Udayavni Special

ಪ್ರವಾಹ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಿ


Team Udayavani, Aug 8, 2020, 2:39 PM IST

ಪ್ರವಾಹ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಿ

ಹಾವೇರಿ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ಸರ್ವೇ ಕಾರ್ಯ ಮುಗಿಸಿ, ಪಂಚನಾಮೆ ನಡೆಸಿ ಶನಿವಾರ ಸಂಜೆಯೊಳಗೆ ಸಂತ್ರಸ್ತರಿಗೆ ಪರಿಹಾರ ಪಾವತಿಸಿ ವರದಿ ಸಲ್ಲಿಸುವಂತೆ ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್‌ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅತಿವೃಷ್ಟಿ ಹಾನಿ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಹಶೀಲ್ದಾರ್‌ರೊಂದಿಗೆ ಸಭೆ ನಡೆಸಿ ಮಾತನಾಡಿದರು. ಹಾನಿಯಾದ ಪ್ರತಿ ಮನೆಗಳಿಗೆ ತಹಶೀಲ್ದಾರ್‌ರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಪಂಚನಾಮೆ ನಡೆಸಬೇಕು. ಮನೆಯ ಹತ್ತಿರದ ಫೋಟೋ ತೆಗೆದು ಕಳುಹಿಸಬೇಕು. ಪರಿಹಾರ ಪಾವತಿಸಿದ ಕುರಿತಂತೆ ಜಿಲ್ಲಾಧಿಕಾರಿಗಳ ಮೂಲಕ ಶನಿವಾರ ಸಂಜೆಯೊಳಗಾಗಿ ನನಗೆ ವರದಿ ಕಳುಹಿಸಬೇಕೆಂದು ಸೂಚಿಸಿದರು.

ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್‌ ರಾಜ್‌ ಇಲಾಖಾ ಕಾರ್ಯನಿರ್ವಾಹಕ ಅಭಿಯಂತರರು ಮಳೆಯಿಂದ ಹಾನಿಯಾದ ರಸ್ತೆ, ಸೇತುವೆಗಳ ಸರ್ವೇ ಕಾರ್ಯವನ್ನು ನಾಳೆಯೊಳಗಾಗಿ ಪೂರ್ಣಗೊಳಿಸಿ ಮಾಹಿತಿ ಸಲ್ಲಿಸಬೇಕು. ಮಳೆಯಿಂದ ಯಾವುದಾದರೂ ರಸ್ತೆಗಳು ಸಂಪರ್ಕ ಕಡಿತಗೊಂಡರೆ ತಾತ್ಕಾಲಿಕವಾಗಿ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ತುರ್ತು ದುರಸ್ತಿ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಜಿಪಂ ಸಿಇಒ ರಮೇಶ ದೇಸಾಯಿ ಹಾಗೂ ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಅವರು, ಅತಿವೃಷ್ಟಿಯಿಂದ ಉಂಟಾಗಬಹುದಾದ ಸಂಭವನೀಯ ಪರಿಸ್ಥಿತಿಯನ್ನು ಎದುರಿಸಲು ಗ್ರಾಮೀಣ ಹಾಗೂ ನಗರಪ್ರದೇಶ, ನದಿ, ಹಳ್ಳ ಹಾಗೂ ಕೆರೆಪಾತ್ರಗಳಲ್ಲಿರುವ ಗ್ರಾಮಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಉಸ್ತುವಾರಿ ಕಾರ್ಯದರ್ಶಿಗಳಿಗೆ ವಿವರಿಸಿದರು.

ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಏಳು ತಾಲೂಕುಗಳಿಗೆ ಜಿಲ್ಲಾ ಮಟ್ಟದ ಅಧಿ ಕಾರಿಗಳನ್ನು ಉಸ್ತುವಾರಿ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ. ಅತಿವೃಷ್ಟಿ ನೆರೆ ಸಂಭವಿಸಿ ತೊಂದರೆಗೆ ಸಿಲುಕುವ ಜನರ ರಕ್ಷಣೆಗಾಗಿ ಗೃಹ ರಕ್ಷಕ ಹಾಗೂ ಅಗ್ನಿಶಾಮಕ ದಳ ಹಾಗೂ ನುರಿತ ತಂಡಗಳ ರಚನೆ ಮಾಡಿ ರಕ್ಷಣಾ ಸಾಮಗ್ರಿಗಳೊಂದಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾಳಜಿ ಕೇಂದ್ರಗಳ ತೆರೆಯಲು ಈಗಾಗಲೇ ಕಟ್ಟಡಗಳನ್ನು ಗುರುತಿಸಿಕೊಳ್ಳಲಾಗಿದೆ. ಜನ, ಜಾನುವಾರುಗಳಿಗೆ ಕುಡಿಯುವ ನೀರು, ಆಹಾರ ಪೂರೈಕೆ ಸೇರಿದಂತೆ ಅಗತ್ಯ ನೆರವು ಒದಗಿಸಲು ತಂಡಗಳನ್ನು ರಚಿಸಲಾಗಿದೆ. ಅತಿವೃಷ್ಟಿ ಉಂಟಾದರೆ ನೆರೆಯಿಂದ ಜಿಲ್ಲೆಯ 144 ಗ್ರಾಮಗಳು ತೊಂದರೆಗೊಳಗಾಗಬಹುದೆಂದು ಗುರುತಿಸಲಾಗಿದೆ. ಈ ಗ್ರಾಮಗಳ ಜನರಿಗಾಗಿ ಕಾಳಜಿ ಕೇಂದ್ರ ತೆರೆಯಲು ಶಾಲಾ ಕಟ್ಟಡ ಹಾಗೂ ಸಮುದಾಯ ಭವನ ಸೇರಿದಂತೆ 151 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ, ಉಪವಿಭಾಗಾಧಿಕಾರಿ ಡಾ| ದಿಲೀಷ್‌ ಶಶಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ತಹಶೀಲ್ದಾರ್‌ ಶಂಕರ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರದೀಪ ಹಾಗೂ ನೆರೆ ಹಾವಳಿ ಉಸ್ತುವಾರಿಗಾಗಿ ತಾಲೂಕಾ ನೋಡಲ್‌ ಅಧಿಕಾರಿಗಳಾಗಿ ನೇಮಕವಾಗಿರುವ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ

ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ

APMC ಕಾಯ್ದೆಯಿಂದ ರೈತರಿಗೆ ಅನುಕೂಲವಾದರೂ ದಾರಿ ತಪ್ಪಿಸುವ ಕೆಲಸವಾಗುತ್ತಿದೆ: ಸಹಕಾರ ಸಚಿವ

APMC ಕಾಯ್ದೆಯಿಂದ ರೈತರಿಗೆ ಅನುಕೂಲವಾದರೂ ದಾರಿ ತಪ್ಪಿಸುವ ಕೆಲಸವಾಗುತ್ತಿದೆ: ಸಹಕಾರ ಸಚಿವ

ರಾಯಚೂರು ಐಐಐಟಿಗೆ ಗ್ರೀನ್ ಸಿಗ್ನಲ್ : ಕೇಂದ್ರದ ನಿರ್ಧಾರಕ್ಕೆ ಡಿಸಿಎಂ ಸವದಿ ಹರ್ಷ

ರಾಯಚೂರು ಐಐಐಟಿಗೆ ಗ್ರೀನ್ ಸಿಗ್ನಲ್ : ಕೇಂದ್ರದ ನಿರ್ಧಾರಕ್ಕೆ ಡಿಸಿಎಂ ಸವದಿ ಹರ್ಷ

ಏನಿದು: ಪಾಕಿಸ್ತಾನ ವಿರೋಧ ಪಕ್ಷಗಳ ಮುಖಂಡರ ಜತೆ ಐಎಸ್ ಐ, ಮಿಲಿಟರಿ ಚೀಫ್ ರಹಸ್ಯ ಸಭೆ

ಏನಿದು: ಪಾಕಿಸ್ತಾನ ವಿರೋಧ ಪಕ್ಷಗಳ ಮುಖಂಡರ ಜತೆ ಐಎಸ್ ಐ, ಮಿಲಿಟರಿ ಚೀಫ್ ರಹಸ್ಯ ಸಭೆ!

brobed

ಯಾದಗಿರಿ: ಲಂಚ ಪಡೆಯುತ್ತಿದ್ದ ವೇಳೆ ಲೆಕ್ಕ ಪರಿಶೋಧನ ಅಧಿಕಾರಿ ಎಸಿಬಿ ಬಲೆಗೆ

ತನ್ನ ಅಂಗಡಿ ಮುಂದೆ ಉಗುಳಿದ ಎಂಬ ಕ್ಷುಲ್ಲಕ ಕಾರಣಕ್ಕೆ ಇರಿದು ವ್ಯಕ್ತಿಯ ಕೊಲೆ

ತನ್ನ ಅಂಗಡಿ ಮುಂದೆ ಉಗುಳಿದ ಎಂಬ ಕ್ಷುಲ್ಲಕ ಕಾರಣಕ್ಕೆ ಇರಿದು ವ್ಯಕ್ತಿಯ ಕೊಲೆ

ದಟ್ಟ ಕಾಡಿನಲ್ಲಿ ತಡರಾತ್ರಿ ಕಾರಿನೊಳಗೆ 6 ತಾಸು ಕಳೆದ ಮೂವರನ್ನು ರಕ್ಷಿಸಿದ ಪೊಲೀಸ್‍ ಅಧಿಕಾರಿ

ತಡರಾತ್ರಿ ದಟ್ಟ ಕಾಡಿನಲ್ಲಿ ಕಾರಿನೊಳಗೆ 6 ತಾಸು ಕಳೆದ ಮೂವರನ್ನು ರಕ್ಷಿಸಿದ ಪೊಲೀಸ್‍ ಅಧಿಕಾರಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

178.88 ಕೋಟಿ ಬೆಳೆವಿಮೆ ಮಂಜೂರು: ಉದಾಸಿ

178.88 ಕೋಟಿ ಬೆಳೆವಿಮೆ ಮಂಜೂರು: ಉದಾಸಿ

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ಹಾವೇರಿಯಲ್ಲಿ 48 ಜನರಿಗೆ ಕೋವಿಡ್ ಸೋಂಕು; ಇಬ್ಬರು ಸಾವು

ಹಾವೇರಿಯಲ್ಲಿ 48 ಜನರಿಗೆ ಕೋವಿಡ್ ಸೋಂಕು; ಇಬ್ಬರು ಸಾವು

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

MUST WATCH

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh



ಹೊಸ ಸೇರ್ಪಡೆ

ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ

ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ

ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಯಶಸ್ವಿಯಾಗಿ ನಡೆಯುತ್ತಿದೆ “ವಿದ್ಯಾಗಮ’

ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಯಶಸ್ವಿಯಾಗಿ ನಡೆಯುತ್ತಿದೆ “ವಿದ್ಯಾಗಮ’

ಆಟವಾಡುತ್ತಾ ದಾರಿ ತಪ್ಪಿದ ಪುಟಾಣಿ ಮಗು! ವಾಟ್ಸ್‌ ಆ್ಯಪ್‌ನಿಂದ ಪಾಲಕರ ಮಡಿಲು ಸೇರಿತು

ಆಟವಾಡುತ್ತಾ ದಾರಿ ತಪ್ಪಿದ ಪುಟಾಣಿ ಮಗು! ವಾಟ್ಸ್‌ ಆ್ಯಪ್‌ನಿಂದ ಪಾಲಕರ ಮಡಿಲು ಸೇರಿತು

ಜಿಲ್ಲೆ ಹಾಲು ಒಕ್ಕೂಟ ಶೀಘ್ರ ಅಸ್ತಿತ್ವಕ್ಕೆ

ಜಿಲ್ಲೆ ಹಾಲು ಒಕ್ಕೂಟ ಶೀಘ್ರ ಅಸ್ತಿತ್ವಕ್ಕೆ

ಎಪಿಎಂಸಿ ಮಸೂದೆಯಿಂದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿ

ಎಪಿಎಂಸಿ ಮಸೂದೆಯಿಂದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.