಳಿಯದೇ ಉಳಿಸಿಕೊಂಡು ಇಂದಿನ ಯುವ ಪೀಳಿಗೆಯ ಮುಖಾಂತರ ಮುಂದಿನ ತಲೆಮಾರಿನ ವರೆಗೂ ಕೊಂಡೊಯ್ಯುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.

ಪ್ರಾಚಾರ್ಯ ಡಾ| ಎಸ್‌.ಬಿ.ಚನ್ನಗೌಡ್ರ ಮಾತನಾಡಿ, ಯುವಜನೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನೆರವೇರಲಿದೆ. ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 40 ಕಾಲೇಜುಗಳು 27 ಸಾಂಸ್ಕೃತಿಕ ವಿಭಾಗಗಳಾದ ಸಂಗೀತ, ಸಾಹಿತ್ಯ, ನಾಟಕ, ಚಿತ್ರಕಲೆಗಳಿಗೆ ಸಂಬಂಸಿದ ಶಾಸ್ತ್ರೀಯ ಸಂಗೀತ, ಪಾಶ್ಚಿಮಾತ್ಯ ಸಮೂಹ ಗೀತೆ, ಜಾನಪದ ಬುಡಕಟ್ಟು ನೃತ್ಯ, ರಸಪ್ರಶ್ನೆ, ಸಿದ್ಧಬಾಷಣ, ಮಣ್ಣಿನ ಕಲಾಕೃತಿಗಳ ರಚನೆ, ವ್ಯಂಗ್ಯ ಚಿತ್ರಗಾರಿಕೆ, ಈ ಎಲ್ಲ ವೈವಿಧ್ಯಮಯ ಸಾಂಸ್ಕೃತಿಕ ವಿಭಾಗಗಳಲ್ಲಿ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಾಚಾರ್ಯರಿಂದ ದೃಢೀಕರಿಸಿಕೊಂಡು ಸೆ.26, 27 ರಂದು ನಡೆಯುವ ಈ ಸಾಂಸ್ಕೃತಿಕ ಹಬ್ಬಕ್ಕೆ ಪಾಲ್ಗೊಳ್ಳಬಹುದಾಗಿದೆ ಎಂದು ಹೇಳಿದರು. ಸಂಸ್ಥೆಯ ಅಧ್ಯಕ್ಷ ಎಸ್‌.ಬಿ.ತಿಪ್ಪಣ್ಣನವರ, ಜಿಪಂ ಸದಸ್ಯರಾದ ಪ್ರಕಾಶ ಬನ್ನಿಕೋಡ, ಮಾದೇವಕ್ಕ ಗೊಪಕ್ಕಳ್ಳಿ, ಎನ್‌.ಎಂ.ಈಟೇರ, ಸಂಸ್ಥೆಯ ನಿರ್ದೇಶಕ ಎಂ.ವಿ.ಹೊಂಬರಡಿ, ಯು.ಯು. ಬಣಕಾರ, ಏಕೇಶ ಬಣಕಾರ, ಆನಂದಪ್ಪ ಹಾದಿಮನಿ, ಎಲ್.ಬಿ.ತೆಂಬದ, ಸಿದ್ದನಗೌಡ ನರೇಗೌಡ್ರ, ಆನಂದಪ್ಪ ಹಾದಿಮನಿ, ದುರಗಪ್ಪ ನೀರಲಗಿ, ರಮೇಶ ಮಡಿವಾಳರ, ಇತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.