ಹಿಂದಿ ದಿವಸ್‌ ಆಚರಣೆ ವಿರುದ್ಧ ಆಕ್ರೋಶ

ಕರವೇ ಜಿಲ್ಲಾ ಘಟಕದಿಂದ ಪ್ರತಿಭಟನೆ ; ತಾರತಮ್ಯ ನೀತಿಯಿಂದ ಕನ್ನಡಿಗರಿಗೆ ಅನ್ಯಾಯ-ಆರೋಪ

Team Udayavani, Sep 15, 2022, 2:46 PM IST

13

ಹಾವೇರಿ: ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ, ಭಾರತದ ಐಕ್ಯತೆ ಒಡೆಯುತ್ತಿರುವ ಹಿಂದಿ ದಿವಸ್‌ ಆಚರಣೆಯನ್ನು ಸ್ಥಗಿತಗೊಳಿಸಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ನಗರದ ಸಂಗೂರ ಕರಿಯಪ್ಪ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಸಂಘಟನೆಯ ಪ್ರಮುಖರು ಮಾತನಾಡಿ, ಭಾರತದ ಒಕ್ಕೂಟ ಸರ್ಕಾರ ಪ್ರತಿ ವರ್ಷ ಸೆ.14ರಂದು ನಮ್ಮ ತೆರಿಗೆ ಹಣದಿಂದ ಹಿಂದಿ ದಿವಸ್‌ ಆಚರಿಸುತ್ತಾ ಬಂದಿದೆ. ಕೇವಲ ಹಿಂದಿ ದಿವಸ್‌ ಒಂದನ್ನೇ ಅಚರಿಸುವ ಮೂಲಕ ದೇಶದ ಎಲ್ಲ ಭಾಷೆಗಳನ್ನು ಕಡೆಗಣಿಸಿ, ಹಿಂದಿಯೊಂದನ್ನೇ ಪ್ರತಿ ವರ್ಷ ಮೆರೆಸುತ್ತಿದೆ. ಇದನ್ನು ಕರವೇ ಸಂಘಟನೆ ಎರಡು ದಶಕಗಳಿಂದ ಖಂಡಿಸುತ್ತಾ ಬಂದಿದೆ ಎಂದರು.

ಭಾರತ ಸರ್ಕಾರ ಕೇವಲ ಇಂಗ್ಲಿಷ್‌ ಮತ್ತು ಹಿಂದಿ ಭಾಷೆಗಳನ್ನು ಮಾತ್ರವೇ ತನ್ನ ಆಡಳಿತ ಭಾಷೆಗಳನ್ನಾಗಿ ಮಾಡಿಕೊಂಡಿದೆ. ಇದರಿಂದಾಗಿ ದೇಶದ ಇತರ ಭಾಷೆಗಳ ಭಾಷಿಕರಿಗೆ ಕಲಿಕೆ, ಪ್ರವೇಶ ಪರೀಕ್ಷೆಗಳು, ಉದ್ಯೋಗ ನೇಮಕಾತಿ, ಸಾರ್ವಜನಿಕ ಸೇವೆಗಳಲ್ಲಿ ಬಹಳ ಅನಾನುಕೂಲವಾಗುತ್ತಿದೆ. ಬ್ಯಾಂಕ್‌ ಹಾಗೂ ಇತರ ಒಕ್ಕೂಟ ಸರ್ಕಾರದ ಇಲಾಖೆಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಇಂತಹ ತಾರತಮ್ಯ ನೀತಿಗಳಿಂದ ಅನ್ಯಾಯವಾಗುತ್ತಿದೆ ಎಂದು ದೂರಿದರು.

ಹಿಂದಿ ಭಾಷೆಯೊಂದಕ್ಕೆ ಉಳಿದ ಭಾಷೆಗಳಿಗಿಂತ ಮೇಲಿನ ಸ್ಥಾನ ನೀಡಿ, ಸಾಂವಿಧಾನಿಕ ಸಂಸ್ಥೆಗಳ ಮೂಲಕವೇ ಎಲ್ಲಾ ಹಿಂದಿಯೇತರ ಜನರ ಮೇಲೆ ಹೇರಿಕೆ ಮಾಡುತ್ತಿರುವುದು ತಕ್ಷಣದಿಂದಲೇ ನಿಲ್ಲಬೇಕು. ಭಾರತಕ್ಕೆ ಯಾವುದೇ ಒಂದು ರಾಷ್ಟ್ರ ಭಾಷೆಯಿಲ್ಲ. ಎಲ್ಲ 22 ಭಾಷೆಗಳೂ ದೇಶದ ರಾಷ್ಟ್ರೀಯ ಭಾಷೆಗಳೇ ಆಗಿವೆ. ಈ ಭಾಷೆಗಳ ನಡುವೆ ತಾರತಮ್ಯ ಎಸಗಿದರೆ ಅದು ಸಂವಿಧಾನ ಹೇಳುವ ಸಮಾನತೆಯ ತತ್ವಗಳಿಗೆ ವಿರುದ್ಧವಾಗಿರುತ್ತದೆ. ಆದರೆ, ಅಧಿಕೃತ ಭಾಷಾ ಕಾಯ್ದೆ ಹೆಸರಿನಲ್ಲಿ ಹಿಂದಿಯೇತರ ಭಾರತೀಯರ ಮೇಲೆ ಹಿಂದಿ ಭಾಷೆಯನ್ನು ಬಲವಂತವಾಗಿ ಹೇರುವ ಕಾರ್ಯಕ್ರಮಗಳು ಸಂವಿಧಾನ ಜಾರಿಯಾದಾಗಿನಿಂದಲೂ ನಡೆದುಕೊಂಡು ಬಂದಿರುವುದು ದುರ್ದೈವದ ಸಂಗತಿ ಎಂದರು.

ಈ ಹಿನ್ನೆಲೆಯಲ್ಲಿ ಅಸಮಾನತೆ ತೊಡೆದು ಹಾಕಿ, ಸಮಾನತೆ ಎತ್ತಿ ಹಿಡಿಯಲು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿರುವ ಎಲ್ಲ 22 ಭಾಷೆಗಳನ್ನು ಕೇಂದ್ರ ಸರ್ಕಾರದ ಆಡಳಿತ ಭಾಷೆಯನ್ನಾಗಿ ಮಾಡಬೇಕು. ಹಿಂದಿ ಮತ್ತು ಇಂಗ್ಲಿಷ್‌ಗೆ ನೀಡಿರುವ ಮಾನ್ಯತೆಯನ್ನು ಎಲ್ಲ ಭಾಷೆಗಳಿಗೂ ನೀಡಬೇಕು. ಭಾರತ ಬಹು ಭಾಷೆ, ಸಂಸ್ಕೃತಿ, ಧರ್ಮಗಳ ನಾಡು. ಈ ಬಹುತ್ವ ಸಂಸ್ಕೃತಿ ಉಳಿದರಷ್ಟೇ ಒಕ್ಕೂಟ ಉಳಿಯಲು ಸಾಧ್ಯ. ಒಕ್ಕೂಟ ವ್ಯವಸ್ಥೆಯ ಈ ಮೂಲಮಂತ್ರವನ್ನೇ ನಮ್ಮ ಸಂವಿಧಾನ ಕಡೆಗಣಿಸುತ್ತಿರುವುದು ದುರ್ದೈವದ ಸಂಗತಿ. ಕೇಂದ್ರ ಸರ್ಕಾರ ತಕ್ಷಣವೇ ಈ ಎಲ್ಲ 22 ಭಾಷೆಗಳನ್ನು ಆಡಳಿತ ಭಾಷೆಯನ್ನಾಗಿ ಮಾಡಬೇಕು. ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಗೆ ಸಿಗುವ ಶಿಕ್ಷಣ, ಉದ್ಯೋಗ ವ್ಯವಸ್ಥೆಗಳನ್ನು ಎಲ್ಲ ಭಾಷೆಗಳಿಗೆ ವಿಸ್ತರಿಸಬೇಕು. ಹಿಂದಿ ದಿವಸ್‌, ಹಿಂದಿ ಸಪ್ತಾಹ, ಹಿಂದಿ ಪಕ್ವಾಡ್‌ನ‌ಂತಹ ಕಾರ್ಯಕ್ರಮಗಳನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ, ರಾಜ್ಯ ಕಾರ್ಯದರ್ಶಿ ಕರಿಬಸಯ್ಯ ಎಸ್‌.ಬಿ., ಸತೀಶಗೌಡ್ರ ಮುದಿಗೌಡ್ರ, ಬಿ.ಎಚ್‌.ಬಣಕಾರ, ಪರಮೇಶಪ್ಪ ಕಾಟೇಕರ್‌, ಫಕ್ಕೀರೇಶ ಯಾದವ್‌, ವಿಜಯಲಕ್ಷ್ಮೀ ಗುಡಿಮಿ, ಸತ್ಯವತಿ, ಹಾಲೇಶ ಹಾಲಣ್ಣನವರ, ಮಾರುತಿ ಪೂಜಾರ, ಸಂತೋಷ ಪಾಟೀಲ, ಪರಶುರಾಮ ಈಳಗೇರ, ಎ.ಎಸ್‌.ಖಾದ್ರಿ ಇತರರಿದ್ದರು.

ಭಾಷಾ ತಾರತಮ್ಯದಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಕೇಂದ್ರ ಸರ್ಕಾರದ ಹಿಂದಿ ಪರವಾದ ನೀತಿಗಳಿಂದ ಹಿಂದಿ ಭಾಷಿಕರು ದೇಶದ ಯಾವ ರಾಜ್ಯಕ್ಕೆ ಹೋಗಿ ನೆಲೆಸಿದರೂ, ಕೇಂದ್ರ ಸರ್ಕಾರದ ಎಲ್ಲ ಸೇವೆಗಳು ಹಿಂದಿ ಭಾಷೆಯಲ್ಲೇ ಸಿಗುತ್ತವೆ. ಆದರೆ, ಒಬ್ಬ ಕನ್ನಡಿಗ, ಒಬ್ಬ ಮಲೆಯಾಳಿ ಅಥವಾ ಇನ್ನಾವುದೇ ಭಾಷೆಗಳ ಜನರಿಗೆ ಬೇರೆ ರಾಜ್ಯಗಳಲ್ಲಿ ತಮ್ಮ ಭಾಷೆಯ ಸೇವೆ ಲಭಿಸುವುದಿಲ್ಲ. ಇಂತಹ ತಾರತಮ್ಯಗಳು ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುತ್ತಿವೆ. ಕೇಂದ್ರ ಸರ್ಕಾರದ ಅಸಮಾನತೆಯ ಭಾಷಾ ನೀತಿಯಿಂದಾಗಿ ಈ ರೀತಿ ತಾರತಮ್ಯ ನಡೆದುಕೊಂಡು ಬಂದಿದೆ ಎಂದು ಪ್ರತಿಭಟನಾಕಾರರು ದೂರಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.