ಏಕಾಗ್ರತೆಯಿಂದ ಓದಿ ಉತ್ತಮ ಅಂಕ ಗಳಿಸಿ

Team Udayavani, Mar 15, 2021, 3:45 PM IST

ಏಕಾಗ್ರತೆಯಿಂದ ಓದಿ ಉತ್ತಮ ಅಂಕ ಗಳಿಸಿ

ಹಾವೇರಿ: ವಿದ್ಯಾರ್ಥಿಗಳು ತರಗತಿಯಲ್ಲಿ ಶಿಕ್ಷಕರು ಮಾಡುವ ಪಾಠವನ್ನು ಏಕಾಗ್ರತೆಯಿಂದ ಕೇಳಿದರೆ ಉತ್ತಮ ಅಂಕ ಪಡೆಯಬಹುದು. ಹಾಗಾಗಿ,ವಿದ್ಯಾರ್ಥಿಗಳು ಪಾಠಗಳನ್ನು ಗಮನವಿಟ್ಟುಆಲಿಸಬೇಕು ಹಾಗೂ ಅಂದಿನ ಪಾಠವನ್ನು ಅಂದೇ ಓದಿಕೊಳ್ಳಬೇಕೆಂದು ಶಾಸಕ ಹಾಗೂ ಅನುಸೂಚಿತಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷ ನೆಹರು ಓಲೇಕಾರ ಹೇಳಿದರು.

ನಗರದ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್‌ ಕಾಲೇಜುಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್‌ ಕಾಲೇಜು ಆಶ್ರಯದಲ್ಲಿಏರ್ಪಡಿಸಿದ್ದ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ “ಹತ್ತರ ಭಯ-ಹತ್ತಿರ ಬೇಡ’ ಒಂದು ದಿನದ ಪ್ರೇರಣಾ ಕಾರ್ಯಾಗಾರ ಉದ್ಘಾಟಿಸಿಮಾತನಾಡಿದರು.

ವಿದ್ಯಾರ್ಥಿಗಳು ಪರೀಕ್ಷೆಗೆ ಕಾಲಾವಕಾಶವಿದೆಎಂಬ ಕಾರಣದಿಂದ ಕಾಲಹರಣ ಮಾಡದೇದಿನನಿತ್ಯ ಓದಿನಲ್ಲಿ ತೊಡಿಸಿಕೊಳ್ಳಬೇಕು. ಪಾಠಕೇಳಿದ ಅನುಭವ ಹಾಗೂ ಓದಿದ ಅನುಭವಇದ್ದರೆ ಶೇ.90 ರಷ್ಟು ಅಂಕ ಪಡೆಯಬಹುದು.ಸರ್ಕಾರ ಶಿಕ್ಷಣಕ್ಕೆ ಎಲ್ಲ ಸೌಲಭ್ಯಗಳನ್ನು ನೀಡಿದೆ. ಆಸೌಲಭ್ಯಗಳನ್ನು ಸಮಪರ್ಕವಾಗಿ ಬಳಸಿಕೊಳ್ಳಬೇಕು.ಇಂದಿನ ಮಕ್ಕಳು ನಾಳಿನ ನಾಗರಿಕರು, ದೇಶದ ಭವಿಷ್ಯ ಬರೆಯುವ ಮಕ್ಕಳಾಗಿದ್ದಾರೆ. ಮುಂದಿನ ದಿನಗಳಲ್ಲಿ ಒಳ್ಳೆಯ ವಿಜ್ಞಾನಿ, ಶಿಕ್ಷಕರು, ವಕೀಲರುಆಗಬಹುದು. ಹಾಗಾಗಿ, 10ನೇ ತರಗತಿ ಪರೀಕ್ಷೆಯಸುಸಂದರ್ಭದಲ್ಲಿ ಉತ್ತಮ ಅಂಕ ಪಡೆಯಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಿಕ್ಷಕರು ಮಕ್ಕಳಿಗೆ ಧೈರ್ಯ ತುಂಬುವ ಕೆಲಸಮಾಡಬೇಕು. ಇಂತಹ ಕಾರ್ಯಕ್ರಮಗಳನ್ನುಮಕ್ಕಳಿಂದ ಮಾಡಿಸಬೇಕು. ಇದರಿಂದಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಾಗುತ್ತದೆ. ಮಕ್ಕಳಿಗೆಕಾರ್ಯಕ್ರಮಗಳ ನಿರ್ವಹಣೆ ಕುರಿತು ಪ್ರಾಥಮಿಕತರಬೇತಿ ನೀಡಿದಲ್ಲಿ ಶೈಕ್ಷಣಿಕ ಅಭಿವೃದ್ಧಿಯಾಗಲುಸಾಧ್ಯ. ಅನೇಕ ಪ್ರತಿಭಾವಂತ ಮಕ್ಕಳಿದ್ದಾರೆ. ಅವರನ್ನು ಪ್ರೋತ್ಸಾಹಿಸಬೇಕು. ಗುಡಿಸಲಿನಲ್ಲಿರುವ ಮಕ್ಕಳುಸಾಧನೆ ಮಾಡಿದ ಅನೇಕ ಉದಾಹರಣೆಗಳಿವೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬಡತನದಲ್ಲಿ ಓದಿಜಗತ್ತಿನಲ್ಲಿ ಧೃವತಾರೆಯಾಗಿ ಬಿಂಬಿಸುತ್ತಿದ್ದಾರೆ. ವಿದ್ಯೆಯಾರ ಸ್ವತ್ತಲ್ಲ. ಶ್ರದ್ಧೆಯಿಂದ ಓದಿದರೆ ಉತ್ತಮ ಅಂಕಪಡೆಯಬಹುದು ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಅಂದಾನಪ್ಪ ವಡಗೇರಿ ಮಾತನಾಡಿ, ಎಸ್ಸೆಸ್ಸೆಲ್ಸಿಮಕ್ಕಳಿಗೆ ಧೈರ್ಯ ತುಂಬಲು ಈ ಕಾರ್ಯಾಗಾರಆಯೋಜಿಸಲಾಗಿದೆ. ಮಕ್ಕಳು ಪಾಠಗ್ರಹಿಸುವುದನ್ನು ರೂಢಿಸಿಕೊಳ್ಳಬೇಕು. ಓದಿದ್ದನ್ನುನೆನಪಿನಲ್ಲಿಟ್ಟುಕೊಳ್ಳಬೇಕು ಹಾಗೂ ಬರೆಯಬೇಕು.ಬೇರೆ ವಿದ್ಯಾರ್ಥಿಗಳ ಜೊತೆ ಹೋಲಿಕೆ ಕೈಬಿಟ್ಟುನಮ್ಮದೇ ಆದ ಶೈಲಿಯಲ್ಲಿ ಓದಬೇಕು. ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು ಹಾಗೂ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್‌.ಪಾಟೀಲ, ಧೈಹಿಕ ಶಿಕ್ಷಣಾ ಧಿಕಾರಿ ನಾಗರಾಜಇಚ್ಚಂಗಿ, ಬೆಳಗಾವಿ ಕೆಎಲ್‌ಇ ಸಂಸ್ಥೆ ಆಡಳಿತ ಮಂಡಳಿ ಸದಸ್ಯ ಎಂ.ಸಿ.ಕೊಳ್ಳಿ, ಪ್ರಾಚಾರ್ಯ ಚನ್ನಪ್ಪಬಿ., ಸಮನ್ವಯಾಧಿ ಕಾರಿ ಸಿ.ಎಸ್‌.ಭಗವಂತಗೌಡ್ರ ಇತರರು ಭಾಗವಹಿಸಿದ್ದರು.

ಗುಡಿಸಲಿನಲ್ಲಿರುವ ಮಕ್ಕಳು ಸಾಧನೆ ಮಾಡಿದಅನೇಕ ಉದಾಹರಣೆಗಳಿವೆ. ಡಾ|ಬಿ.ಆರ್‌.ಅಂಬೇಡ್ಕರ್‌ ಅವರು ಬಡತನದಲ್ಲಿ ಓದಿ ಜಗತ್ತಿನಲ್ಲಿಧೃವತಾರೆಯಾಗಿ ಬಿಂಬಿಸುತ್ತಿದ್ದಾರೆ. ವಿದ್ಯೆ ಯಾರಸ್ವತ್ತಲ್ಲ. ಶ್ರದ್ಧೆಯಿಂದ ಓದಿದರೆ ಉತ್ತಮ ಅಂಕಪಡೆಯಬಹುದು. – ನೆಹರು ಓಲೇಕಾರ, ಶಾಸಕ

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.