ಬಿಜೆಪಿ ಅಭ್ಯರ್ಥಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Team Udayavani, Nov 16, 2019, 2:10 PM IST

ಹಾವೇರಿ: ರಾಣಿಬೆನ್ನೂರು ವಿಧಾನಸಭೆ ಕ್ಷೇತ್ರದಲ್ಲಿ ಉಪಚುನಾವಣೆಗೆ ಬಿಜೆಪಿಯಿಂದ ಅರುಣ ಕುಮಾರ ಪೂಜಾರ ಅವರಿಗೆ ಟಿಕೆಟ್ ಘೋಷಿಸಿರುವುದಕ್ಕೆ ಬಿಜೆಪಿಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು ಕಾರ್ಯಕರ್ತರು ಶನಿವಾರ ಬಿಜೆಪಿ ಕಚೇರಿ ಎದುರೇ ಟಯರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಅರುಣ ಕುಮಾರ ಪೂಜಾರ ಅವರಿಗೆ ಟಿಕೆಟ್ ನೀಡಿರುವುದನ್ನು ಖಂಡಿಸಿ ಪ್ರತಿಭಟನೆ ಮೂಲಕ ಆಕ್ರೋಶ ಹೊರಹಾಕಿದವರಲ್ಲಿ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಡಾ. ಬಸವರಾಜ ಕೇಲಗಾರ ಅವರ ಬೆಂಬಲಿಗರೇ ಹೆಚ್ಚಾಗಿದ್ದರು. ‘’ಇನ್ನೂ ಕಾಲಮಿಂಚಿಲ್ಲ. 48 ಗಂಟೆಗಳ ಸಮಯಾವಕಾಶವಿದೆ. ಕೂಡಲೇ ಪಕ್ಷದ ಹೈಕಮಾಂಡ್ ಅಭ್ಯರ್ಥಿಯನ್ನು ಬದಲಾಯಿಸಿ ಡಾ. ಬಸವರಾಜ ಕೇಲಗಾರ ಅವರಿಗೆ ಟಿಕೆಟ್ ನೀಡಬೇಕು’’ ಎಂದು ಒತ್ತಾಯಿಸಿದರು.

ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಲು ಆಗಮಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ ಹಾಗೂ ಪಕ್ಷದ ಇತರ ಮುಖಂಡರ ಸಮ್ಮುಖದಲ್ಲೇ ಭಾರಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಡಾ. ಬಸವರಾಜ ಕೇಲಗಾರ ಅವರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದರು.


ಈ ವಿಭಾಗದಿಂದ ಇನ್ನಷ್ಟು

  • ರಾಣಿಬೆನ್ನೂರ: ಮನುಷ್ಯನ ವಿಕಾಸತೆಗೆ ಮತ್ತು ನಿತ್ಯದ ಕ್ರೀಯಾ ಚಟುವಟಿಕೆಗೆ ಯೋಗ, ಧ್ಯಾನ, ಪ್ರಾಣಾಯಾಮ ಪ್ರತಿಯೊಬ್ಬರು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು...

  • ಅಕ್ಕಿಆಲೂರು: ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಸಮಾರಂಭ ಗಳನ್ನು ಆಯೋಜಿಸುತ್ತ ನಾಡಿನ ಮೂಲೆ -ಮೂಲೆಯಲ್ಲೂ ಪ್ರಚಲಿತದಲ್ಲಿರುವ ಅಕ್ಕಿಆಲೂರಿನಲ್ಲೀಗ...

  • ರಾಣಿಬೆನ್ನೂರ: ಸಂಸ್ಕಾರವು ಭಾರತದಜೀವಾಳವಾಗಿದ್ದು, ಅದರಲ್ಲಿ ಕರಿಬಸವೇಶ್ವರ ಕ್ಷೇತ್ರ ಒಂದಾಗಿದೆ. ಸ್ವಾಮಿಯು ನೊಂದು-ಬೆಂದು ಬಂದವರ ಬಾಳಿಗೆ ಅಭಯ ನೀಡುತ್ತಿದ್ದು,...

  • ಎಚ್‌.ಕೆ. ನಟರಾಜ ಹಾವೇರಿ: ಮಳೆ ಹಾಗೂ ನೆರೆ ಕಾರಣದಿಂದ ಈ ಬಾರಿ ಮಳೆಗಾಲದಲ್ಲಿ ಗ್ರಾಮೀಣ ರಸ್ತೆಗಳಿಗೆ ಹೆಚ್ಚು ಧಕ್ಕೆಯಾಗಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಂದಾಜು...

  • ಹಾವೇರಿ: ಹಿರೇಕೆರೂರು ಹಾಗೂ ರಾಣಿಬೆನ್ನೂರು ಉಪಚುನಾವಣೆ ಹಿನ್ನೆಲೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಒಂದು ತಿಂಗಳಿಂದ ಸುತ್ತಾಡಿದ ಅಭ್ಯರ್ಥಿಗಳು ಮತದಾನದ...

ಹೊಸ ಸೇರ್ಪಡೆ