ಸಾಂಕ್ರಾಮಿಕ ರೋಗ ತಡೆಗೆ ಸ್ವಚ್ಛತೆ ಕಾಪಾಡಿ

•ರೋಗಮುಕ್ತ ಸಮಾಜಕ್ಕೆ ಪಣ ತೊಡಿ• ಮನೆ ಸುತ್ತಲೂ ನೀರು ನಿಲ್ಲದಂತೆೆ ಎಚ್ಚರ ವಹಿಸಿ

Team Udayavani, Jun 20, 2019, 11:07 AM IST

HV-TDY-3..

ಗುತ್ತಲ: ಮಲೇರಿಯಾ ವಿರೋಧಿ ಮಾಸಾಚರಣೆ ನಿಯಂತ್ರಣ ಹಾಗೂ ಅರಿವು ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶಾಲಾ ಮಕ್ಕಳು ಜಾಗೃತಿ ಜಾಥಾ ನಡೆಸಿದರು.

ಗುತ್ತಲ: ಚಿಕನ್‌ ಗುನ್ಯಾ, ಡೆಂಘೀ, ಮಲೇರಿಯಾದಂತ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಸೊಳ್ಳೆಗಳು ಪ್ರಮುಖ ಕಾರಣವಾಗಿದ್ದು, ಅವುಗಳನ್ನು ನಿಯಂತ್ರಿಸಿ ರೋಗ ಮುಕ್ತ ಸಮಾಜ ನಿರ್ಮಾಣ ಮಾಡುವುದು ಅವಶ್ಯವಿದೆ ಎಂದು ನೆಗಳೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಬಸವರಾಜ ಪಟ್ಟಣಶೆಟ್ಟಿ ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರ ಗುತ್ತಲ ಹಾಗೂ ನೆಗಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ನಿಯಂತ್ರಣ ಹಾಗೂ ಅರಿವು ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಡಾ| ಡಿಡಿಎಂ ಪ್ರೌಢಶಾಲೆ ಮಕ್ಕಳಿಂದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರ ಮನೆಯ ಸುತ್ತಮುತ್ತಲೂ ಶುಚಿತ್ವ ಕಾಪಾಡಿಕೊಳ್ಳುವುದರಿಂದ ಯಾವುದೇ ರೀತಿಯ ಕಾಯಿಲೆಗಳಿಂದ ದೂರವಿರಬಹುದು. ಆದರಲ್ಲೂ ಮಳೆಗಾಲದಲ್ಲಿ ಮನೆಯ ಸುತ್ತಲಿನಲ್ಲಿ ನೀರು ನಿಲ್ಲದಂತೆೆ ಎಚ್ಚರ ವಹಿಸುವುದು ಅವಶ್ಯವಾಗಿದೆ. ನಿಂತ ನೀರಿನಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚು ಕಂಡು ಬರುತ್ತದೆ. ಮಲೇರಿಯಾ ಕುರಿತು ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಹಾಗೂ ರಕ್ತ ಪರೀಕ್ಷೆ ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು.

ಡಿಡಿಎಂ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಜಿ.ಡಿ. ಪಾಟೀಲ ಮಾತನಾಡಿ, ಸೊಳ್ಳೆಗಳು ಕಚ್ಚುವುದರಿಂದ ಚಿಕನ್‌ ಗುನ್ಯಾ, ಡೆಂಘೀ, ಮಲೇರಿಯಾ, ಮೆದುಳು ಜ್ವರ ಸಂಬಂಧಿಸಿದಂತೆ ಅನೇಕ ಸಾಂಕ್ರಾಮಿಕ ರೋಗಗಳ ಹರಡುತ್ತವೆ. ಸ್ವಚ್ಛ ಪರಿಸರ ನಿರ್ಮಿಸಿಕೊಳ್ಳುವದರಿಂದ ಪ್ರತಿಯೊಬ್ಬರು ಸಾಂಕ್ರಾಮಿಕ ರೋಗಗಳಿಂದ ಮುಕ್ತರಾಗಿ ಭಾರತವನ್ನು ಮಲೇರಿಯಾ ಮುಕ್ತ ದೇಶವನ್ನಾಗಿ ಮಾಡಬಹುದು ಎಂದರು.

ಜಾಥಾದಲ್ಲಿ ಮಲೇರಿಯಾ ರೋಗ ತಡೆಗಟ್ಟುವ ಕುರಿತು ಘೋಷಣೆ ಕೂಗುತ್ತ ಸಾಗಿದರು. ನಂತರ ಆಸ್ಪತ್ರೆಯ ಆವರಣದಲ್ಲಿ ಪಟ್ಟಣ ಸೇರಿದಂತೆ ಹಳ್ಳಿಗಳಿಂದ ಬಂದ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ರೋಗ ತಡೆಗಟ್ಟುವ ಕುರಿತು ಅರಿವು ಮೂಡಿಸಲಾಯಿತು.

ಡಾ| ಚಂದ್ರಶೇಖರ ಹೊತ್ತಿಗೆಗೌಡ್ರ, ಡಾ| ದೀಪ್ತಿ ಮಮದಾಪುರ, ಆರೋಗ್ಯ ಸಹಾಯಕರಾದ ಚಂದ್ರಶೇಖರ ಹಿತ್ತಲಮನಿ, ಮಾಲತೇಶ ಪುಟ್ಟನಗೌಡ್ರ, ವೈ.ಎಂ. ಚೌಡಪ್ಪನವರ, ನಂದಿನಿ ಬಿ., ರೇಖಾ ಚಿಂದಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಬಿ.ಜಿ. ಗೌಡಪ್ಪನವರ, ಜಿ.ಎಸ್‌. ವಿಭೂತಿ, ಯು.ಎಸ್‌. ಪಾಟೀಲ, ಎಂ.ಎಸ್‌. ಭತ್ತದ, ಆರ್‌.ಎಂ. ಬಳ್ಳಾರಿ ಸೇರಿದಂತೆ ಅನೇಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.