ಭರವಸೆ ಮೂಡಿಸಿದ ಮಳೆ ಕೃಷಿ ಚಟುವಟಿಕೆ ಚುರುಕು

Team Udayavani, Apr 30, 2019, 2:50 PM IST

hav-1

ಹಿರೇಕೆರೂರ: ತಾಲೂಕಿನಲ್ಲಿ ಕಳೆದ ವಾರ ಉತ್ತಮ ಮಳೆಯಾಗಿರುವುದರಿಂದ ರೈತರು ಹತ್ತಿ ಗಿಡಗಳನ್ನು ಕೀಳುವ, ರಂಟೆ ಹೊಡೆಯುವ, ಕುಂಟೆ ಹೊಡೆದು ಸಮತಟ್ಟು ಮಾಡುವ ಕಾಯಕ ಚುರುಕುಗೊಳಿಸಿದ್ದಾರೆ.

ಮುಂಗಾರು ಪೂರ್ವ ಮಳೆ ರೈತರಲ್ಲಿ ಭರವಸೆ ಮೂಡಿಸಿದೆ. ಹೀಗಾಗಿ ಖುಷಿಯಿಂದ ಕೃಷಿಯಲ್ಲಿ ತೊಡಗುತ್ತಿದ್ದಾರೆ. ಕಳೆದ ವರ್ಷ ಗೋವಿನ ಜೋಳ ಬಿತ್ತನೆ ಮಾಡಿದ್ದ ಹೊಲಗಳ ರಂಟೆ ಹೊಡೆದು ಬಿತ್ತನೆಗೆ ಸಿದ್ಧಪಡಿಸುತ್ತಿದ್ದರೆ, ಬಿ.ಟಿ. ಹತ್ತಿ ಹಾಕಿದ್ದ ಹೊಲಗಳಲ್ಲಿ ಹತ್ತಿ ಗಿಡಗಳನ್ನು ಕೀಳುವ ಜೊತೆಗೆ ಹೊಲಗಳನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಸಿದ್ದಾರೆ. ಕೂಲಿಕಾರರ ಸಮಸ್ಯೆಯಿಂದ ಹೆಚ್ಚು ರೈತರು ಟ್ರ್ಯಾಕ್ಟರ್‌ನಲ್ಲಿ ಕುಂಟೆ ಹೊಡೆಸಿ ಹತ್ತಿ ಗಿಡಗಳನ್ನು ಕೀಳಿಸಿ ಹೊಲ ಸ್ವಚ್ಛಗೊಳಿಸುತ್ತಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಹತ್ತಿ ಬೆಳೆಯಲ್ಲಿ ಗುಲಾಬಿ ಕಾಯಿ ಕೊರಕದ ಕೀಟದ ಬಾಧೆ ಹೆಚ್ಚುತ್ತಿದೆ. ಇದರ ಹತೋಟಿಗಾಗಿ ಆಯಾ ವಲಯದ ಕೀಟ ನಿರೋಧಕ ತಳಿಗಳನ್ನು ರೈತರು ಬಳಸಬೇಕು. ಬಿ.ಟಿ.ಹತ್ತಿ ಹೊಲದ ಸುತ್ತ ನಾನ್‌ ಬಿ.ಟಿ.ಹತ್ತಿಯನ್ನು ಬೆಳೆಯುವ ಮೂಲಕ ಬಿ.ಟಿ.ಹತ್ತಿ ಬೆಳೆಯಲ್ಲಿ ಕೀಟ ನಿರೋಧಕತೆ ಹೆಚ್ಚಿಸಬಹುದು. ಹಿಂದಿನ ವರ್ಷ ಬೆಳೆದ ಹತ್ತಿ ಕಟ್ಟಿಗೆಯನ್ನು ಹೊಲದಲ್ಲಿ ಹಾಗೆಯೇ ಬಿಡದೆ ಜಮೀನಿನಲ್ಲಿ ಕ್ರೋಢೀಕರಿಸಿ ಹೊಲದಿಂದ ಆಚೆಗೆ ಸುಡುವ ಮೂಲಕ ಈ ಕೀಟದ ಮೊಟ್ಟೆಗಳನ್ನು ನಾಶಪಡಿಸಿ ಕೀಟದ ಹತೋಟಿ ಮಾಡಬಹುದಾಗಿದೆ ಎಂದು ಕೃಷಿ ಅಧಿಕಾರಿ ಮಾರುತಿ ಅಂಗರಗಟ್ಟಿ ರೈತರಿಗೆ ಸಲಹೆ ನೀಡಿದ್ದಾರೆ.

2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಖಂಡ ಹಿರೇಕೆರೂರ (ರಟ್ಟೀಹಳ್ಳಿ ತಾಲೂಕು ಸೇರಿ) ತಾಲೂಕಿನಲ್ಲಿ ಒಟ್ಟು 58 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಆಗಬಹುದು. ಇದರಲ್ಲಿ ಸುಮಾರು 38-40 ಸಾವಿರ ಹೆಕ್ಟೇರ್‌ ನಲ್ಲಿ ಗೋವಿನ ಜೋಳ ಹಾಗೂ ಸುಮಾರು 14-15 ಸಾವಿರ ಹೆಕ್ಟೇರ್‌ ನಲ್ಲಿ ಬಿ.ಟಿ.ಹತ್ತಿ ಬಿತ್ತನೆಯಾಗಬಹುದೆಂದು ಅಂದಾಜಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ಎಂ.ವಿ. ತಿಳಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.