Udayavni Special

ನೂತನ‌ ಸಚಿವ ಬೊಮ್ಮಾಯಿ ಮೇಲಿವೆ ಹಲವು ನಿರೀಕ್ಷೆ


Team Udayavani, Aug 21, 2019, 1:03 PM IST

hv-tdy-1

ಹಾವೇರಿ: ರಾಜ್ಯ ಬಿಜೆಪಿ ಸರ್ಕಾರ ಮೊದಲ ಮಂತ್ರಿಮಂಡಲದಲ್ಲಿ ಜಿಲ್ಲೆಯ ಶಾಸಕರೋರ್ವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲೆಯ ಬಹುದಿನಗಳ ಬೇಡಿಕೆಗಳು ಇವರ ಅವಧಿಯಲ್ಲಾದರೂ ಈಡೇರಬಹುದು ಎಂಬ ಆಸೆ ಚಿಗುರೊಡೆದಿದೆ.

ಬಸವರಾಜ ಬೊಮ್ಮಾಯಿಯವರು ಜಿಲ್ಲೆಯ ಉಸ್ತುವಾರಿ ಸಚಿವರಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಕನಸುಗಳಿಗೆ ಮರುಜೀವ ಬಂದಿದೆ. ಜಿಲ್ಲೆಯಲ್ಲಿ ಬಹುಮುಖ್ಯವಾಗಿ ಬಹುವರ್ಷಗಳಿಂದ ಮೆಡಿಕಲ್ ಕಾಲೇಜು ಸ್ಥಾಪನೆ ಬೇಡಿಕೆ ಇನ್ನೂ ಬೇಡಿಕೆಯಾಗಿಯೇ ಉಳಿದಿದೆ. ಇದರ ಜತೆಗೆ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ರಚನೆ, ಪ್ರತ್ಯೇಕ ಜಿಲ್ಲಾ ಸಹಕಾರಿ ಬ್ಯಾಂಕ್‌ ಸ್ಥಾಪನೆ ಸೇರಿದಂತೆ ಹತ್ತು ಹಲವು ಬೇಡಿಕೆಗಳು ನೂತನ ಸಚಿವ ಬಸವರಾಜ ಬೊಮ್ಮಾಯಿಯವರ ಅವಧಿಯಲ್ಲಾದರೂ ಈಡೇರಬಹುದು ಎಂದು ನಿರೀಕ್ಷಿಸಲಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜ್‌ 2013ರಲ್ಲಿ ಜಿಲ್ಲೆಗೆ ಮಂಜೂರಿ ಆಗಿಯೇ ಹೋಯಿತು ಎಂಬಷ್ಟರ ಮಟ್ಟಿಗೆ ಕಾಗದ ಪತ್ರಗಳ ವಹಿವಾಟು ನಡೆಯಿತು. ಆದರೆ, ಕೊನೆಯ ಘಳಿಗೆಯಲ್ಲಿ ಅದು ಕೈತಪ್ಪಿ ಬೇರೆ ಜಿಲ್ಲೆಗಳ ಪಾಲಾಯಿತು. 2017ರಲ್ಲಿ ಮತ್ತೆ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ಘೋಷಣೆಯಾಯಿತು. ಆದರೆ, ಆರ್ಥಿಕ ಇಲಾಖೆ ಅನುಮೋದನೆ ಮಾತ್ರ ಸಿಕ್ಕಿಯೇ ಇಲ್ಲ. ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿರುವುದರಿಂದ ಜಿಲ್ಲೆಯ ಬಹುಮುಖ್ಯ ಬೇಡಿಕೆಯಾದ ಮೆಡಿಕಲ್ ಕಾಲೇಜು ಸ್ಥಾಪನೆ ಕನಸು ನನಸಾದೀತು ಎಂಬ ಆಶಾಭಾವ ಜನತೆ ಹೊಂದಿದೆ.

2016ರ ಬಜೆಟ್‌ನಲ್ಲಿ ಘೋಷಣೆಯಾದ ಪ್ರತ್ಯೇಕ ಜಿಲ್ಲಾ ಸಹಕಾರಿ ಬ್ಯಾಂಕ್‌ ಅನುಷ್ಠಾನ ಬೊಮ್ಮಾಯಿಯವರಿಂದ ಸಾಕಾರಗೊಳ್ಳಬಹುದು ಎಂಬ ನಿರೀಕ್ಷೆ ಗರಿಗೆದರಿದೆ. ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಚಾಲನೆ ನೀಡಬಹುದು. ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರಗಳು ಅಕೃತವಾಗಿ ಕಾರ್ಯಾರಂಭಿಸುವಲ್ಲಿ ಸಚಿವ ಬೊಮ್ಮಾಯಿ ನಿಗಾ ವಹಿಸಬಹುದು ಎಂದು ಆಶಿಸಲಾಗಿದೆ.

ನೀರು, ನೀರಾವರಿ: ಜಿಲ್ಲೆಯಲ್ಲಿ ತುಂಗಭದ್ರಾ, ಧರ್ಮಾ, ಕುಮದ್ವತಿ, ವರದಾ ಹೀಗೆ ನಾಲ್ಕು ನದಿಗಳು ಹರಿದಿವೆ. ಇವುಗಳನ್ನು ಬಳಸಿಕೊಂಡು ಹಾವೇರಿ ನೀರಾವರಿ ಜಿಲ್ಲೆಯಾಗಬೇಕೆಂಬ ಕನಸು ಇನ್ನೂ ಕನಸಾಗಿಯೇ ಇದೆ. ನಿರಂತರ ನೀರು ಯೋಜನೆ ಜಿಲ್ಲೆಯ ಎಲ್ಲ ನಗರ, ಪಟ್ಟಣಗಳಲ್ಲಿ ಅನುಷ್ಠಾನಗೊಳ್ಳಬೇಕು. ಜಿಲ್ಲಾ ಕೇಂದ್ರ ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಲ್ಲಿ ಸ್ವಚ್ಛತೆ, ರಸ್ತೆ ಸೇರಿದಂತೆ ಮೂಲಸೌಲಭ್ಯ ಕೊರತೆ ಸಮಸ್ಯೆ ಕಾಡುತ್ತಿದ್ದು ಇವುಗಳಿಗೆ ಇತಿಶ್ರೀ ಹಾಡುವ ನಿಟ್ಟಿನಲ್ಲಿ ಬೊಮ್ಮಾಯಿ ಕ್ರಮ ಜರುಗಿಸಬಹುದು. ಈ ಹಿಂದೆ ಜಲಸಂಪನ್ಮೂಲ ಖಾತೆ ಸಚಿವರಾಗಿ ನೀರಾವರಿಗೆ ಹಲವು ಯೋಜನೆಗಳನ್ನು ರೂಪಿಸಿದ ಬೊಮ್ಮಾಯಿಯವರು ಈ ಬಾರಿ ಸರ್ಕಾರದ ಮೇಲೆ ಒತ್ತಡ ಹೇರಿ ಜಿಲ್ಲೆಗೆ ಹೊಸ ನೀರಾವರಿ ಯೋಜನೆ ಜಾರಿಗೆ ತರುವ ಜತೆಗೆ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳಿಗೆ ಜೀವ ತುಂಬುವ ಕಾರ್ಯ ಮಾಡಬಹುದು ಎಂದು ಜನತೆ ನಿರೀಕ್ಷಿಸಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಮೂಲಸೌಲಭ್ಯ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳು ಹೊಸ ಸಚಿವರ ಅವಧಿಯಲ್ಲಾದರೂ ಬೇಡಿಕೆ ಈಡೇರಬಹುದೇ ಎಂದು ಜನರು ಕಾತರದಿಂದ ಕಾಯುತ್ತಿದ್ದು ಸಚಿವರು ಯಾವ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

 

•ಎಚ್.ಕೆ. ನಟರಾಜ

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪೇಜಾವರ ಶ್ರೀಗಳು ಇಂದು ಅಯೋಧ್ಯೆಗೆ

ಪೇಜಾವರ ಶ್ರೀಗಳು ಇಂದು ಅಯೋಧ್ಯೆಗೆ

ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!

ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!

IPLಪಂಜಾಬ್‌ಗ ಸೋಲಿನ ಪಂಚ್‌ ನೀಡಿದ ರಾಜಸ್ಥಾನ್‌

ಪಂಜಾಬ್‌ಗ ಸೋಲಿನ ಪಂಚ್‌ ನೀಡಿದ ರಾಜಸ್ಥಾನ್‌

ಕಾಲೇಜಿನಲ್ಲಿ ಪ್ರಾಯೋಗಿಕ ತರಗತಿಗೆ ಆದ್ಯತೆ

ಕಾಲೇಜಿನಲ್ಲಿ ಪ್ರಾಯೋಗಿಕ ತರಗತಿಗೆ ಆದ್ಯತೆ

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಸೈನಿಕರಿಗೆ ಮೂಲ ಸೌಲಭ್ಯ ಕಲ್ಪಿಸಿ

ಮಾಜಿ ಸೈನಿಕರಿಗೆ ಮೂಲ ಸೌಲಭ್ಯ ಕಲ್ಪಿಸಿ

haveri

ಹಾವೇರಿ: ಇಂದು 45 ಜನರಿಗೆ ಕೋವಿಡ್ ಪಾಸಿಟಿವ್; 50 ಮಂದಿ ಗುಣಮುಖ

ನಿರಂತರ ಮಳೆಗೆ ಬೆಳೆ ಹಾನಿ: ಎರಡನೇ ಬಾರಿಗೆ ಬಿತ್ತನೆಗೆ ರೈತರ ಅಣಿ

ನಿರಂತರ ಮಳೆಗೆ ಬೆಳೆ ಹಾನಿ: ಎರಡನೇ ಬಾರಿಗೆ ಬಿತ್ತನೆಗೆ ರೈತರ ಅಣಿ

ಪೊಲೀಸ್‌ ತನಿಖಾಧಿಕಾರಿಗಳಿಗೆ ಕಾನೂನು ಜಾಗೃತಿ

ಪೊಲೀಸ್‌ ತನಿಖಾಧಿಕಾರಿಗಳಿಗೆ ಕಾನೂನು ಜಾಗೃತಿ

ಆಹಾರ ಉದ್ದಿಮೆಗಳ ಅವಕಾಶ ಸದ್ಬಳಕೆ ಅಗತ್ಯ

ಆಹಾರ ಉದ್ದಿಮೆಗಳ ಅವಕಾಶ ಸದ್ಬಳಕೆ ಅಗತ್ಯ

MUST WATCH

udayavani youtube

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

ಹೊಸ ಸೇರ್ಪಡೆ

MLR

ಕುಂಟುತ್ತಾ ಸಾಗುತ್ತಿದೆ ಪಚ್ಚನಾಡಿ ರೈಲ್ವೇ ಮೇಲ್ಸೇತುವೆ ಕಾಮಗಾರಿ

Vote

ಪಂಚಾಯತ್‌ ಚುನಾವಣೆಗೆ ತಾಲೀಮು

ಪೇಜಾವರ ಶ್ರೀಗಳು ಇಂದು ಅಯೋಧ್ಯೆಗೆ

ಪೇಜಾವರ ಶ್ರೀಗಳು ಇಂದು ಅಯೋಧ್ಯೆಗೆ

ಹುಲಿ ಹೆಜ್ಜೆ ಗುರುತು ಗ್ರಾಮಸ್ಥರು ಆತಂಕ

ಹುಲಿ ಹೆಜ್ಜೆ ಗುರುತು ಗ್ರಾಮಸ್ಥರು ಆತಂಕ

ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!

ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.