ಪಿಯುಸಿ ಪರೀಕ್ಷೆಗೆ ಸಿದ್ಧತೆ


Team Udayavani, Jun 16, 2020, 7:28 AM IST

ಪಿಯುಸಿ ಪರೀಕ್ಷೆಗೆ ಸಿದ್ಧತೆ

ಸಾಂದರ್ಭಿಕ ಚಿತ್ರ

ಹಾವೇರಿ: ಕೋವಿಡ್ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರ ಬಾಕಿ ಇರುವ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆಯನ್ನು ಜೂ. 18ರಂದು ನಡೆಸಲು ನಿರ್ಧರಿಸಿದ್ದು, ಇದಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪರೀಕ್ಷೆಗಾಗಿ 466 ಕೊಠಡಿಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸೋಮವಾರದಿಂದಲೇ ಎಲ್ಲ ಕೊಠಡಿಗಳನ್ನು ಸ್ಯಾನಿಟೈಸರ್‌ ಹಾಕಿ ಶುಚಿಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಸುರಕ್ಷತಾ ಕ್ರಮವಾಗಿ ನೆಲ, ಗೋಡೆ, ಬೆಂಚ್‌, ಡೆಸ್ಕ್ ಎಲ್ಲವನ್ನೂ ಸ್ಯಾನಿಟೈಸರ್‌ ಹಾಕಿ ಶುಚಿಗೊಳಿಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಮಾತ್ರ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಎಲ್ಲ ಮಕ್ಕಳಿಗೆ ಪದವಿಪೂರ್ವ ಶಿಕ್ಷ‌ಣ ಇಲಾಖೆಯಿಂದ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ ಹಾಗೂ ಮಾಸ್ಕ್ ವ್ಯವಸ್ಥೆ ಮಾಡಲಾಗುತ್ತಿದೆ. ಜ್ವರ ಇರುವ ಮಕ್ಕಳಿಗೆ ವಿಶೇಷ ಕೊಠಡಿ ವ್ಯವಸ್ಥೆಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು 9 ಗಂಟೆಗೆ ಪರೀಕ್ಷಾ ಕೇಂದ್ರ ತಲುಪುವಂತೆ ಆಗಮಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

ಜಿಲ್ಲೆಯ 23 ಕೇಂದ್ರ ಹಾಗೂ 7 ಹೆಚ್ಚುವರಿ ಬ್ಲಾಕ್‌ಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 13955 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ಕೋವಿಡ್  ಲಾಕ್‌ಡೌನ್‌ನಿಂದ ವಿದ್ಯಾರ್ಥಿಗಳು ಇರುವ ಸ್ಥಳದಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದರಿಂದ ಹೊರ ಜಿಲ್ಲೆಗಳಿಂದ ಬಂದ 902 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಈ ಹಿಂದೆ ನೋಂದಾಯಿಸಿಕೊಂಡಿದ್ದ 4 ವಿದ್ಯಾರ್ಥಿಗಳು ಬೇರೆ ಜಿಲ್ಲೆಯಲ್ಲಿ ಪರೀಕ್ಷೆ  ಬರೆಯಲಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.