ಸವಾಲು ಎದುರಿಸಿ ಯಶಸ್ವಿಯಾಗ್ತೀನೆ; ಸಿಎಂ ಬಸವರಾಜ ಬೊಮ್ಮಾಯಿ

ಇತಿಹಾಸವನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

Team Udayavani, Dec 20, 2021, 6:23 PM IST

ಸವಾಲು ಎದುರಿಸಿ ಯಶಸ್ವಿಯಾಗ್ತೀನೆ; ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ/ಶಿಗ್ಗಾವಿ: ನನಗೆ ದೊಡ್ಡ ಆಸೆಯೇನಿಲ್ಲ. ನಿಮ್ಮ ಪ್ರೀತಿ, ವಿಶ್ವಾಸವನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕು ಎಂಬುದೇ ನನ್ನ ಆಸೆಯಾಗಿದೆ. ನಿಮ್ಮ ಪ್ರೀತಿ, ವಿಶ್ವಾಸದ ಮುಂದೆ ಯಾವ ಅಧಿಕಾರವೂ ಮಹತ್ವದ್ದಲ್ಲ. ನಮ್ಮ ಬದುಕೇ ಶಾಶ್ವತವಲ್ಲ. ಸ್ಥಾನಮಾನ, ಅಧಿಕಾರವೂ ಶಾಶ್ವತವಲ್ಲ..ಇವು ಕೆಲ ಕ್ಷಣ ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾವುಕರಾಗಿ ಆಡಿದ ಮಾತುಗಳು.

ಶಿಗ್ಗಾವಿ ಪಟ್ಟಣದಲ್ಲಿ ರವಿವಾರ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಹಾಗೂ ಪಂಚಮಸಾಲಿ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ
ಮಾತನಾಡುತ್ತಿದ್ದ ಸಂದರ್ಭದಲ್ಲಿ ಅವರು ಕ್ಷೇತ್ರದ ಜನರ ಪ್ರೀತಿ, ವಿಶ್ವಾಸವನ್ನು ನೆನೆಯುತ್ತ ಕೆಲ ಕ್ಷಣ ಭಾವುಕರಾದರು. ಕ್ಷೇತ್ರದ ಜನರ ಋಣ ತೀರಿಸಲು ಸಾಧ್ಯವೇ ಇಲ್ಲ. ನಿಮ್ಮ ಪ್ರೀತಿ, ವಿಶ್ವಾಸದ ಮುಂದೆ ಯಾವ ಅಧಿಕಾರವೂ ಮಹತ್ವದ್ದಲ್ಲ. ಇದರ ಅರಿವು ಪ್ರತಿ ಕÒ‌ಣದಲ್ಲೂ ನಮಗಿರಬೇಕು.

ನಿಮ್ಮ ಆಶೀರ್ವಾದದಲ್ಲಿ ದೊಡ್ಡ ಶಕ್ತಿಯಿದ್ದು, ಅದೇ ಇಂದು ನನ್ನನ್ನು ಇಲ್ಲಿಯವರೆಗೆ ತಂದು ನಿಲ್ಲಿಸಿದೆ. ಜವಾಬ್ದಾರಿಯಿಂದ ಬಸವರಾಜ ಬೊಮ್ಮಾಯಿ ಆಗಿ ಮಾತನಾಡುತ್ತಿದ್ದೇನೆ. ಈ ಕ್ಷೇತ್ರದ ಜನರ ಋಣ ನನ್ನ ಮೇಲಿದೆ. ಎಲ್ಲರೂ ನನ್ನ ಮೇಲೆ ಪ್ರೀತಿ, ವಿಶ್ವಾಸ, ಬೆಂಬಲ ಕೊಟ್ಟಿದ್ದೀರಿ. ನಿಮ್ಮೂರಿಗೆ ಬಂದಾಗ ರೊಟ್ಟಿ ತಿನ್ನಿಸಿದ್ದೀರಿ. ನವಣಕ್ಕಿ ಅನ್ನ ಮಾಡಿ ಹಾಕಿದ್ದೀರಿ.. ನಿಮ್ಮೂರಿಗೆ ಬಂದಾಗ ರೊಟ್ಟಿ ತಿನ್ನಿಸಿದ್ದೀರಿ ಎನ್ನುತ್ತಲೇ ಭಾವುಕರಾಗಿ ಕ್ಷಣ ಹೊತ್ತು ಮಾತು ನಿಲ್ಲಿಸಿದರು.
ಭಾವನಾತ್ಮಕವಾಗಿ ಮಾತನಾಡಬಾರದು ಎಂದು ಪ್ರಯತ್ನಿಸಿದ್ದೇನೆ. ಆದರೆ, ನಿಮ್ಮನ್ನೆಲ್ಲ ನೋಡಿದಾಗ ಭಾವನೆಗಳು ಬರುತ್ತವೆ. ಮೊದಲಿನಂತೆ ಪದೇ ಪದೆ ಕ್ಷೇತ್ರಕ್ಕೆ ಬಂದು ನಿಮ್ಮನ್ನು ನೋಡಲು ಆಗುತ್ತಿಲ್ಲ.

ಮುಖ್ಯಮಂತ್ರಿಯಾಗಿ ದೊಡ್ಡ ಜವಾಬ್ದಾರಿ ನನ್ನ ಹೆಗಲ ಮೇಲಿದೆ. ಸಮಗ್ರ ರಾಜ್ಯದ ಚಿಂತನೆ, ಅಭಿವೃದ್ಧಿ ಮಾಡುವುದು, ಎಲ್ಲ ಸಮುದಾಯಗಳ ಭಾವನೆಗಳಿಗೆ ಸ್ಪಂದಿಸುವ ಜವಾಬ್ದಾರಿಯಿದೆ. ಇಂದಿನ ಕಾಲದಲ್ಲಿ ಜನರ ಆಶೋತ್ತರಗಳು ಹೆಚ್ಚಿವೆ. ಸರ್ಕಾರಕ್ಕೆ ಹಲವು ಸವಾಲುಗಳಿವೆ. ಅವುಗಳನ್ನು ಎದುರಿಸಿ ಯಶಸ್ವಿಯಾಗುವುದು ನನ್ನ ಗುರಿ ಎಂದರು.

ಈಗಿರುವ ಸವಾಲುಗಳನ್ನು ಎದುರಿಸಲು ನಿಮ್ಮ ಆಶೀರ್ವಾದವೇ ಪ್ರೇರಣೆಯಾಗಿ ನಿಲ್ಲಲಿದೆ. ನಿಮ್ಮ ಆಶೀರ್ವಾದದಿಂದ ಸಿಎಂ ಆಗಿ ನಿಂತಿದ್ದೇನೆ. ಕ್ಷೇತ್ರದ ಹೊರಗೆ ನಾನು ಮುಖ್ಯಮಂತ್ರಿಯಾದರೂ ಇಲ್ಲಿ ಕೇವಲ ನಾನು ಬಸವರಾಜ ಬೊಮ್ಮಾಯಿ ಮಾತ್ರ. ನಿಮ್ಮ ಮಟ್ಟಿಗೆ ಬಸವರಾಜ ಬೊಮ್ಮಾಯಿ ಆಗಿಯೇ ಉಳಿಯುತ್ತೇನೆ. ಬಸವರಾಜ ಬೊಮ್ಮಾಯಿ ಶಾಶ್ವತವೇ ಹೊರತು ಹಿಂದಿರುವ ಪದನಾಮ ಶಾಶ್ವತವಲ್ಲ ಎಂದು ಹೇಳಿದರು.

ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ವಿಸ್ತರಣೆಗೆ ಹೋರಾಟ ಮಾಡಲಿಲ್ಲ. ರಾಜ್ಯದ ಜನರ ರಕ್ಷಣೆಗೆ, ಸ್ವಾಭಿಮಾನಕ್ಕಾಗಿ ಹೋರಾಡಿದಳು. ಪ್ರತಿಯೊಬ್ಬ ಕಿತ್ತೂರು ನಾಗರಿಕ ಯೋಧರಾಗಿ ಪರಿವರ್ತನೆ ಆದರು. ಇಂದು ಈ ರಾಜ್ಯ, ಸಮುದಾಯ ತನ್ನ ಅಸ್ಮಿತೆ, ಸ್ವಾಭಿಮಾನಕ್ಕಾಗಿ ಯೋಧರಾಗಿ ಹೋರಾಟ ಮಾಡೋ ಅಗತ್ಯವಿದೆ.

ಇತಿಹಾಸವನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದರು. ಒಂದು ಸಮುದಾಯ ಬಹಳ ಮುಂದೆ ಹೋಗಿ ಇನ್ನೊಂದು ಸಮುದಾಯ ಹಿಂದುಳಿದರೆ ಮುಂದೆ ಹೋದ ಸಮುದಾಯಕ್ಕೂ ಒಳ್ಳೆಯದಾಗುವುದಿಲ್ಲ. ಆದ್ದರಿಂದ ಎಲ್ಲರ ಭಾವನೆಗಳಿಗೂ ಸ್ಪಂದಿಸುವ ಕೆಲಸ ಮಾಡುತ್ತೇನೆ. ಪ್ರತಿಯೊಂದು ಸಮಾಜಕ್ಕೂ ತಮ್ಮದೇ ಭಾವನೆಯಿದ್ದು, ಸ್ವಲ್ಪ ಸಮಾಯಾವಕಾಶ ನೀಡಿದರೆ ಎಲ್ಲವನ್ನೂ ಈಡೇರಿಸಲು ಪ್ರಯತ್ನಿಸುತ್ತೇನೆ. ನಾಡಿನ ಬಹುತೇಕ ಜನರಿಗೆ, ವಿಶೇಷವಾಗಿ ಧ್ವನಿಯಿಲ್ಲದವರು, ತುಳಿತಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಂಬಂಧವಾಗಿ ಒಳ್ಳೆಯ ನಿರ್ಧಾರ ಕೈಗೊಳ್ಳೋಣ. ಅದಕ್ಕಾಗಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಹಕಾರ ನೀಡಬೇಕು. ತುಳಿತಕ್ಕೊಳಗಾದವರಿಗೆ ನ್ಯಾಯ ಕೊಡಲು ನಮ್ಮ ಸರ್ಕಾರ ಸಿದ್ಧ ಎಂದು ಸಿಎಂ ಬೊಮ್ಮಾಯಿ  ಹೇಳಿದರು. ಪಂಚಮಸಾಲಿ ಹರಿಹರ ಪೀಠದ ವಚನಾನಂದ ಸ್ವಾಮೀಜಿ, ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಸಚಿವ ಮುರುಗೇಶ ನಿರಾಣಿ, ಶಂಕರಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ಬಸವನಗೌಡ ಪಾಟೀಲ ಯತ್ನಾಳ, ವಿನಯ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ ಸೇರಿದಂತೆ ಪಂಚಮಸಾಲಿ ಸಮಾಜದ ಪ್ರಮುಖರು ಇದ್ದರು.

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.