ಹೊಸ ನೀರಲಗಿ ತುಂಬಾ ಹಳೆಯ ಸಮಸ್ಯೆಗಳು

ಜಿಲ್ಲಾಧಿಕಾರಿಗೆ ಕಾದಿವೆ ಹತ್ತಾರು ಮನವಿಗಳು,ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಮೂಡಿದೆ ಭರವಸೆ

Team Udayavani, Feb 17, 2021, 6:26 PM IST

ಹೊಸ ನೀರಲಗಿ ತುಂಬಾ ಹಳೆಯ ಸಮಸ್ಯೆಗಳು

ಹಾವೇರಿ: ಸವಣೂರು ತಾಲೂಕಿನ ಹೊಸನೀರಲಗಿಯಲ್ಲಿ ಸಮಸ್ಯೆಗಳು ರಾರಾಜಿಸುತ್ತಿವೆ. ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಗಳು ಫೆ.20ರಂದು= ವಾಸ್ತವ್ಯ ಮಾಡಲಿದ್ದು, ಗ್ರಾಮದಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಇನ್ನಾದರೂ ಊರಿನ ಸಮಸ್ಯೆಗಳುಬಗೆಹರಿಯಲಿವೆ ಎಂಬ ಭರವಸೆ ಗ್ರಾಮಸ್ಥರದ್ದಾಗಿದೆ.

ಜಿಲ್ಲಾಡಳಿತ ಈಗಾಗಲೇ ಸರ್ಕಾರದ ಆದೇಶದಂತೆ ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮ ವಾಸ್ತವ್ಯ ನಡೆಸಲು ಸಿದ್ಧತೆ ನಡೆಸಿದ್ದು, ಫೆ.20ರಂದು ಜಿಲ್ಲಾಧಿಕಾರಿಗಳು ಹೊಸನೀರಲಗಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿ ಜನರ ಸಮಸ್ಯೆ ಆಲಿಸುವ ಮೂಲಕ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಗ್ರಾಮ ವಾಸ್ತವ್ಯ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಡೆಯಲಿದ್ದು, ಜಿಪಂ ಸಿಇಒ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು ಜಿಲ್ಲಾ ಧಿಕಾರಿಗಳಿಗೆ ಸಾಥ್‌ ನೀಡಲಿದ್ದಾರೆ. ಗ್ರಾಮಗಳಲ್ಲಿನ ಎಲ್ಲ ಸಮಸ್ಯೆಗಳನ್ನು ತಿಳಿದು ಅದನ್ನು ಸ್ಥಳದಲ್ಲಿಯೇ ಬಗೆಹರಿಸುವುದು ಮತ್ತು ಕೆಲವನ್ನು ನಂತರ ನಿವಾರಿಸುವುದು ಇದರ ಉದ್ದೇಶವಾಗಿದೆ.

 ಹೊಸನೀರಲಗಿ ಗ್ರಾಮಕ್ಕೆ ಭೇಟಿ: ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಸವಣೂರು ತಾಲೂಕಿನಹೊಸನೀರಲಗಿ ಗ್ರಾಮವನ್ನು ಜಿಲ್ಲಾಡಳಿತ ಆಯ್ಕೆ ಮಾಡಿಕೊಂಡಿದೆ. ಈ ಕುರಿತು ಗ್ರಾಮದ ಜನರಿಗೆ ಮೊದಲೇ ಮಾಹಿತಿ ನೀಡಲಾಗಿದ್ದು, ಗ್ರಾಮದ ಜನತೆಗೆ ಆ ದಿನ ಗ್ರಾಮದಲ್ಲಿಯೇ ಉಳಿದುಕೊಂಡು ತಮ್ಮಲ್ಲಿರುವ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಕಂದಾಯ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿರುವುದರಿಂದ ಸಾಕಷ್ಟು ಸಮಸ್ಯೆಗಳು ಸ್ಥಳದಲ್ಲಿಯೇ ಬಗೆಹರಿಸಲು ಸಾಧ್ಯವಾಗಲಿದೆ.

ಗ್ರಾಮದಲ್ಲಿ ನೂರೆಂಟು ಸಮಸ್ಯೆ: ಹೊಸನೀರಲಗಿ ಗ್ರಾಮದಲ್ಲಿ ಸುಮಾರು 300ಕ್ಕೂ ಅಧಿಕ ಕುಟುಂಬಗಳು ವಾಸವಾಗಿದ್ದು, ನಿತ್ಯ ನೂರೆಂಟು ಸಮಸ್ಯೆಗಳ ಮಧ್ಯೆಯೇಬದುಕು ಸಾಗಿಸುತ್ತಿದ್ದಾರೆ. ಗ್ರಾಮದ ನೂರಾರುಕುಟುಂಬಗಳು ಮನೆಗಳನ್ನು ನಿರ್ಮಿಸಿಕೊಂಡಿದ್ದು, ಪಹಣಿ ಪತ್ರ ಇಲ್ಲದೇ ಅತಂತ್ರ ಸ್ಥಿತಿಯಲ್ಲಿಯೇ ಜೀವನ ನಡೆಸುತ್ತಿವೆ. ಸಂಬಂಧಪಟ್ಟ ಗ್ರಾಪಂಗೆ ಮನೆ ಕರ ಭರಿಸುತ್ತಾ ಬಂದಿದ್ದರೂ ಇನ್ನುವರೆಗೂ ಗ್ರಾಪಂನಿಂದ ಪಹಣಿ ಪತ್ರ ವಿತರಿಸಿಲ್ಲ. ಹೀಗಾಗಿ ಪಹಣಿ ಪತ್ರ ಒದಗಿಸಬೇಕು ಎಂಬುದು ಗ್ರಾಮಸ್ಥರ ಪ್ರಮುಖ ಆಗ್ರಹ.

ಗ್ರಾಮದ ರುದ್ರಭೂಮಿ ಸ್ಥಳದ ಗೊಂದಲ ಪರಿಹರಿಸಿ, ರುದ್ರಭೂಮಿಗೆ ತೆರಳುವ ರಸ್ತೆ ಅಭಿವೃದ್ಧಿ ಪಡಿಸಬೇಕಾಗಿದೆ. ಗ್ರಾಮದಲ್ಲಿ ಅಂಚೆ ಕಚೇರಿ ಇದ್ದರೂಸ್ವಂತ ಕಟ್ಟಡವಿಲ್ಲದೇ ಸಮಸ್ಯೆ ಎದುರಿಸುವಂತಾಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು, ಪಾಲಕರರು ತಮ್ಮಮಕ್ಕಳನ್ನು ಶಾಲೆಗೆ ಕಳುಹಿಸಲು ಭಯ ಪಡುತ್ತಿದ್ದಾರೆ.ಈ ಹಿನ್ನೆಲೆ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳನ್ನುನೆಲಸಮಗೊಳಿಸಿ ನೂತನ ಕೊಠಡಿ ನಿರ್ಮಿಸಬೇಕು.ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಪದೇ ಪದೇ ಹಾಳಾಗುತ್ತಿದ್ದು, ದುರಸ್ತಿಗೊಳಿಸಿಕುಡಿಯುವ ನೀರಿನ ಸಮಸ್ಯೆ ಎದುರಾಗಂತೆ ಕ್ರಮಕೈಗೊಳ್ಳಬೇಕಾಗಿದೆ. ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದೇ ಕೊಳಚೆ ನೀರು ರಸ್ತೆಯ ಮಧ್ಯದಲ್ಲಿಯೇ ನಿಲ್ಲುತ್ತಿದ್ದು, ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಇನ್ನುಳಿದಂತೆ ರಸ್ತೆ, ಬೀದಿದೀಪ, ಸಾರ್ವಜನಿಕ ಶೌಚಾಲಯಗಳು ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಬೇಕಾಗಿದೆ.

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದಿಂದ ಅನೇಕ ವರ್ಷಗಳಿಂದ ಹೊಸನೀರಲಗಿ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕುವ ವಿಶ್ವಾಸವಿದೆ. ಗ್ರಾಮದ ಅನೇಕ ಕುಟುಂಬಗಳು ಮನೆ ನಿರ್ಮಿಸಿಕೊಂಡಿದ್ದರೂ ಪಹಣಿ ಪತ್ರ ವಿತರಿಸದ ಹಿನ್ನೆಲೆ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಅಕ್ರಮ-ಸಕ್ರಮದಡಿ ಪಹಣಿ ಪತ್ರ ವಿತರಣೆ ಕ್ರಮ ಕೈಗೊಳ್ಳಬೇಕು.  -ಗಂಗಾಧರ ಬಾಣದ, ಗ್ರಾಮಸ್ಥರು

ಗ್ರಾಮದ ಜನರು ರುದ್ರಭೂಮಿ ಇಲ್ಲದೇ ಸಮಸ್ಯೆ ಎದುರಿಸುವಂತಾಗಿದೆ. ರುದ್ರಭೂಮಿ ಸ್ಥಳದ ಗೊಂದಲ ಪರಿಹರಿಸಿ, ರುದ್ರಭೂಮಿ ಸ್ಥಳ ಅಭಿವೃದ್ಧಿ ಪಡಿಸಬೇಕು. ಜೊತೆಗೆ ಗ್ರಾಮಕ್ಕೆ ಮೂಲ ಸೌಲಭ್ಯ ಒದಗಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು.  -ಧರೆಪ್ಪಗೌಡ ಪಾಟೀಲ ಗ್ರಾಮಸ್ಥರು

ಹೊಸನೀರಲಗಿ ಗ್ರಾಮದಲ್ಲಿ ಫೆ.20ರಂದು ಗ್ರಾಮ ವಾಸ್ತವ್ಯಕ್ಕೆ ಸಿದ್ಧತೆ ನಡೆಸಲಾಗಿದೆ. ಈಸಂದರ್ಭದಲ್ಲಿ ಗ್ರಾಮಸ್ಥರಿಂದ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಅಲ್ಲಿಯೇ ಪರಿಹರಿಸಲು ಕ್ರಮಕೈಗೊಳ್ಳಲಾಗುವುದು. ಜಿಲ್ಲೆಯ ಉಳಿದ ತಾಲೂಕಿನಲ್ಲಿಆಯಾ ತಹಶೀಲ್ದಾರರು ಗ್ರಾಮ ವಾಸ್ತವ್ಯ ಕೈಗೊಂಡು ಜನರ ಸಮಸ್ಯೆ ಪರಿಹರಿಸಲಿದ್ದಾರೆ. – ಸಂಜಯ ಶೆಟ್ಟೆಣ್ಣನವರ ಜಿಲ್ಲಾಧಿಕಾರಿಗಳು

ಮನವಿ ಸಲ್ಲಿಸಲು ಸಿದ್ಧತೆ :

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದ ಹಿನ್ನೆಲೆ ಜಿಲ್ಲಾಡಳಿತವೇ ಗ್ರಾಮಕ್ಕೆ ಭೇಟಿ ನೀಡುತ್ತಿದ್ದು, ಅನೇಕ ವರ್ಷಗಳಿಂದ ಗ್ರಾಮಸ್ಥರು ಎದುರಿಸುತ್ತಿದ ಸಮಸ್ಯೆಗಳಿಗೆ ಪರಿಹಾರ ಸಿಗುವ ವಿಶ್ವಾಸದಲ್ಲಿಗ್ರಾಮಸ್ಥರಿದ್ದಾರೆ. ಈಗಾಗಲೇ ಗ್ರಾಮಸ್ಥರು ತಮ್ಮ ಗ್ರಾಮದ ಸಮಸ್ಯೆಗಳ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿದ್ದು, ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಒಟ್ಟಿನಲ್ಲಿ ಜಿಲ್ಲಾ ಧಿಕಾರಿಗಳ ಗ್ರಾಮ ವಾಸ್ತವ್ಯ ಹೊಸನೀರಲಗಿ ಗ್ರಾಮಸ್ಥ‌ರಲ್ಲಿ ಹೊಸ ಕನಸುಗಳನ್ನು ಚಿಗುರೊಡಿಸಿದೆ.

 

-ವೀರೇಶ ಮಡ್ಲೂರ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.