ನರೇಗಾದಲ್ಲಿ ವೈಯಕ್ತಿಕ ಕಾಮಗಾರಿಗೂ ಆದ್ಯತೆ

ಬಸಾಪೂರ ಗ್ರಾಮ ಪಂಚಾಯಿತಿಯಲ್ಲಿ ರೋಜಗಾರ್‌ ದಿನಾಚರಣೆ

Team Udayavani, Jul 5, 2019, 2:20 PM IST

hv-tdy-4..

ಹಾವೇರಿ: ಬಸಾಪೂರ ಗ್ರಾಮ ಪಂಚಾಯಿತಿಯಲ್ಲಿ ರೋಜಗಾರ್‌ ದಿನ ಆಚರಿಸಲಾಯಿತು.

ಹಾವೇರಿ: ಬಸಾಪೂರ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೋಜಗಾರ್‌ ದಿನ ಆಚರಿಸಲಾಯಿತು.

ಕೃಷಿ ಸಹಾಯಕ ನಿರ್ದೇಶಕ ಕರಿಯಲ್ಲಪ್ಪ ಡಿ.ಕೆ. ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ನೈಸರ್ಗಿಕ ಸಂಪನ್ಮೂಲ ಕಾಮಗಾರಿಗಳು, ಜಲಾಮೃತ ಕಾಮಗಾರಿಗಳು, ವೈಯಕ್ತಿಕ ಕಾಮಗಾರಿಗಳು, ತೋಟಗಾರಿಕೆ, ರೇಷ್ಮೆ, ಅರಣ್ಯ, ಕೃಷಿ ಇಲಾಖೆಗಳಿಗೆ ಸಂಬಂಧಿಸಿದ ವೈಯಕ್ತಿಕ ಭೂ ಅಭಿವೃದ್ಧಿ ಬದು ನಿರ್ಮಾಣ, ಕೃಷಿ ಹೊಂಡ, ನೀರು ಕೋಯಿಲು ಕಾಮಗಾರಿಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ತಾಲೂಕು ಮಾಹಿತಿ ಶಿಕ್ಷಣ ಮತ್ತು ಸಂವಹನ ಅಧಿಕಾರಿ ಗಿರೀಶ ಬೆನ್ನೂರ ಮಾತನಾಡಿ, ರೋಜಗಾರ ದಿವಸದ ಮಹತ್ವ ಮತ್ತು ಉದ್ದೇಶ ಕುರಿತು ಮಾತನಾಡಿದರು.

ರೋಜಗಾರ ದಿವಸವನ್ನು ವಾರ್ಡ್‌ನ ಶಾಲೆಗಳಲ್ಲಿ, ಗ್ರಾಮ ಪಂಚಾಯತ ಭವನಗಳಲ್ಲಿ, ರಾಜೀವ ಗಾಂಧಿ ಸೇವಾ ಕೇಂದ್ರಗಳಲ್ಲಿ ನಡೆಸಬಹುದಾಗಿದೆ. ನಿಗದಿತ ಸಂಖ್ಯೆಯಲ್ಲಿ ಉದ್ಯೋಗದ ಬೇಡಿಕೆ ಇರುವಂತೆ ನೋಡಿಕೊಳ್ಳುವುದು ಮತ್ತು ವಸತಿ ಯೋಜನೆ ಅಡಿ ಪ್ರತಿಯೊಬ್ಬ ಫಲಾನುಭವಿಗೆ 90 ಮಾನವ ದಿನಗಳ ಮೊತ್ತವನ್ನು ಸಂಬಂಧಪಟ್ಟ ಫಲಾನುಭವಿಗೆ ಪಾವತಿಸುವದರ ಬಗ್ಗೆ ತಿಳಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಬಹುದಾದ ಕಾಮಗಾರಿಗಳಾದ ಜಲ ಸಂರಕ್ಷಣೆ ರಚನೆಗಳು ಹಾಗೂ ಮಳೆ ನೀರು ತಡೆಗಟ್ಟುವ ರಚನೆಗಳು, ಅರಣ್ಯೀಕರಣ ಮತ್ತು ನೆಡುತೋಪುಗಳನ್ನೊಳಗೊಂಡ ಬರ ತಡೆಯುವ ಕಾಮಗಾರಿಗಳು, ರೈತರ ಕಣ, ಸ್ಮಶಾನ ಅಭಿವೃದ್ಧಿ, ಗ್ರಾಮೀಣ ಉದ್ಯಾನವನಗಳು, ಗ್ರಾಮೀಣ ಗೋದಾಮುಗಳು, ಕರೆ, ಬಾವಿ, ಗೋಕಟ್ಟೆಗಳು ಮುಂತಾದ ಸಾಂಪ್ರದಾಯಿಕ ಜಲಮೂಲಗಳ ಪುಶ್ಚೇತನ ಕಾಮಗಾರಿಗಳು, ಜಲ ಮರುಪೂರಣ ಗುಂಡಿಗಳ ಮೂಲಕ ಗ್ರಾಮೀಣ ಕುಡಿಯುವ ನೀರಿನ ಕಾಮಗಾರಿಗಳು, ಅಂಗನವಾಡಿ ಕಟ್ಟಡಗಳ ನಿರ್ಮಾಣ, ಆಟದ ಮೈದಾನ ನಿರ್ಮಾಣ, ವ್ಯಕ್ತಿಗತ ಫಲಾನುಭವಿಗಳಿಗೆ ಪ್ಯಾಕೇಜ ಮಾದರಿಗಳಲ್ಲಿ ಭೂ ಅಭಿವೃದ್ಧಿ ಕುರಿ-ದನದ ದೊಡ್ಡಿ ಇನ್ನಿತರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗಿರೀಶ ಬೆನ್ನೂರ ತಿಳಿಸಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಅಲ್ಲಾಬಕ್ಷ ವಡವಿ ನಿರೂಪಿಸಿ, ವಂದಿಸಿದರು. ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಮ ಪಂಚಾಯತ್‌ ಸಿಬ್ಬಂದಿ ವರ್ಗದವರು, ಕೂಲಿಕಾರರು, ಅಂಗನವಾಡಿ ಮೇಲ್ವಿಚಾರಕಿ ಗಿರಿಜವ್ವ ಪಾಟೀಲ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.