ಆಧಾರ್‌ ನೋಂದಣಿಗೆ ನೂಕುನುಗ್ಗಲು

•ಜನರ ನಿಯಂತ್ರಿಸಲು ಪೊಲೀಸರ ಹರಸಾಹಸ•ದಿನವೊಂದಕ್ಕೆ ಕೇವಲ 15-20 ಟೋಕನ್‌ ವಿತರಣೆಗೆ ಆಕ್ರೋಶ

Team Udayavani, Aug 3, 2019, 12:02 PM IST

hv-tdy-3

ಬ್ಯಾಡಗಿ: ಆಧಾರ್‌ ನೋಂದಣಿಗಾಗಿ ಪಟ್ಟಣದ ಕೆವಿಜಿ ಬ್ಯಾಂಕ್‌ ಎದುರು ಜಮಾಯಿಸಿದ್ದ ಜನತೆ.

ಬ್ಯಾಡಗಿ: ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನಲ್ಲಿನ ಆಧಾರ್‌ ಕೇಂದ್ರದ ಮುಂಭಾಗದಲ್ಲಿ ನೋಂದಣಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಜನರನ್ನು ನಿಯಂ ತ್ರಿಸಲು ಪೊಲೀಸರು ಮಾತ್ರ ಹರಸಾಹಸಪಡು ವಂತಾಯಿತು.

ಈ ಮೊದಲು ಆಧಾರ್‌ ಮಾಡಿಸಿ ಕೊಂಡವರ ಆಧಾರ್‌ ಕಾರ್ಡಿನಲ್ಲಿ ಹೆರು, ಜನ್ಮ ದಿನಾಂಕ, ವಿಳಾಸ ಹಾಗೂ ಮೊಬೈಲ್ ನಂಬರ್‌ ಸೇರಿದಂತೆ ಹಲವು ತಪ್ಪುಗಳಿವೆ. ಪರಿಣಾಮ ಆಧಾರ್‌ ಜನತೆಗೆ ಲಿಂಕ್‌ ಮಾಡಿ ಸರ್ಕಾರದ ವಿವಿಧ ಯೋಜನೆ ಪಡೆಯಲು ಕಷ್ಟವಾಗುತ್ತಿದೆ. ಹೀಗಾಗಿ ನಿತ್ಯವೂ ಜನತೆ ಹಗಲಿರುಳು ಆಧಾರ್‌ ಸೇವಾ ಕೇಂದ್ರಗಳ ಮುಂದೆ ಮಲಗುವಂತಾಗಿದೆ.

ಮಕ್ಕಳು, ಮಹಿಳೆಯರು, ವೃದ್ಧರ ಪರಿಸ್ಥಿತಿಯಂತೂ ಹೇಳ ತೀರದು. ಇದಕ್ಕೆ ತಾಜಾ ಉದಾಹರಣೆ ಎನ್ನುವಂತೆ ಗುರುವಾರ ಕೆವಿಜಿ ಬ್ಯಾಂಕ್‌ನಲ್ಲಿ ಆಧಾರ್‌ ತಿದ್ದುಪಡಿ ಹಾಗೂ ಹೊಸ ಆಧಾರ್‌ ಪಡೆಯಲು ಸಾವಿರಾರು ಜನ ಜಮಾಯಿಸಿದ್ದರು. ನೂಕು ನುಗ್ಗಲಿನಲ್ಲಿ ಸಿಲುಕಿಕೊಂಡ ವೃದ್ಧರು, ಮಹಿಳೆಯರು, ಮಕ್ಕಳ ನರಳಾಟ ಚೀರಾಟ ನಿಜಕ್ಕೂ ಮನ ಕರುಗುವಂಥದ್ದು. ಸಾವಿರಾರು ಜನರಿಗೆ ಸಮಸ್ಯೆ ಸೃಷ್ಟಿಸಿರುವ ಸರ್ಕಾರದ ಈ ಧೋರಣೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಂಕ್‌ನ ಆಧಾರ್‌ ಕೌಂಟರ್‌ ನಸುಕಿನಲ್ಲೇ ಸರತಿಯಲ್ಲಿ ನಿಂತಿದ್ದ ಜನರು ಸಿಬ್ಬಂದಿ ಆಗಮಿಸುತ್ತಿದ್ದಂತೆ ನಾಮುಂದು ತಾಮುಂದು ಎಂದು ಮುಗಿಬಿದ್ದರು. ಈ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿ ಸರತಿಯಲ್ಲಿ ಬರುವಂತೆ ಪರಿಪರಿಯಾಗಿ ಮನವಿ ಮಾಡಿದರೂ ಜನರು ಮಾತ್ರ ಕೇಳುವ ಸ್ಥಿತಿಯಲ್ಲಿರಲಿಲ್ಲ. ಹೀಗಾಗಿ ಪರಸ್ಪರ ಮಾತಿನ ಚಕಮಕಿ ಆರೋಪ ಪ್ರತ್ಯಾರೋಪ ಮಾಡುತ್ತಿದ್ದ ದೃಶ್ಯ ಕಂಡು ಬಂದವು.

ಕೆವಿಜಿ ಬ್ಯಾಂಕ್‌ ಸೇರಿದಂತೆ ಎಸ್‌ಬಿಐ, ಅಂಚೆ ಕಚೇರಿ, ಹಾಗೂ ತಹಶೀಲ್ದಾರ್‌ ಕಚೇರಿ ಸೇರಿದಂತೆ ಒಟ್ಟು 4 ಕಡೆಗಳಲ್ಲಿ ಆಧಾರ್‌ ಕೌಂಟರ್‌ಗಳನ್ನು ಪ್ರಾರಂಭಿಸಲಾಗಿದೆ. ಆದರೆ, ದಿನವೊಂದಕ್ಕೆ ಕೇವಲ 15-20 ಟೋಕನ್‌ ಕೊಡುತ್ತಿರುವುದರಿಂದ ಜನರ ಸಮಸ್ಯೆಗೆ ಮುಕ್ತಿ ಸಿಗುತ್ತಿಲ್ಲ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಬ್ಯಾಡಗಿ ಪೊಲೀಸ್‌ ಠಾಣೆಯ ಸಿಬ್ಬಂದಿ ಜನರನ್ನು ನಿಯಂತ್ರಿಸಲು ಹರಸಾಸಹಸ ಪಡಬೇಕಾಯಿತು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ಪೊಲೀಸರು ಆಧಾರ್‌ ಸಿಬ್ಬಂದಿಯೊಂದಿಗೆ ಚರ್ಚಿಸಿ ನಿತ್ಯವೂ 25 ಜನರಿಗೆ ಅವಕಾಶ ನೀಡುವಂತೆ ಮನವಿ ಮಾಡಿದರು. ಅಲ್ಲದೇ ಎಲ್ಲರಿಗೂ ದಿನಾಂಕ ಮತ್ತು ಸಮಯ ಸಹಿತ ಚೀಟಿ ಗಳನ್ನು ಕೊಡುವ ಮೂಲಕ ಮುಂಗಡ ಬುಕ್ಕಿಂಗ್‌ ಕೊಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಪ್ರಸ್ತುತ ಸ್ಥಿತಿಯಲ್ಲಿ ಬ್ಯಾಂಕ್‌ ಮತ್ತು ಅಂಚೆ ಕಚೇರಿಗಳಲ್ಲಿ ನೋಂದಣಿಗೆ ಅವಕಾಶವಿರುವುದರಿಂದ ತಿಂಗಳಿಗೆ ಕೇವಲ 24 ದಿವಸ, ಅದೂ ಬ್ಯಾಂಕ್‌ ಅವಧಿಯಲ್ಲಿ ನೋಂದಣಿಗೆ ಅವಕಾಶವಿದೆ. ಪ್ರತಿ ದಿನಕ್ಕೆ ಸದರಿ ಕೌಂಟರ್‌ನಿಂದ ಕೇವಲ 20 ರಿಂದ 25 ಜನರಿಗಷ್ಟೇ ನೋಂದಣಿಗೆ ಅವಕಾಶವಿದ್ದು, ಗುರುವಾರ ಸರತಿಯಲ್ಲಿ ನಿಂತಿದ್ದ ಜನರು ಆಧಾರ್‌ ನೋಂದಣಿಗೆ ಮುಂದಿನ 5 ತಿಂಗಳು ಕಾಯಲೇಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.