ಲಿಂ| ಶಾಂತವೀರ ಪಟ್ಟಾಧ್ಯಕ್ಷರ ಸೇವೆ ಸಾರ್ಥಕ: ಸ್ವಾಮೀಜಿ

ಅಂತಹ ಸ್ಮರಣೀಯರಲ್ಲಿ ಲಿಂ.ಶಾಂತವೀರ ಪಟ್ಟಾಧ್ಯಕ್ಷರು ಅಗ್ರಗಣ್ಯರು

Team Udayavani, Feb 28, 2022, 6:20 PM IST

ಲಿಂ| ಶಾಂತವೀರ ಪಟ್ಟಾಧ್ಯಕ್ಷರ ಸೇವೆ ಸಾರ್ಥಕ: ಸ್ವಾಮೀಜಿ

ಹಾವೇರಿ: ಪ್ರತಿ ಮನೆ ಮಠವಾಗಬೇಕು, ಪ್ರತಿ ಮಠವೂ ಶಿವಯೋಗವಾಗಬೇಕು. ಅಂತಹ ಸಂಸ್ಕಾರ ಸಿಗಬೇಕಾದರೆ ಅದಕ್ಕೆ ಮಹಾತ್ಮರ ಸಾರ್ಥಕ ಸೇವೆ ಕಾರಣವಾಗುತ್ತದೆ. ಅಂತಹ ಸಾರ್ಥಕ ಸೇವೆಯ ಮೂಲಕ ಭಕ್ತರ ಮನೆಯನ್ನು ಮಠವಾಗಿಸಿ, ಸಿಂದಗಿ ಮಠವನ್ನು ಶಿವಯೋಗವಾಗಿಸಿದ ಕೀರ್ತಿ ಲಿಂ| ಶಾಂತವೀರ ಪಟ್ಟಾಧ್ಯಕ್ಷರಿಗೆ ಸಲ್ಲುತ್ತದೆ ಎಂದು ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಹೇಳಿದರು.

ನಗರದ ಸಿಂದಗಿ ಮಠದಲ್ಲಿ ಹಮ್ಮಿಕೊಂಡಿರುವ ಲಿಂ|ಶಾಂತವೀರ ಪಟ್ಟಾಧ್ಯಕ್ಷರ 42ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಕ್ತರ ಮನೆಯಂಗಳಕ್ಕೆ ಹೋಗಿ ಅವರ ಕಷ್ಟಗಳಿಗೆ ಸಾಂತ್ವನಪರ ಪರಿಹಾರ ಕಲ್ಪಿಸಿ, ತಮ್ಮ ಮಾತೇ ಮಂತ್ರವಾಗಿಸಿ, ಧಾರ್ಮಿಕ ಪಾಠಶಾಲೆ ಸ್ಥಾಪನೆ ಮೂಲಕ ಬಡ ವಿದ್ಯಾರ್ಥಿಗಳಿಗೆ ಅನ್ನ, ಅರಿವು, ಆಶ್ರಯದ ಜೊತೆಗೆ ಆರೋಗ್ಯ ಭಾಗ್ಯ ನೀಡಿ, ಅವರು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಶ್ರಮಿಸಿದ ಲಿಂ.ಶಾಂತವೀರ ಪಟ್ಟಾಧ್ಯಕ್ಷರು ದೂರದೃಷ್ಟಿಯುಳ್ಳ ಜನಪರ ಸ್ವಾಮೀಜಿಗಳಾಗಿದ್ದರು ಎಂದು ಹೇಳಿದರು.

ಮಹಾತ್ಮರ ಜೀವನ ದರ್ಶನ ಪ್ರವಚನ ನೀಡಿ ಮಾತನಾಡಿದ ಮುದುಗಲ್‌ನ ಮಹಾಂತ ಸ್ವಾಮೀಜಿ, ಮಾನವನ ಬದುಕಿನಲ್ಲಿ ತಾಯಿ, ಮಹಾತ್ಮ ಮತ್ತು ಪರಮಾತ್ಮ ಅವರ ಆಶೀರ್ವಾದ ಅತೀ ಅವಶ್ಯಕವಾಗಿದೆ. ಅವರ ಸ್ಮರಣೆ ಮತ್ತು ಸೇವೆ ಮಾಡುವುದರ ಮೂಲಕ ಅವರ ಪ್ರೀತಿಗೆ ಪಾತ್ರರಾದಾಗ ಬದುಕು ಪರಿಪೂರ್ಣವಾಗುತ್ತದೆ. ಅಂತಹ ಸ್ಮರಣೀಯರಲ್ಲಿ ಲಿಂ.ಶಾಂತವೀರ ಪಟ್ಟಾಧ್ಯಕ್ಷರು ಅಗ್ರಗಣ್ಯರು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬಳೇಬಾಳುದ ಸೋಮಯ್ಯ ಹಿರೇಮಠ ಭಕ್ತಿ ಸಂಗೀತ ಸುಧೆ ಹರಿಸಿದರು. ಡಾ| ಎಸ್‌.ಬಿ.ಬೆನ್ನೂರ ಮತ್ತು ತಂಡದವರು ಜಾನಪದ ಸಂಗೀತ ಪ್ರಸ್ತುತ ಪಡಿಸಿದರು. ಸಮಾರಂಭದಲ್ಲಿ ಹೋತನಹಳ್ಳಿಯ ಶಂಭುಲಿಂಗ ಪಟ್ಟಾಧ್ಯಕ್ಷರು, ಭೈರನಹಟ್ಟಿಯದೊರೆಸ್ವಾಮಿ ಮಠದ ಶಾಂತಲಿಂಗ ಸ್ವಾಮೀಜಿ, ಎಂ.ಎಸ್‌.ಹಿರೇಮಠ, ಶಂಕರಣ್ಣ ಪಾಟೀಲ, ಚನ್ನವೀರಪ್ಪ ಬೋಳಕಟ್ಟಿ, ಚನ್ನಬಸವ ಹಿರೇಮಠ ಸೇರಿದಂತೆ ಇತರರು ಇದ್ದರು. ಜಿ.ಎಸ್‌ .ಭಟ್‌ ಸ್ವಾಗತಿಸಿ, ಶಿವಬಸಯ್ಯ ಆರಾಧ್ಯಮಠ ನಿರೂಪಿಸಿದರು.

ವಿದ್ಯಾರ್ಥಿಗಳಿಗೆ ಅನ್ನ, ಅರಿವು, ಆಶ್ರಯದ ಜೊತೆಗೆ ಆರೋಗ್ಯ ಭಾಗ್ಯ ನೀಡಿ, ಅವರು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಶ್ರಮಿಸಿದ ಲಿಂ|ಶಾಂತವೀರ ಪಟ್ಟಾಧ್ಯಕ್ಷರು ದೂರದೃಷ್ಟಿಯುಳ್ಳ ಜನಪರ ಸ್ವಾಮೀಜಿಗಳಾಗಿದ್ದರು.
ಸದಾಶಿವ ಸ್ವಾಮೀಜಿ,
ಹುಕ್ಕೇರಿಮಠ, ಹಾವೇರಿ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.