ಚೆಕ್‌ಡ್ಯಾಂ ಕಾಮಗಾರಿಗೆ ಸ್ಥಳೀಯರ ವಿರೋಧ

Team Udayavani, Mar 2, 2020, 3:47 PM IST

hv-tdy-2

ರಾಣಿಬೆನ್ನೂರ: ಮಾಕನೂರು ಗ್ರಾಮದ ತುಂಗಭದ್ರಾ ನದಿ ದಡದಲ್ಲಿ ಚೆಕ್‌ಡ್ಯಾಂ ನಿರ್ಮಿಸಿ ದಾವಣಗೆರೆ ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಸಲು ಸ್ಮಾರ್ಟ್‌ ಸಿಟಿ ಯೋಜನೆಯಡಿ ತುಂಗಭದ್ರಾ ನದಿಗೆ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಆಗಮಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಸ್ಥಳೀಯ ರೈತ ಸಂಘಟನೆ, ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ ದಿಢೀರ್‌ ಪ್ರತಿಭಟನೆ ನಡೆಸಿ ಕಾರ್ಯಕ್ರಮಕ್ಕೆ ಅಡ್ಡಿಯಾದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷ ಈರಣ್ಣ ಹಲಗೇರಿ ಮಾತನಾಡಿ, ಮಾಕನೂರು ಗ್ರಾಮದ ತುಂಗಭದ್ರಾ ನದಿ ದಡದಲ್ಲಿ ಕೋಟ್ಯಾಂತರ ರೂ.ವೆಚ್ಚದಲ್ಲಿ ಚೆಕ್‌ ಡ್ಯಾಂ ನಿರ್ಮಿಸಲು ಆಗಮಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಕಚೇರಿ ಅಧಿಕಾರಿಗಳಿಗೆ ಅಥವಾ ಗ್ರಾಮಸ್ಥರಿಗೂ ಯಾವುದೇ ಮಾಹಿತಿ ನೀಡಿಲ್ಲ. ದಿಢೀರ್‌ನೆ ಕಾಮಗಾರಿ ಆರಂಭಿಸುವುದು ಅಕ್ಷಮ್ಯ ಅಪರಾಧ. ಆದ್ದರಿಂದ ಸಾರ್ವಜನಿಕರ ಗಮನಕ್ಕೆ ಯೋಜನೆಯ ಸಾಧಕ ಬಾಧಕಗಳನ್ನು ಪ್ರಸ್ತುತಪಡಿಸಿ ಆಬಳಿಕ ಅವರ ಅನುಮೋದನೆ ಪಡೆದು ಕಾಮಗಾರಿ ಆರಂಭಿಸಿ ಎಂದು ಒತ್ತಾಯಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಅಧಿಕಾರಿಗಳ ಆಡಳಿತ ವೈಖರಿಯಲ್ಲಿ ಅಲ್ಪದೋಷ ಕಂಡುಬಂದಿದೆ. ಮುಂಚಿತವಾಗಿಯೇ ಗ್ರಾಮ ಪಂಚಾಯಿತಿ ಹಾಗೂ ಗ್ರಾಮಸ್ಥರಿಗೆ ಯೋಜನಾ ಕಾಮಗಾರಿಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ ಜನರ ಅನುಮತಿ ಪಡೆಯಬೇಕಿತ್ತು. ಆದ್ದರಿಂದ ಹಿರಿಯ ನಾಯಕರು ಸ್ಥಳಕ್ಕೆ ಆಗಮಿಸಿದ್ದಾರೆ. ಇದೊಂದು ಬಾರಿ ಅವಕಾಶ ನೀಡಿ, ಮತ್ತೆ ಇಂಥ ಸಂದಿಗ್ಧ ಪರಿಸ್ಥಿತಿ ಬರದ ಹಾಗೆ ನಾನೇ ನೋಡಿಕೊಳ್ಳುವೆ ಎಂಬ ಭರವಸೆ ನೀಡಿದರು. ನಂತರ ಭೂಮಿಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು.

ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಮಾತನಾಡಿ, ನಮ್ಮ ಕೆಲ ಅ ಧಿಕಾರಿಗಳ ನಿಷ್ಕಾಳಜಿಯಿಂದ ತಮಗೆ ಮಾಹಿತಿ ತಲುಪಿಸುವಲ್ಲಿ ವ್ಯತ್ಯಯವಾಗಿದೆ. ನಮ್ಮನ್ನು ಕ್ಷಮಿಸಿ. ತಾವು ಅನುಮೋದನೆ ನೀಡಿದರೆ 98 ಕೋಟಿ ರೂ. ವೆಚ್ಚದ, 0.20 ಟಿಎಂಸಿ ನೀರು ಸಾಮರ್ಥ್ಯದ ಕಾಮಗಾರಿಗೆ ಚಾಲನೆ ನೀಡುತ್ತೇವೆ ಎಂದು ಗ್ರಾಮಸ್ಥರೆದುರು ಹೇಳಿದರು.

ಸಂಸದ ಜಿ.ಎಂ ಸಿದ್ದೇಶ್ವರ, ದಾವಣಗೆರೆ ಶಾಸಕ ಶಾಮನೂರು ಶಿವಶಂಕ್ರಪ್ಪ, ಎಸ್‌.ಎ. ರವೀಂದ್ರನಾಥ, ಗ್ರಾಪಂ ಅಧ್ಯಕ್ಷ ಸದಾಶಿವನಗೌಡ ಮಲ್ಲನಗೌಡ್ರ, ಗುತ್ತಿಗೆದಾರ ಕೆ.ದೊಡ್ಡಹನುಮಂತಪ್ಪ, ಸುರೇಶ ಮಲ್ಲಾಪುರ, ಹನುಮಂತಪ್ಪ ಕುಂಬಳೂರ, ಮಲ್ಲಿಕಾರ್ಜುನ ಹಲಗೇರಿ, ಪಿಡಿಒ ಗಾಯಿತ್ರಾ ಹೊಸಂಗಡಿ, ಸತೀಶಗೌಡ ಮಲ್ಲನಗೌಡ್ರ ಸೇರಿದಂತೆ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.