ಮಣ್ಣೆತ್ತಿನ ಅಮವಾಸ್ಯೆ ಹಬ್ಬದಾಚರಣೆ ಸಿದ್ಧತೆ

Team Udayavani, Jul 2, 2019, 9:04 AM IST

ಹಾವೇರಿ: ಇಲ್ಲಿಯ ಬಸವೇಶ್ವರ ನಗರದ ಸಂತೆಯಲ್ಲಿ ಮಣ್ಣಿನಿಂದ ತಯಾರಿಸಿದ ಎತ್ತುಗಳನ್ನು ಮಾರಾಟ ಮಾಡುತ್ತಿರುವುದು.

ಹಾವೇರಿ: ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ಆಚರಿಸುವ ರೈತರ ಮೊದಲ ಕೃಷಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಮಣ್ಣೆತ್ತಿನ ಅಮವಾಸೆ ಹಬ್ಬದಾಚರಣೆ ಜು. 2ರಂದು ನಡೆಯಲಿದ್ದು ಇದಕ್ಕಾಗಿ ಜಿಲ್ಲೆಯಾದ್ಯಂತ ಸಿದ್ಧತೆ ನಡೆದಿದೆ.

ಮಣ್ಣಿನಿಂದ ಮಾಡಿದ ಎತ್ತುಗಳ ಜೋಡಿಗೆ ಪೂಜೆ ಮಾಡುವುದು ಈ ಹಬ್ಬದ ವಿಶೇಷವಾಗಿದೆ. ರೈತರು ತಮ್ಮ ಆಪ್ತಮಿತ್ರ ಎತ್ತಿನ ಜೋಡಿಗೆ ವಿಶೇಷ ಪೂಜೆ ಮಾಡುವುದರ ಮೂಲಕ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸುತ್ತಾರೆ. ಉತ್ತರ ಕರ್ನಾಟಕ ರೈತರ ಪಾಲಿಗೆ ಮಣ್ಣೆತ್ತಿನ ಅಮಾವಾಸೆ ಎಂದರೆ ಎಲ್ಲಿಲ್ಲದ ಹಿಗ್ಗು. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರು ಸೇರಿದಂತೆ ಎಲ್ಲ ವರ್ಗದ ಜನರು ಪಾಲ್ಗೊಂಡು ಸಂಭ್ರಮದಿಂದ ಆಚರಿಸುತ್ತಾರೆ.

ಈ ಬಾರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಬಂದಿಲ್ಲ. ಇನ್ನು ಮುಂಗಾರು ಮಳೆ ಒಂದು ತಿಂಗಳ ತಡವಾಗಿ ಈಗಷ್ಟೆ ಆಗೊಮ್ಮೆ ಈಗೊಮ್ಮೆ ಎನ್ನುವಂತೆ ಮಳೆ ಬರುತ್ತಿದೆ. ಮಳೆಯ ಕೊರತೆ ನಡುವೆಯೂ ರೈತ ತನ್ನ ಕೃಷಿ ಕಾಯಕದಲ್ಲಿ ಕೈಜೋಡಿಸುವ ಬಸವಣ್ಣನ ಹಬ್ಬವನ್ನು ಸಂಭ್ರಮದಿಂದಲೇ ಆಚರಿಸಲು ಮುಂದಾಗಿದ್ದಾನೆ.

ಮಣ್ಣಿನ ಎತ್ತುಗಳು: ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶಗಳು ಮತ್ತು ಪಟ್ಟಣಗಳಲ್ಲಿ ಕುಂಬಾರ ಸಮುದಾಯದ ಮಹಿಳೆಯರು, ಮಕ್ಕಳು ಎಲ್ಲ ಸದಸ್ಯರು ಸೇರಿ ಕೆರೆಯ ಜಿಗುಟಾದ ಕರಿ ಮಣ್ಣಿನಲ್ಲಿ ಎತ್ತುಗಳನ್ನು ತಯಾರಿಸುತ್ತಾರೆ. ಈ ಮಣ್ಣಿನ ಎತ್ತುಗಳ ಕೊಡುಗಳಿಗೆ ಬಣ್ಣಹಚ್ಚಿ, ಕೊರಳಲ್ಲಿ ಗೆಜ್ಜೆ, ಅಲಂಕಾರ ಆಭರಣ ಹಾಕಿದ ರೀತಿಯಲ್ಲಿ ನೂರಾರು ಜೋಡೆತ್ತಿನ ಮೂರ್ತಿಗಳನ್ನು ಸಿದ್ಧಪಡಿಸಿ ಮಾರುಕಟ್ಟೆಗೆ ತಂದಿದ್ದು ಮಾರಾಟ ಜೋರಾಗಿಯೇ ನಡೆದಿದೆ.

ಮಾರುಕಟ್ಟೆಯಿಂದ ಬಸವಣ್ಣನ ಮೂರ್ತಿಗಳನ್ನು ಮನೆಗೆ ಒಯ್ಯುವ ಪರಿಪಾಠ ಈಗ ಹೆಚ್ಚು ಪ್ರಚಲಿತದಲ್ಲಿದೆಯಾದರೂ ಬಸವಣ್ಣನ ಮೂರ್ತಿ ತಯಾರಿಸಿದ ಕುಂಬಾರರಿಗೆ ಹಣ, ಜೋಳ, ದವಸಧಾನ್ಯ, ಅಕ್ಕಡಿಕಾಳು ಮೂರ್ತಿಗಳನ್ನು ಒಯ್ಯುವ ಸಂಪ್ರದಾಯ ಇಂದಿಗೂ ಕೆಲವು ಕಡೆಗಳಲ್ಲಿ ಇದೆ.

ಮಣ್ಣಿನಿಂದ ತಯಾರಿಸಲಾದ ಜೋಡೆತ್ತುಗಳ ಮೂರ್ತಿಯನ್ನು ಮನೆಯ ದೇವರ ಜಗಲಿಯ ಮೇಲೆ ಪ್ರತಿಷ್ಠಾಪನೆ ಮಾಡಿ, ಪೂಜಿಸಿ ಪ್ರಾರ್ಥಿಸುತ್ತಾರೆ. ಇನ್ನು ಕೆಲ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳೆಲ್ಲರೂ ಸೇರಿ ಚಿಕ್ಕದೊಂದು ಬುಟ್ಟಿಯಲ್ಲಿ ಮಣ್ಣಿನ ಎತ್ತುಗಳನ್ನು ಹಿಡಿದುಕೊಂಡು ಗ್ರಾಮದಲ್ಲಿನ ಮನೆ ಮನೆಗೆ ಹೋಗಿ ಆರತಿ ಮಾಡಿಸಿಕೊಳ್ಳುವ ಸಂಪ್ರದಾಯೂ ಇದೆ. ಅಲ್ಲದೇ ಈ ಸಂದರ್ಭದಲ್ಲಿ ಮಹಿಳೆಯರು ಜೋಡೆತ್ತಿಗೆ ಆರತಿ ಮಾಡಿ ದವಸ, ಧಾನ್ಯಗಳನ್ನು ಉಡುಗೊರೆಯಾಗಿ ನೀಡುವ ಪದ್ಧತಿ ಇಂದಿಗೂ ಕೆಲ ಗ್ರಾಮೀಣ ಪ್ರದೇಶದಲ್ಲಿದೆ. ಒಟ್ಟಾರೆ ರೈತರ ಹಬ್ಬ ಎನಿಸಿದ ಮಣ್ಣೆತ್ತಿನ ಅಮವಾಸೆ ಹಬ್ಬದಾಚರಣೆಗೆ ರೈತ ಕುಟುಂಬಗಳು ಸಜ್ಜಾಗಿದ್ದು, ರೈತರ ಮನೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

 

•ಎಚ್.ಕೆ. ನಟರಾಜ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ