ಮೆಗಾ ಇ-ಲೋಕ ಅದಾಲತ್‌ ನಾಳೆ

Team Udayavani, Sep 18, 2020, 6:45 PM IST

ಮೆಗಾ ಇ-ಲೋಕ ಅದಾಲತ್‌ ನಾಳೆ

ಹಾವೇರಿ: ಪ್ರಥಮ ಬಾರಿಗೆ ದೃಶ್ಯ ಸಂವಾದದ ಮೂಲಕ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಕಾನೂನು ಬದ್ಧವಾಗಿರಾಜೀ ಸಂಧಾನಕ್ಕೆ ಅವಕಾಶವಿರುವ ಎಲ್ಲಾ ಪ್ರಕರಣಗಳನ್ನು ರಾಜೀ ಸಂಧಾನ ಮಾಡಿಕೊಳ್ಳುವ ನಿಟ್ಟಿನಲ್ಲಿ, ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆ.19 ರಂದು ಮೆಗಾ ಇ-ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್‌.ಎಚ್‌. ರೇಣುಕಾದೇವಿ ತಿಳಿಸಿದ್ದಾರೆ.

ಇ-ಲೋಕ ಅದಾಲತ್‌ ಕುರಿತಂತೆ ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಪೂರ್ವಭಾವಿ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನ ಹಾಗೂ ಕೋವಿಡ್‌ ಹಿನ್ನೆಲೆಯಲ್ಲಿ ಪ್ರಮಾಣೀಕೃತ ಮಾರ್ಗಸೂಚಿ ಅನುಸಾರ ಜಿಲ್ಲೆ ಮತ್ತು ತಾಲೂಕಿನ ಎಲ್ಲ ನ್ಯಾಯಾಲಯಗಳಲ್ಲಿ ಮೆಗಾ ಇ-ಲೋಕ ಅದಾಲತ್‌ ಅನ್ನು ಸೆ.19 ರಂದು ಹಮ್ಮಿಕೊಳ್ಳಲಾಗಿದೆ. ಎಲ್ಲರ ಸಹಕಾರದಿಂದ ಇ-ಲೋಕ ಅದಾಲತ್‌ ಯಶಸ್ವಿಗೊಳಿಸೋಣ ಎಂದು ಹೇಳಿದರು.

ಇ-ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ತಾಲೂಕು ಕಾನೂನು ಸೇವಾ ಸಮಿತಿಗಳಿಗೆ ಆನ್‌ಲೈನ್‌, ವಿಡಿಯೋ ಕಾನ #ರೆನ್ಸ್‌, ಇ-ಮೇಲ್‌, ಎಸ್‌ಎಂಎಸ್‌, ವಾಟ್ಸಪ್‌, ಎಲೆಕ್ಟ್ರಾನಿಕ್‌ ಮೋಡ್‌ ಮೂಲಕ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಂಬಂಧಪಟ್ಟ ಉತ್ಛ ನ್ಯಾಯಾಲಯ, ಕಾನೂನು ಸೇವಾ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಅಥವಾ ಖಾಯಂ ಜನತಾ ನ್ಯಾಯಾಲಯಗಳನ್ನು ಆನ್‌ಲೈನ್‌, ವಿಡಿಯೋ ಕಾನ #ರೆನ್ಸ್‌.ಇ-ಮೇಲ್‌, ಎಸ್‌ಎಂಎಸ್‌, ವಾಟ್ಸಪ್‌, ಎಲೆಕ್ಟ್ರಾನಿಕ್‌ ಮೋಡ್‌ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ, ಉಪಾಧ್ಯಕ್ಷ ಪಿ.ಎಸ್‌.ಎಲಿಗಾರ, ಕಾರ್ಯದರ್ಶಿ ಪಿ.ಎಂ.ಬೆನ್ನೂರ, ಸಹ ಕಾರ್ಯದರ್ಶಿ ಸಿ.ಸಿ.ಗಬ್ಬೂರಮಠ, ಕಾರ್ಯಕಾರಿ ಸಮಿತಿ ಸದಸ್ಯರಾದ ಟಿ.ವಿ.ರಟ್ಟಿಹಳ್ಳಿ, ಕೆ.ಎಲ್‌. ಅಂಗರಗಟ್ಟಿ, ಬಿ.ಎಂ.ಮಾಳಗಿ ಹಾಗೂ ಬಿ.ಎಸ್‌.ಜಗಣ್ಣನವರ ಇ-ಲೋಕ ಅದಾಲತ್‌ ಗೆ ಜಿಲ್ಲಾ ವಕೀಲರ ಸಂಘದ ಪರವಾಗಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧಿಧೀಶ ಕಿರಣ ಕಿಣಿ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಈ.ರಾಜೀವ ಗೌಡ, ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾ ಧೀಶ ಎ.ವಿ.ಪಾಟೀಲ, ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ವಿ.ಆರ್‌.ಗುಡಿ, ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಲಕ್ಷ್ಮೀ ಎನ್‌. ಗರಗ ಹಾಗೂ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ನಾಸೀರಾಬಾನು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.