ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ

ಇಂದಿನಿಂದ ಲಾಕ್‌ಡೌನ್‌ ಟೈಟ್‌-ಆತಂಕ!­ಮಾರುಕಟ್ಟೆಯಲ್ಲಿ ಹೆಚ್ಚಿದ ವಾಹನ-ಜನಸಂದಣಿ

Team Udayavani, May 10, 2021, 11:42 AM IST

uyuty

ಹಾವೇರಿ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಸರ್ಕಾರ ಮೇ 10ರಿಂದ ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ರವಿವಾರ ಸಾರ್ವಜನಿಕರು ದಿನಸಿ ಅಂಗಡಿಗಳಲ್ಲಿ ಮುಗಿಬಿದ್ದು ಅಗತ್ಯ ವಸ್ತು ಖರೀದಿಸಿದರು. ಇದರಿಂದ ನಗರದ ಮಾರುಕಟ್ಟೆ ಪ್ರದೇಶದಲ್ಲಿ ವಾಹನ ಹಾಗೂ ಜನಸಂದಣಿ ಹೆಚ್ಚಾಗಿ ಕಂಡು ಬಂತು.

ಕೊರೊನಾ ನಿಯಂತ್ರಣಕ್ಕೆ ಇಷ್ಟು ದಿನ ವಿಧಿಸಿದ್ದ ಜನತಾ ಕರ್ಫ್ಯೂ ಅಷ್ಟಾಗಿ ಪರಿಣಾಮ ಬೀರದ ಹಿನ್ನೆಲೆ ಸರ್ಕಾರ ಸೋಮವಾರದಿಂದ ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಅನುಷ್ಠಾನಗೊಳಿಸುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಡಗಡೆ ಬಂದರೆ ಪೊಲೀಸರ ಲಾಠಿ ರುಚಿ ನೋಡಬೇಕಾಗುತ್ತದೆ ಎಂಬ ಆತಂಕದಲ್ಲಿ ತಿಂಗಳುಗಟ್ಟಲೇ ಆಗುವಷ್ಟು ಅಗತ್ಯ ದಿನಸಿ ಸಾಮಗ್ರಿ ಖರೀದಿಸಲು ಮುಗಿಬಿದ್ದಿದ್ದು ಕಂಡು ಬಂತು.

ನಗರದ ಎಂ.ಜಿ. ರಸ್ತೆಯಲ್ಲಿರುವ ಬಹತೇಕ ದಿನಸಿ ಅಂಗಡಿಗಳು ಹಾಗೂ ಇತರೆ ಅಗತ್ಯ ವಸ್ತುಗಳ ಅಂಗಡಿಗಳಲ್ಲಿ ಬೆಳಗ್ಗೆಯಿಂದಲೇ ಸಾಲುಗಟ್ಟಿ ನಿಂತು ಕಾಳು-ಕಡಿ, ದಿನಬಳಕೆ ಸಾಮಗ್ರಿ ಖರೀದಿಸಿದರು. ಇನ್ನು ನಗರದ ಸೂಪರ್‌ ಮಾರ್ಕೆಟ್‌ಗಳಲ್ಲಿ ಸಹ ಇದೇ ಪರಿಸ್ಥಿತಿ ಕಂಡು ಬಂತು. ಲಾಕ್‌ಡೌನ್‌ ಮಾಡಿದರೆ ಮುಂದಿನ ದಿನಗಳಲ್ಲಿ ಏನು ಸಿಗುತ್ತೋ, ಏನು ಸಿಗುವುದಿಲ್ಲವೋ ಎಂಬ ಆತಂಕದಿಂದ ಸಾರ್ವಜನಿಕರು ಬೆಳಗ್ಗೆಯೇ ಮಾರುಕಟ್ಟೆಗೆ ಧಾವಿಸಿ ಅಗತ್ಯವಿರುವುದು, ಇಲ್ಲದ್ದು ಸೇರಿದಂತೆ ಸಾಮಗ್ರಿಗಳನ್ನು ಖರೀದಿಸಿ ಸಮಾಧಾನದ ನಿಟ್ಟುಸಿರು ಬಿಟ್ಟರು.

ಸಾಮಾಜಿಕ ಅಂತರವಿಲ್ಲ: ಕೊರೊನಾ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಸರ್ಕಾರ ಜಾಗೃತಿ ಮೂಡಿಸಿದರೂ ಯಾರೊಬ್ಬರು ಕೂಡ ಈ ನಿಯಮ ಪಾಲಿಸಲು ಮುಂದಾಗುತ್ತಿಲ್ಲ. ನಗರ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ನಿಯಮ ಪಾಲಿಸದೇ ವಿವಿಧ ಅಂಗಡಿಗಳ ಮುಂದೆ ಮುಗಿಬಿದ್ದು ಜನರು ಸಾಮಗ್ರಿ ಖರೀದಿಸಿದರು. ಮೇ 10ರಿಂದ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ದಿನಸಿ ಖರೀದಿಗೆ ಅವಕಾಶ ಇದೆ ಎಂದು ಹೇಳಿದರೂ ಅನೇಕರು ಆತಂಕದಲ್ಲಿಯೇ ದಿನಸಿ ಸಾಮಗ್ರಿ ಖರೀದಿಸಿದರು.

ಮದುವೆ ಸಿದ್ಧತೆಗೆ ಪರದಾಟ: ಈಗಾಗಲೇ ಮದುವೆ ನಿಗದಿ ಮಾಡಿಕೊಂಡವರು ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಉದ್ದುದ್ದ ಪಟ್ಟಿ ಹಿಡಿದುಕೊಂಡು ಗಂಟೆಗಟ್ಟಲೇ ಅಂಗಡಿಗಳ ಮುಂದೆ ಕಾದು ದಿನಸಿ ಸಾಮಗ್ರಿ ಖರೀದಿಸಿದರು. ಅಂಗಡಿಗಳ ಬಾಗಿಲು ತೆರೆಯುವ ಮೊದಲೇ ಗ್ರಾಮೀಣ ಪ್ರದೇಶದಿಂದ ಬಂದಿದ್ದ ಜನರು ಕಾದು ಕುಳಿತಿದ್ದರು. ಅಂಗಡಿಗಳ ಬಾಗಿಲು ತೆರೆಯುತ್ತಿದ್ದಂತೆ ತಮಗೆ ಬೇಕಾದ ದಿನಸಿ ಸಾಮಗ್ರಿ, ಬುಟ್ಟಿ, ಪೂಜಾ ಸಾಮಗ್ರಿಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಿದರು. ಮದುವೆಗಳ ನಿಗದಿ ಮಾಡಿಕೊಂಡಿರುವ ಹಿನ್ನೆಲೆ ಗ್ರಾಮೀಣ ಭಾಗಗಳಿಂದ ನಗರಗಳಿಗೆ ಬರುವ ಜನರ ಸಂಖ್ಯೆಯೂ ಹೆಚ್ಚಾಗಿತ್ತು. ಅಲ್ಲದೇ ನಗರ ಮಾರುಕಟ್ಟೆಯಲ್ಲಿ ವಾಹನಗಳ ಓಡಾಟ ಹೆಚ್ಚಾಗಿದ್ದರಿಂದ ಬೆಳಗ್ಗೆ ಕೆಲಹೊತ್ತು ಸಂಚಾರಕ್ಕೆ ತೊಂದರೆ ಉಂಟಾಯಿತು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.