ಹಾವೇರಿ: 25ರವರೆಗೆ ಸಂಪೂರ್ಣ ಲಾಕ್‌ಡೌನ್
Team Udayavani, May 20, 2021, 7:02 PM IST
ಹಾವೇರಿ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಮೇ 21ರ ಬೆಳಗ್ಗೆ 6 ಗಂಟೆಯಿಂದ ಮೇ 25ರವರೆಗೆ ಸಂಪೂರ್ಣ ಲಾಕ್‌ಡೌನ್ ಮಾಡಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ತಡೆಯಲು ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮೇ 21ರ ಬೆಳಗ್ಗೆ 6 ಗಂಟೆಯಿಂದ ಮೇ 25ರವರೆಗೆ ದಿನಸಿ, ತರಕಾರಿ ಸೇರಿದಂತೆ ಅಗತ್ಯ ವಸ್ತು ಖರೀದಿಗೂ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಮೇ 21ರಂದು ಬೆಳಗ್ಗೆ 6 ಗಂಟೆಯಿಂದ ಮೇ 23ರ ಬೆಳಗ್ಗೆ 6 ಗಂಟೆವರೆಗೆ ದಿನಸಿ, ತರಕಾರಿ ಖರೀದಿಗೂ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ಆಸ್ಪತ್ರೆ, ಔಷ ಧ ಅಂಗಡಿ, ಪೆಂಟ್ರೋಲ್ ಬಂಕ್, ಆಕ್ಸಿಜನ್ ಉತ್ಪಾದನಾ ಘಟಕ, ಆಂಬ್ಯುಲೆನ್ಸ್, ಎಟಿಎಂ ಸೇವೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳನ್ನು ಜಿಲ್ಲಾದ್ಯಂತ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಮೇ 23ರಂದು ಬೆಳಗ್ಗೆ 6ರಿಂದ 10 ಗಂಟೆವರೆಗೆ ಒಂದು ದಿನ ಮಾತ್ರ 4 ಗಂಟೆ ಅವಕಾಶ ನೀಡಿದ್ದು, ಅದೂ ಸಹ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ದಿನಸಿ, ತರಕಾರಿ ಖರೀದಿಗೆ ಅವಕಾಶ ನೀಡಲಾಗಿದೆ. ಮೇ 23ರ 10 ಗಂಟೆಯಿಂದ ಮೇ 25ರ ಬೆಳಗ್ಗೆ 6 ಗಂಟೆವರೆಗೂ ಮತ್ತೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲ ಚಟುವಟಿಕೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಕೋವಿಡ್ ಮಾರ್ಗಸೂಚಿಯನ್ವಯ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡಲಾಗಿದೆ. ಎಲ್ಲದಕ್ಕೂ ಸರ್ಕಾರವನ್ನೇ ಅವಲಂಬಿಸದೇ ಜನರು ಸ್ವಯಂ ಪ್ರೇರಣೆಯಿಂದ ಸರ್ಕಾರದ ಮಾರ್ಗಸೂಚಿ ಪಾಲಿಸುವ ಅವಶ್ಯಕತೆ ಇದ್ದು, ಈ ಮೂಲಕ ಸೋಂಕು ಹೊಡೆದೋಡಿಸಲು ಎಲ್ಲರೂ ಮುಂದಾಗಬೇಕಿದೆ. ಮುಂದಿನ ಬದುಕು ಸುಗಮವಾಗಬೇಕಾದಲ್ಲಿ ಲಾಕ್‌ಡೌನ್‌ಗೆ ಸಹಕಾರ ನೀಡುವಂತೆ ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕಿ: ಇಂದಿನಿಂದ ‘ಬೈರಾಗಿ’ ದರ್ಶನ
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)
ದಾಖಲೆಯ ದೂರಕ್ಕೆ ಜಾವೆಲಿನ್ ಎಸೆದ ನೀರಜ್ ಚೋಪ್ರಾ; ಹೊಸ ದಾಖಲೆ ಬರೆದ ಚಿನ್ನದ ಹುಡುಗ| Video
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!