ಕಿಡಿಗೇಡಿಗಳಿಗೆ ನಿರ್ಭಯಾ ಪಡೆ ಸಿಂಹಸ್ವಪ್ನ


Team Udayavani, Nov 9, 2018, 7:06 AM IST

55.jpg

ಹಾವೇರಿ: ಕಾಲೇಜು ಮುಂದೆ ನಿಂತು ಹುಡುಗಿ ಯರನ್ನು ಚುಡಾಯಿಸುವುದು, ಹಾಸ್ಟೆಲ್‌ ಬಳಿ ಬಂದು ಯುವತಿಯರಿಗೆ ತೊಂದರೆ ಕೊಡುವುದು, ದಾರಿಯಲ್ಲಿ ಹೋಗುವ ಮಹಿಳೆಯರನ್ನು ರೇಗಿಸುವವರ ಮೇಲೆ “ನಿರ್ಭಯಾ’ ಎಂಬ ವಿಶೇಷ ಮಹಿಳಾ ಪಡೆಯೊಂದು ಕಣ್ಣಿಟ್ಟಿದೆ. ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಹಾಗೂ ಮಹಿಳೆಯರಿಗೆ ವಿಶೇಷ ರಕ್ಷಣೆ ಒದಗಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ “ನಿರ್ಭಯಾ’ ಎಂಬ ಮಹಿಳಾ ಪೊಲೀಸ್‌ ಪಡೆ ರಚಿಸಿದ್ದಾರೆ.

ಜಿಲ್ಲಾ ಪೊಲೀಸ್‌ ಇಲಾಖೆ ಈ ಪಡೆಗೆ ವಿಶೇಷ ಸಮವಸ್ತ್ರ ಮಾಡಿದ್ದು, ಮಹಿಳೆಯರ ರಕ್ಷಣೆಗಾಗಿಯೇ ಈ ಪಡೆ 24 ಗಂಟೆ ಕಾರ್ಯ ನಿರ್ವಹಿಸಲಿದೆ. ದಾಳಿ ವೇಳೆ ಸಾಮಾನ್ಯ ಉಡುಪಿನಲ್ಲಿಯೇ ಕಾರ್ಯಾಚರಣೆ ನಡೆಸಲಿದೆ. 32 ಮಹಿಳಾ ಪೊಲೀಸರು ಈ ಪಡೆಯಲ್ಲಿರಲಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿರುವ ಮಹಿಳಾ ಪೊಲೀಸರನ್ನು ಸೇರಿಸಿಕೊಂಡು ಈ ಪಡೆ ರಚಿಸಲಾಗಿದೆ. ಮಹಿಳಾ
ದೌರ್ಜನ್ಯ ತಡೆ ಹಾಗೂ ಮಹಿಳಾ ರಕ್ಷಣೆಗೆ ಬೇಕಾದ ಅಗತ್ಯ ವಿಶೇಷ ತರಬೇತಿ ನೀಡಲಾಗಿದೆ. 

ಹಳ್ಳಿಗಳಲ್ಲೂ ಕಾರ್ಯ: “ನಿರ್ಭಯಾ’ ಪಡೆ ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಕಾರ್ಯ ನಿರ್ವಹಿಸಲಿದೆ. ಶಾಲಾ- ಕಾಲೇಜು, ಬಸ್‌ ನಿಲ್ದಾಣ ಸೇರಿ ಇನ್ನಿತರ ಪ್ರಮುಖ ಸ್ಥಳಗಳ ಮೇಲೆ ಈ ಪಡೆ ಹದ್ದಿನ ಕಣ್ಣಿಡಲಿದೆ. ಆರಂಭದಲ್ಲಿ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಈ ಪಡೆ ಕಾರ್ಯ ನಿರ್ವಹಿಸಲಿದ್ದು, ನಂತರ ಗ್ರಾಮೀಣ ಪ್ರದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘಗಳ ಸಹಕಾರ ದೊಂದಿಗೆ “ನಿರ್ಭಯಾ’ ಪಡೆ ಕೆಲಸ ಮಾಡಲಿದೆ.

ರಕ್ಷಣಾ ಜಾಗೃತಿ: “ನಿರ್ಭಯಾ’ ಪಡೆ ಮಹಿಳಾ ದೌರ್ಜನ್ಯ ತಡೆ ಹಾಗೂ ಮಹಿಳಾ ರಕ್ಷಣೆ ಜತೆಗೆ ಮಹಿಳೆಯರಿಗೆ ಸ್ವಯಂ ರಕ್ಷಣಾ ಕ್ರಮ, ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ, ಇದಕ್ಕಾಗಿ ಇರುವ ಫೋಕ್ಸೋ ಕಾಯ್ದೆ, ಮಹಿಳಾ ದೌರ್ಜನ್ಯ ಅರಿವು, ಉದ್ಯೋಗಸ್ಥ ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿನ ಕಿರುಕುಳ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡಲಿದೆ. ಮಹಿಳೆಯರಿಗೆ ಕಿರುಕುಳ ನೀಡುವ ಪ್ರಕರಣಗಳ ಬಗ್ಗೆ ಸಾರ್ವಜನಿಕ ಮಾಹಿತಿ ಇಲ್ಲವೇ ಸ್ವಯಂ ಮಾಹಿತಿ ಇಲ್ಲವೇ ದೂರು ಆಧರಿಸಿ “ನಿರ್ಭಯಾ
ಪಡೆ ಸ್ಥಳಕ್ಕೆ ಭೇಟಿ ನೀಡಿ ಕಿಡಿಗೇಡಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಿದೆ.

ಇಂದು ಚಾಲನೆ
“ನಿರ್ಭಯಾ’ ವಿಶೇಷ ಮಹಿಳಾ ಪಡೆಯ ಉದ್ಘಾಟನೆ ಸಮಾರಂಭ ನ.9ರಂದು ಸಂಜೆ 4.30ಕ್ಕೆ ಹಾವೇರಿ ನಗರದ ಶಿವಶಕ್ತಿ ಪ್ಯಾಲೇಸ್‌ನಲ್ಲಿ ನಡೆಯಲಿದೆ. ಪೂರ್ವ ವಲಯ ಪೊಲೀಸ್‌ ಮಹಾನಿರೀಕ್ಷಕ ಬಿ. ದಯಾನಂದ “ನಿರ್ಭಯಾ’ ಪಡೆಗೆ ಚಾಲನೆ ನೀಡುವರು ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಹಾಗೂ ಅವರ ರಕ್ಷಣೆಗಾಗಿ ನಿರ್ಭಯಾ ವಿಶೇಷ ಮಹಿಳಾ ಪಡೆ ರಚಿಸಲಾಗಿದ್ದು, ಈ ಪಡೆಗೆ ವಿಶೇಷ ತರಬೇತಿ ನೀಡಲಾಗಿದೆ. ಈ ಪಡೆ ಆರಂಭದಲ್ಲಿ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಲಿದೆ.
ಜಿಲ್ಲೆಯಲ್ಲಿ ಪೊಕ್ಸೋ ಪ್ರಕರಣಗಳು ಹೆಚ್ಚು ನಡೆಯುತ್ತಿದ್ದು, ಇದರ ಬಗ್ಗೆ ತಿಳಿವಳಿಕೆ ನೀಡಲಿದೆ.
● ಕೆ. ಪರಶುರಾಮ, ಎಸ್ಪಿ, ಹಾವೇರಿ.

● ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.