ಹೆಣ್ಣು ಮಗುವಿನ ರಕ್ಷಣೆ ಮಾಡಿ


Team Udayavani, Nov 9, 2020, 7:04 PM IST

hv-tdy-1

ಹಾವೇರಿ: ಹೆಣ್ಣು ಮಗುವಿನ ರಕ್ಷಣೆ ಬಗ್ಗೆ ಕಾನೂನಿನ ಅರಿವು ಎಲ್ಲ ಮಹಿಳೆಯರಿಗೆ ಅಗತ್ಯವಾಗಿದೆ. ಹೆಣ್ಣು ಸಮಾಜದ ಕಣ್ಣು, ವೇದಕಾಲದಿಂದಲೂ ಹೆಣ್ಣನ್ನು ಗೌರವ ಹಾಗೂ ಪೂಜ್ಯನೀಯ ಭಾವನೆಯಿಂದ ನೋಡಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ಶೋಷಣೆ ನಡೆಯುತ್ತಿರುವುದು ದುರ್ದೈವದ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ ಹೇಳಿದರು.

ನಗರದ ಜಿಲ್ಲಾ ಬಾಲಭವನದಲ್ಲಿ ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹಾವೇರಿ ಹೋಬಳಿ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಪೋಕ್ಸೋ ಕಾಯ್ದೆ-2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಕುರಿತು ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ಮಹಿಳೆಗೆ ಕಾನೂನಿನ ಅರಿವು ಮೂಡಿದಲ್ಲಿ ಹೆಣ್ಣು ಮಗುವಿನ ರಕ್ಷಣೆ ಮಾಡಲು ಸಾಧ್ಯ. ಮಹಿಳೆ ಪ್ರಸವ ಪೂರ್ವಲಿಂಗ ಪತ್ತೆ ಅಪರಾಧವಾಗಿದೆ. ಹೆಣ್ಣು ಭ್ರೂಣ ಹತ್ಯೆಗೆ ಸಮಾಜ ಕಡಿವಾಣ ಹಾಕದಿದಲ್ಲಿ ಮುಂದೊಂದು ದಿನ ಹೆಣ್ಣಿಗಾಗಿ ಗಂಡು ಪರದಾಡುವ ಸ್ಥಿತಿ ನಿರ್ಮಾಣವಾಗಬಹುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಿಕಾರ್ಜುನ ಮಠದ ಮಾತನಾಡಿ, ಹೆಣ್ಣು ಮಕ್ಕಳ ರಕ್ಷಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳು 24×7 ನಿಮ್ಮ ಜೊತೆ ಕಾರ್ಯನಿರ್ವಹಿಸಲು ಸಿದ್ಧವಾಗಿವೆ. ಯಾವುದೇ ಪ್ರದೇಶದಲ್ಲಿ ಮಹಿಳೆಯರ ಮೇಲೆ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಿ ಮಹಿಳೆಯರುಮತ್ತು ಮಕ್ಕಳು ಸಬಲರಾಗಬೇಕು ಹಾಗೂ ಧೈರ್ಯಶಾಲಿಗಳಾಗಿ ಸ್ವಯಂ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಜಿ.ಕೆ. ಅವರು ಪೋಕೊÕà ಕಾಯ್ದೆ-2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ- 2006ರ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್‌.  ಎಚ್‌. ಮಜೀದ್‌, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಮುತ್ತುರಾಜ ಮಾದರ, ಹಾಗೂ ಕಾನೂನು ಪರಿವೀಕ್ಷಣಾಧಿಕಾರಿ ಎಂ.ಬಿ. ಬಸವನಾಯಕರ ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದರಕ್ಷಣಾಧಿಕಾರಿ ವಿನಯ ಗುಡಗೂರ, ಅಂಗನವಾಡಿ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.