- Sunday 15 Dec 2019
ಸಾಲಮನ್ನಾ ಫಲಾನುಭವಿ ಖಾತೆಗೆ ಹಣ ಜಮೆ ಮಾಡಿ
Team Udayavani, Jul 21, 2019, 12:34 PM IST
ಹಾವೇರಿ: ರೈತ ಸಂಘದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಾವೇರಿ: ರಾಜ್ಯ ಸರ್ಕಾರದ ಸಾಲಮನ್ನಾ ಘೋಷಣೆಯಿಂದ ಜಿಲ್ಲೆಯ ಬಹುತೇಕ ರೈತರಿಗೆ ಏನೂ ಪ್ರಯೋಜನವಾಗಿಲ್ಲ. ಸರ್ಕಾರ ಕೂಡಲೇ ಸಾಲಮನ್ನಾ ಫಲಾನುಭವಿ ರೈತರ ಖಾತೆಗೆ ಹಣ ಜಮೆ ಮಾಡಬೇಕು. ಇಲ್ಲದಿದ್ದರೆ ಆಗಸ್ಟ್ 19ರಂದು ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಎಚ್ಚರಿಕೆ ನೀಡಿದರು.
ನಗರದ ಪ್ರವಾಸಿಗೃಹದಲ್ಲಿ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ದುರಾಡಳಿತದಿಂದ ಜನತೆ ಭ್ರಮ ನಿರಸನಗೊಂಡಿದ್ದಾರೆ. ಹಿಂದೆಂದೂ ಕಂಡರಿಯದ ಭೀಕರ ಬರಗಾಲದಿಂದ ತತ್ತರಿಸಿ ರೈತರು ಹತಾಶರಾಗಿದ್ದಾರೆ. ರೈತರಿಗೆ ವರವಾಗಬೇಕಿದ್ದ ರಾಜ್ಯ ಸರ್ಕಾರದ ಸಾಲಮನ್ನಾ ಯೋಜನೆ ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದರು.
ಸಾಲಮನ್ನಾದ ಗೊಂದಲದಿಂದಾಗಿ ರೈತರನ್ನು ಪ್ರಪಾತಕ್ಕೆ ನೂಕಿದಂತಾಗಿದೆ. ಸಾಲಮನ್ನಾದ ಮಾಹಿತಿ ಯಾವ ಅಧಿಕಾರಿಗಳಿಂದಲೂ ಸಿಗುತ್ತಿಲ್ಲ, ಬ್ಯಾಂಕ್ ವ್ಯವಸ್ಥಾಪಕರು, ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಬಳಿಯೂ ಸಿಗುತ್ತಿಲ್ಲ, ನಮ್ಮ ಸಾಲಮನ್ನಾ ಆಗುತ್ತದೆಯೋ ಇಲ್ಲವೋ ಎಂಬುದು ರೈತರಿಗೆ ಗೊತ್ತಾಗುತ್ತಿಲ್ಲ, ಅವರಿಗೆ ಹೊಸ ಸಾಲವೂ ಸಿಗುತ್ತಿಲ್ಲ. ಹೀಗಾಗಿ ರೈತರು ಮಾಹಿತಿಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಕೂಡಲೇ ರೈತರಿಗೆ ಸರಿಯಾದ ಮಾಹಿತಿ ನೀಡಿ ಗೊಂದಲ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.
ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಒಂದು ತಿಂಗಳು ತಡವಾಗಿ ಬಿತ್ತನೆಯಾಗಿದೆ. ಮುಂದೆ ಸರಿಯಾಗಿ ಬೆಳೆ ಬರುತ್ತದೆಯೋ ಇಲ್ಲವೋ ಎಂಬ ಚಿಂತೆ ರೈತರನ್ನು ಕಾಡುತ್ತಿದೆ. ಇನ್ನೂ ಹಳ್ಳಿಗಳಲ್ಲಿ ಕುಡಿಯಲು ಸಮರ್ಪಕ ನೀರು, ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ, ಕೆರೆಗಳಲ್ಲಿ ನೀರು ತುಂಬಿಲ್ಲ. ಅಧಿಕಾರಿಗಳು ಸಹ ಜನರಿಗೆ ಸ್ಪಂದಿಸುತ್ತಿಲ್ಲ, ಜಿಲ್ಲಾಡಳಿತ ಸಂಪೂರ್ಣ ನಿಷ್ಕ್ರೀಯವಾಗಿದೆ.
ಉಸ್ತುವಾರಿ ಸಚಿವರು ಜಿಲ್ಲೆಯನ್ನು ಮರೆತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ರೇಸಾರ್ಟ್ ರಾಜಕಾರಣ ಮಾಡುತ್ತಿದ್ದು, ಜನರ ಗೋಳು ಕೇಳುವವರಿಲ್ಲದಾಗಿದೆ ಎಂದು ಕೆಂಚಳ್ಳೇರ ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಜಿಲ್ಲೆಗೆ 158ಕೋಟಿ ರೂ., ಬೆಳೆವಿಮೆ ಮಂಜೂರಾಗಿದೆ ಎಂದು ಕೃಷಿ ಅಧಿಕಾರಿಗಳು ಹೇಳುತ್ತಾರೆ. ಯಾವ ರೈತರಿಗೆ, ಯಾವ ಬೆಳೆಗೆ ಎಷ್ಟು ವಿಮೆ ಬಂದಿದೆ ಎಂಬ ಮಾಹಿತಿ ಸಿಗುತ್ತಿಲ್ಲ, ಕೂಡಲೇ ಯಾವ ಬೆಳೆಗೆ ಎಷ್ಟು ಹಣ ಬಂದಿದೆ ಎಂಬ ಮಾಹಿತಿ ಕೊಟ್ಟು ತಕ್ಷಣ ರೈತರ ಖಾತೆಗೆ ವಿಮಾ ಹಣ ಜಮೆ ಮಾಡಬೇಕು. ಸಾಲಮನ್ನಾ ಯೋಜನೆಯನ್ನು ಒಮ್ಮೆ ಕೈಗೆತ್ತಿಕೊಂಡಿದ್ದು, ಹೆಚ್ಚು ದಿನದೂಡದೇ ಅದನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ಪ್ರಮುಖರಾದ ಪ್ರಭುಗೌಡ ಪ್ಯಾಟಿ, ಸುರೇಶ ಚಲವಾದಿ ಸುದ್ದಿಗೋಷ್ಠಿಯಲ್ಲಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ರಾಣಿಬೆನ್ನೂರು: ನಗರದ ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕ ನಾಮದೇವ ಕಾಗದಗಾರ ಅವರು ಸೆರೆ ಹಿಡಿದ ನಿಸರ್ಗ ವಿಭಾಗದ ಮೂರು ಚಿತ್ರಗಳು ಅಂತಾರಾಷ್ಟ್ರೀಯ ಛಾಯಾಚಿತ್ರ...
-
ಬ್ಯಾಡಗಿ: ಪಟ್ಟಣದ ಮೆಣಸಿನಕಾಯಿ ಮಾರುಕಟ್ಟೆಯ (ಎಪಿಎಂಸಿ ಯಾರ್ಡ್) ಹಿಂದಿನ ಭಾಗದಲ್ಲಿರುವ ಮುಕ್ತಿಧಾಮದಿಂದ ಗುಮ್ಮನಹಳ್ಳಿ ಹಳ್ಳದವರೆಗೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ...
-
ಬ್ಯಾಡಗಿ: ಅತಿವೃಷ್ಟಿಯಿಂದ ರಾಜ್ಯದ ಜನರು ಕಂಗಾಲಾಗಿದ್ದು, ಮರುವಸತಿ ಕಲ್ಪಿಸಲು ಬದ್ಧವಾಗಿದ್ದೇವೆ. ಮುಂದಿನ ಮೂರುವರೆ ವರ್ಷಗಳ ಅವ ಧಿಯಲ್ಲಿ ಬಿಎಸ್‌ವೈ ನೇತೃತ್ವದ...
-
ಹಾನಗಲ್ಲ: ತಾಲೂಕಿನಲ್ಲಿ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಮ್ಮ ಗ್ರಾಮಗಳಿಗೆ ತಲುಪಲು ಬಸ್ ಸೌಲಭ್ಯಸಿಗುತ್ತಿಲ್ಲ ಎಂದು ಖಂಡಿಸಿ ಎಬಿವಿಪಿ ವತಿಯಿಂದ...
-
ಶಿಗ್ಗಾವಿ: ಕಾಲ ಕಾಲಕ್ಕೆ ಮಣ್ಣಿನ ಪರೀಕ್ಷೆ ಮಾಡಿಸಿ, ಕೊರತೆಯಾದ ಪೋಷಕಾಂಶವನ್ನು ಸರಿದೂಗಿಸುವ ಮೂಲಕ ಕೃಷಿ ಜಮೀನನ್ನು ಫಲವತ್ತಗೊಳಿಸಬೇಕು ಎಂದು ಧುಂಡಶಿ ರೈತ...
ಹೊಸ ಸೇರ್ಪಡೆ
-
ಮೂಲ್ಕಿ: ಇಲ್ಲಿನ ಶಿಮಂತೂರು ಪರಂಕಿಲ ಎಂಬಲ್ಲಿನ ಮನೆಯೊಂದರಲ್ಲಿ ಶನಿವಾರ ರಾತ್ರಿ ಮಹಿಳೋರ್ವರನ್ನು ಕೊಲೆಗೈದ ಘಟನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶಾರದಾ...
-
ಬೆಂಗಳೂರು: ಹೃದಯ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಡಿಸ್ಚಾರ್ಜ್ ಆದರು. ಐದು ದಿನಗಳ ಹಿಂದೆ ಸಿದ್ದರಾಮಯ್ಯ...
-
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಸಮೀಪ ಶನಿವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ...
-
ದಾವಣಗೆರೆ: ನೂತನವಾಗಿ ಮೊಬೈಲ್ ಶೋರೂಂ ಪ್ರಾರಂಭಿಸಿದ ಹಿನ್ನಲೆ, ಕಡಿಮೆ ಬೆಲೆಗೆ ಮೊಬೈಲ್ ಮಾರಾಟ ಮಾಡಲು ಮುಂದಾಗಿದ್ದ ಅಂಗಡಿ ಸಿಬಂದಿಗೆ ಬೆಳ್ಳಂಬೆಳಗ್ಗೆಯೇ ಆಘಾತ...
-
ಲಂಡನ್: ಈ ವರ್ಷದ ವಿಶ್ವ ಸುಂದರಿ ಅಂತಿಮ ಸುತ್ತು ಶನಿವಾರ ರಾತ್ರಿ ನಡೆದಿದ್ದು ಅಂತಿಮ ಪ್ರಶಸ್ತಿ ಪ್ರಕಟವಾಗಿದೆ. ಜಮೈಕಾದ ಟೋನಿ ಆನ್ ಸಿಂಗ್ ವಿಶ್ವ ಸುಂದರಿ ಕಿರೀಟ...