ಶೀಘ್ರವೇ ನೂರು ಕೋಟಿ ಅನುದಾನ

Team Udayavani, Nov 8, 2019, 1:05 PM IST

hv-tdy-1

ಹಾವೇರಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಯಾದ ರಸ್ತೆ, ಸೇತುವೆ, ಕಟ್ಟಡ ಸೇರಿದಂತೆ ವಿವಿಧ ಇಲಾಖೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಮೂರ್‍ನಾಲ್ಕು ದಿನಗಳಲ್ಲಿ ಒಂದು ನೂರು ಕೋಟಿ ರೂ. ವಿಶೇಷ ಅನುದಾನವನ್ನು ಜಿಲ್ಲೆಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಅತಿವೃಷ್ಟಿ ಹಾಗೂ ಪ್ರವಾಹದಿಂದ ಉಂಟಾಗಿರುವ ಹಾನಿ ಮತ್ತು ಪರಿಹಾರ ಕುರಿತು ಗುರುವಾರ ನಡೆಸಿದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮಳೆ, ಪ್ರವಾಹದಿಂದ ಹಾನಿಯಾದ ಎ ಮತ್ತು ಬಿ ಶ್ರೇಣಿಯ ಮನೆಗಳ ಪುನರ್‌ ನಿರ್ಮಾಣ ಕಾರ್ಯವನ್ನು ತಕ್ಷಣದಿಂದಲೇ ಆರಂಭಿಸುವಂತೆ ಜಿಲ್ಲಾಧಿ ಕಾರಿ ಕೃಷ್ಣ ಭಾಜಪೇಯಿ ಅವರಿಗೆ ಸೂಚನೆ ನೀಡಿದರು.

ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಸಮೀಕ್ಷೆ ಕಾರ್ಯದಲ್ಲಿ ಯಾವುದಾದರು ಸಂತ್ರಸ್ತರ ಮನೆಗಳುಕೈಬಿಟ್ಟು ಹೋಗಿರುವ ಕುರಿತಂತೆ ಹಾಗೂ ಪರಿಹಾರ ದೊರಕಿಲ್ಲ ಎಂಬ ದೂರುಗಳು ಇವೆಯೇ, ಮೊದಲ ಕಂತಾಗಿ ಒಂದು ಲಕ್ಷ ರೂ. ಪರಿಹಾರ ಎ ಮತ್ತು ಬಿ ಕೆಟಗರಿ ಮನೆಗಳ ಫಲಾನುಭವಿಗಳಿಗೆ ಜಮೆ ಆಗಿದೆಯೇ ಎಂದು ಜಿಲ್ಲಾ ಧಿಕಾರಿಗಳನ್ನು ಪ್ರಶ್ನಿಸಿದ ಯಡಿಯೂರಪ್ಪ, ಮೊದಲ ಕಂತಾಗಿ ಹಣ ಪಾವತಿಯಾಗಿದ್ದರೆ ತಕ್ಷಣದಿಂದಲೇ ಮನೆಗಳ ಅಡಿಪಾಯ ಕಾರ್ಯ ಆರಂಭಿಸಬೇಕು. ಹಂತ ಹಂತವಾಗಿ ಐದು ಲಕ್ಷ ರೂ.ವರೆಗೆ ಮನೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರಚಾರ ಮಾಡಿ: ಬೆಳೆಹಾನಿ ಕುರಿತಂತೆ ಮಾಹಿತ ಪಡೆದ ಎನ್‌ಡಿಆರ್‌ ಎಫ್‌ ಮಾರ್ಗಸೂಚಿಯ ಹೊರತಾಗಿಯೂ ಪ್ರತಿ ಹಕ್ಟೇರ್‌ಗೆ 10 ಸಾವಿರ ರೂ. ವಿಶೇಷ ಅನುದಾನ ರಾಜ್ಯ ಸರ್ಕಾರ ನೀಡುತ್ತಿರುವ ಕುರಿತಂತೆ ರೈತರಿಗೆ ಮಾಹಿತಿ ಇದೆಯೇ? ಈ ಮಾಹಿತಿ ಎಲ್ಲ ರೈತರಿಗೂ ರವಾನೆಯಾಗಬೇಕು. ಈ ಕುರಿತಂತೆ ವಿಶೇಷವಾಗಿ ಪ್ರಚಾರ ನಡೆಸಬೇಕು. ರೈತರಿಗೆ ಮಾಹಿತಿ ಗೊತ್ತಾಗಬೇಕು ಎಂದರು.

ಸಭೆಯಲ್ಲಿ ಗೃಹ, ಸಹಕಾರಿ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಮಾತನಾಡಿ, ಶಾಲಾ ಕೊಠಡಿಗಳು ಪೂರ್ಣ ಪ್ರಮಾಣದಲ್ಲಿ ಬಿದ್ದುಹೋಗಿವೆ ಹಾಗೂ ಜಿಲ್ಲೆಯಲ್ಲಿ ರಸ್ತೆ, ಸೇತುವೆ, ಅಂಗನವಾಡಿ ಕಟ್ಟಡ ಸೇರಿದಂತೆ ಮೂಲ ಸೌಕರ್ಯಗಳು ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದ್ದು, ಹೆಚ್ಚುವರಿ ಅನುದಾನವನ್ನು ಜಿಲ್ಲೆಗೆ ಬಿಡುಗಡೆಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

ಜಿಲ್ಲಾ ಧಿಕಾರಿ ಕೃಷ್ಣ ಭಾಜಪೇಯಿ ಅತಿವೃಷ್ಟಿ ಹಾಗೂ ಪ್ರವಾಹ ಹಾನಿ ಕುರಿತಂತೆ ಮಾಹಿತಿ ನೀಡಿ, 88.42 ಕೋಟಿ ರೂ.ಗಳನ್ನು ಮನೆ ಹಾನಿಗೆ ಪರಿಹಾರವಾಗಿ ಒದಗಿಸಲಾಗಿದೆ. ವಿವಿಧ ಇಲಾಖೆಯ 1368 ಮೂಲಭೂತ ಸೌಕರ್ಯಗಳು ಹಾನಿಯಾಗಿದ್ದು, 52.14 ಕೋಟಿ ರೂ. ಅಂದಾಜು ಹಾನಿಯಾಗಿದೆ. ಇದರಲ್ಲಿ 24.34 ಕೋಟಿ ರೂ. ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಸರ್ಕಾರದಿಂದ 35 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಪ್ರಕೃತಿ ವಿಕೋಪ ಪರಿಹಾರ ನಿಧಿ ಯಲ್ಲಿ 15.93 ಕೋಟಿ ಅನುದಾನವಿದ್ದು, ಸರ್ಕಾರದಿಂದ 90 ಕೋಟಿ ಬಿಡುಗಡೆಯಾಗಿದೆ. ಒಟ್ಟಾರೆ 109.93 ಕೋಟಿ ರೂ. ಅನುದಾನದಲ್ಲಿ 71.81 ಕೋಟಿ ರೂ. ಅನುದಾನ ಖರ್ಚಾಗಿದ್ದು, ಒಟ್ಟು 24103 ಲಕ್ಷ ರೂ. ಅನುದಾನದ ಅಗತ್ಯವಿದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಸಿ.ಎಂ.ಉದಾಸಿ, ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಬೆಳಗಾವಿ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾನ್‌ ಬಿಸ್ವಾಸ್‌ ಇದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.