ದೇಗುಲ-ಚರ್ಚ್‌-ಮಸೀದಿ ತೆರೆಯಲು ಅವಕಾಶ

Team Udayavani, Jun 8, 2020, 6:33 AM IST

ದೇಗುಲ-ಚರ್ಚ್‌-ಮಸೀದಿ ತೆರೆಯಲು ಅವಕಾಶ

ಹಾವೇರಿ: ಸರ್ಕಾರ ಲಾಕ್‌ಡೌನ್‌ ಸಡಿಲಿಕೆ ಮಾಡಿ ಜೂ. 8 ರಿಂದ ದೇವಸ್ಥಾನ, ಚರ್ಚ್‌, ಮಸೀದಿ ತೆರೆಯಲು ಅವಕಾಶ ನೀಡಿದ್ದು ಜಿಲ್ಲೆಯ ಎಲ್ಲ ಧಾರ್ಮಿಕ ಕೇಂದ್ರಗಳು ಬಾಗಿಲು ತೆರೆಯಲು ಸಿದ್ಧತೆ ನಡೆಸಿವೆ.

ಬ್ಯಾಡಗಿ ತಾಲೂಕು ಕದರಮಂಡಲಗಿ ಆಂಜನೇಯ, ರಾಣಿಬೆನ್ನೂರು ತಾಲೂಕು ದೇವರಗುಡ್ಡದ ಮಾಲತೇಶ, ಚೌಡದಾನಯ್ಯಪುರ,ಸವಣೂರು ತಾಲೂಕಿನ ಕಾರಡಗಿ ವೀರಭದ್ರೇಶ್ವರ, ಹಾನಗಲ್ಲ ತಾಲೂಕಿನ ತಾರಕೇಶ್ವರ, ಶಿಶುನಾಳದ ಶರೀಫಗಿರಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ದೇವರ ದರ್ಶನಕ್ಕೆ ಬರುವ ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಗುರುತು ಹಾಕುವುದು, ದೇವಸ್ಥಾನ ಆವರಣದ ಸ್ವಚ್ಛತೆ, ಸ್ಯಾನಿಟೈಸರ್‌ ವ್ಯವಸ್ಥೆ ಹಾಗೂ ದೇವಸ್ಥಾನದ ಒಳಗೆ ಪ್ರವೇಶಿಸುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಲು ಸಿಬ್ಬಂದಿ ನೇಮಕ ಮಾಡಿಕೊಂಡಿವೆ. ಜಿಲ್ಲೆಯ ಬಹುತೇಕ ಪ್ರವಾಸಿತಾಣಗಳು ಪ್ರವಾಸಿಗರ ಪ್ರವೇಶಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು ಜಿಲ್ಲಾಡಳಿತದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿವೆ. ಶಿಗ್ಗಾವಿ ತಾಲೂಕಿನ ಗೊಟಗೋಡಿ ಉತ್ಸವ್‌ ರಾಕ್‌ ಗಾರ್ಡನ್‌ ಬಾಗಿಲು ತೆರೆಯಲು ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬಾಗಿಲು ತೆರೆಯಲು ಜಿಲ್ಲಾಧಿಕಾರಿಯವರಿಂದ ಇನ್ನೂ ಅಧಿಕೃತ ಆದೇಶ ಬಂದಿಲ್ಲ.

ಆದೇಶ ಬರುತ್ತಿದ್ದಂತೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎನ್ನುತ್ತಾರೆ ಗಾರ್ಡನ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ ದಾಸನೂರ. ಕಾಗಿನೆಲೆ ಹಾಗೂ ಬಾಡದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಪ್ರವೇಶಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಥರ್ಮಲ್‌ ಸ್ಕ್ರೀನಿಂಗ್‌ ಯಂತ್ರ ಸಹ ತರಿಸಿಕೊಳ್ಳಲಾಗುತ್ತಿದ್ದು ಜಿಲ್ಲಾಡಳಿತದ ಆದೇಶ ಬರುತ್ತಿದ್ದಂತೆ ಜೂ. 9ರ ಬಳಿಕ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಲ್ಲೇಶಪ್ಪ ಹೊರಪೇಟೆ ತಿಳಿಸಿದ್ದಾರೆ.

ಜೂ. 8 ರಿಂದ ಭಕ್ತರ ದರ್ಶನಕ್ಕಾಗಿ ಸ್ವಚ್ಛತೆ, ಸಾಮಾಜಿಕ ಅಂತರ ಸೇರಿದಂತೆ ಇನ್ನಿತರ ಸುರಕ್ಷತಾ ಕ್ರಮಗಳ ಪಾಲನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ವಿಶೇಷ ಪೂಜೆ, ತೀರ್ಥ, ಪ್ರಸಾದ ವಿತರಣೆ ಇರುವುದಿಲ್ಲ. ಕೇವಲ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡುವಂತೆ ತಹಶೀಲ್ದಾರ್‌ರಿಂದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದೇವೆ.  –ಡಿ.ಸಿ. ಕುಲಕರ್ಣಿ, ಅಧ್ಯಕ್ಷರು, ಕದರಮಂಡಲಗಿ ಆಂಜನೇಯ ದೇವಸ್ಥಾನ ಕದರಮಂಡಲಗಿ ದೇವಸ್ಥಾನ ಸಮಿತಿ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.