ಮಳೆಗಾಲ ಮುಂಜಾಗ್ರತೆಗೆ ಸ್ಥಳೀಯ ಆಡಳಿತ ಸಿದ್ಧತೆ

•ರಸ್ತೆ ಮೇಲೆ ನೀರು ಹರಿಯದಂತೆ ಚರಂಡಿ ಸ್ವಚ್ಛತೆ•ದೊಡ್ಡ ಗಟಾರಿಗೆ ಸಂಪರ್ಕಿಸುವಲ್ಲಿ ಗ್ರಿಲ್ ಅಳವಡಿಕೆ

Team Udayavani, Jun 2, 2019, 12:31 PM IST

haveri-tdy-1..
ಹಾನಗಲ್ಲ : ಮುಂಗಾರು ಮಳೆಯ ಸುಳಿವೇ ಇಲ್ಲದೆ ರೈತ ಸಮುದಾಯ ಮುಗಿಲತ್ತ ಮುಖ ಮಾಡಿ ಮಳೆರಾಯನ ಆಗಮನಕ್ಕೆ ಕಾಯುತ್ತಿದ್ದರೆ, ಇತ್ತ ಮಳೆಗಾಲದಲ್ಲಾಗಬಹುದಾದ ಅನಾಹುತಗಳನ್ನು ತಡೆಯಲು ಸ್ಥಳೀಯ ಆಡಳಿತ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ.

ಮುಂಗಾರು ಪ್ರವೇಶಿಸುತ್ತಿದ್ದಂತೆ ಎದುರಾಗುವ ಮೊದಲ ಸಮಸ್ಯೆ ಎಂದರೆ ಚರಂಡಿಗಳೆಲ್ಲ ತುಂಬಿ ರಸ್ತೆ ಮೇಲೆ ನೀರು ಹರಿದು ಸಂಚಾರ ಅಸ್ತವ್ಯಸ್ತಗೊಳ್ಳುವುದು, ಅಂಗಡಿ, ಮನೆಗಳಿಗೆ ನೀರು ಹೊಕ್ಕು ಸಾರ್ವಜನಿಕರಿಗೆ ಕಿರಿಕಿರಿ ಮಾಡುವುದು ಸಾಮಾನ್ಯ. ಆದರೆ, ಈ ಬಾರಿ ಹಾನಗಲ್ಲ ಪಟ್ಟಣದಲ್ಲಿ ವಿಶೇಷ ಕಾರ್ಯಕ್ರಮದ ಮೂಲಕ ಗಟಾರಿನಲ್ಲಿ ನೀರು ಸರಾಗವಾಗಿ ಹರಿದು ರಸ್ತೆ ಮೇಲೆ ಹರಿಯದಂತೆ ಮಾಡಲು ಪುರಸಭೆ ಮುಂದಾಗಿದೆ. ಗಟಾರು ಸ್ವಚ್ಛತೆ ಜತೆಗೆ ಸಣ್ಣ ಗಟಾರುಗಳು ದೊಡ್ಡ ಗಟಾರಿಗೆ ಸಂಪರ್ಕ ಹೊಂದುವಲ್ಲಿ ಗ್ರಿಲ್ ಅಳವಡಿಸಿ, ಕಸಕಡ್ಡಿ ದೊಡ್ಡ ಗಟಾರಿನೊಳಗೆ ಹೋಗದಂತೆ ತಡೆಯುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ತ್ಯಾಜ್ಯ ಹರಿದು ಬಂದರೂ ಅದು ಅಲ್ಲೆ ಸ್ಥಗಿತಗೊಳ್ಳುವಂತೆ ಮಾಡಲಾಗುತ್ತಿದೆ. ಗ್ರಿಲ್ ಬಳಿ ಸಂಗ್ರಹಗೊಳ್ಳುವ ಕಸ ತೆಗೆದುಬಿಟ್ಟರೆ ನೀರು ಸರಾಗವಾಗಿ ಹರಿದು ಹೋಗಲಿದೆ.

ಗ್ರಾಮೀಣ ಭಾಗದಲ್ಲೂ ಇಂತಹ ಸಮಸ್ಯೆ ತಡೆಗಟ್ಟಲು ತಾಲೂಕು ಪಂಚಾಯಿತಿ ಕೂಡ ಹಿಂದೆ ಬಿದ್ದಿಲ್ಲ. ತಾಪಂ ಇಒಗಳೆಲ್ಲ ಪಿಡಿಒಗಳ ಜತೆಗೆ ಸಭೆ ನಡೆಸಿ, ಮಳೆ ಬರುವುದಕ್ಕೂ ಮುನ್ನ ಎಲ್ಲ ಗ್ರಾಮಗಳಲ್ಲಿನ ಚರಂಡಿ ಸ್ವಚ್ಛಗೊಳಿಸಿ ರಸ್ತೆಗೆ ನೀರು ಹರಿಯದಂತೆ ತಡೆಯಲು ಕ್ರಮ ಕೈಗೊಳ್ಳಲು ಸೂಚಿಸಿದ್ದು, ಈಗಾಗಲೇ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ.

ಮುಂಗಾರಿನ ಮಳೆಗೆ ಗುಡುಗು-ಸಿಡಿಲು-ಬಿರುಗಾಳಿಗೆ ಮರ-ಗಿಡ ಹಾಗೂ ವಿದ್ಯುತ್‌ ಕಂಬಗಳು ಬಿದ್ದು ಹಾನಿಯಾಗುವ ಸಂಭವ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಹೆಸ್ಕಾಂ ಇಲಾಖೆ ಈಗಾಗಲೇ ಸಿಥಿಲಗೊಂಡಿರುವ ಮರ-ಗಿಡಗಳ ತೆರವುಗೊಳಿಸಲು ಮುಂದಾಗಿದೆ ಹಾಗೂ ಅಡ್ಡವಾಗಿ ಬೀಳುವ ಹಂತದಲ್ಲಿರುವ ವಿದ್ಯುತ್‌ ಕಂಬಗಳನ್ನು ದುರಸ್ತಿಗೊಳಿಸುವ ಕಾರ್ಯ ಕೈಗೆತ್ತಿಕೊಂಡಿದೆ.

ತಾಲೂಕು ಆಡಳಿತ ನೆರೆ ಬರುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗಂಜಿ ಕೇಂದ್ರ ಸ್ಥಾಪಿಸುವ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಸುಮಾರು 15 ಗ್ರಾಮಗಳ ಪಟ್ಟಿ ಮಾಡಿದ್ದು, ಗಂಜಿ ಕೇಂದ್ರಗಳನ್ನು ಎಲ್ಲೆಲ್ಲಿ ತೆರೆಯಬೇಕೆಂದು ಯೋಜನೆ ಹಾಕಿಕೊಂಡಿದೆ.

ಇನ್ನು ಕೃಷಿ ಇಲಾಖೆ ಮುಂಗಾರು ಹಂಗಾಮಿಗೆ ಈಗಾಗಲೇ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಸಾಮಗ್ರಿಗಳ ದಾಸ್ತಾನು ಮಾಡಿಕೊಂಡಿದೆ. ಮಳೆ ಬಂದರೆ ಕೂಡಲೇ ಬೀಜ ವಿತರಣೆ ಮುಂದಾಗುವ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ.

•ರವಿ ಲಕ್ಷ್ಮೇಶ್ವರ

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.