ಮಣ್ಣೆತ್ತಿನ ಅಮಾವಾಸ್ಯೆ ಹಬ್ಬದಾಚರಣೆಗೆ ಸಿದ್ದತೆ

ರೈತನ ಆಪ್ತಮಿತ್ರ ಜೋಡೆತ್ತುಗಳಿಗೆ ವಿಶೇಷ ಪೂಜೆ ; ನಿರೀಕ್ಷಿತ ಮಳೆಯಾಗದಿದ್ದರೂ ಸಂಭ್ರಮಕ್ಕಿಲ್ಲ ಕೊರತೆ

Team Udayavani, Jun 28, 2022, 4:19 PM IST

15

ಹಾವೇರಿ: ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ಆಚರಿಸುವ ರೈತರ ಮೊದಲ ಕೃಷಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬದಾಚರಣೆ ಮಂಗಳವಾರ ನಡೆಯಲಿದ್ದು, ಜಿಲ್ಲೆಯಾದ್ಯಂತ ಸಿದ್ಧತೆ ನಡೆದಿದೆ.

ಮಣ್ಣಿನಿಂದ ಮಾಡಿದ ಎತ್ತುಗಳ ಜೋಡಿಗೆ ಪೂಜೆ ಮಾಡುವುದು ಈ ಹಬ್ಬದ ವಿಶೇಷವಾಗಿದೆ. ರೈತರು ತಮ್ಮ ಆಪ್ತಮಿತ್ರ ಎತ್ತಿನ ಜೋಡಿಗೆ ವಿಶೇಷ ಪೂಜೆ ಮಾಡಿ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸುತ್ತಾರೆ. ಉತ್ತರ ಕರ್ನಾಟಕ ರೈತರ ಪಾಲಿಗೆ ಮಣ್ಣೆತ್ತಿನ ಅಮಾವಾಸ್ಯೆ ಎಂದರೆ ಎಲ್ಲಿಲ್ಲದ ಹಿಗ್ಗು. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರು ಸೇರಿದಂತೆ ಎಲ್ಲ ವರ್ಗದ ಜನರು ಪಾಲ್ಗೊಂಡು ಸಂಭ್ರಮದಿಂದ ಹಬ್ಬ ಆಚರಿಸುತ್ತಾರೆ.

ಈ ಬಾರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವದಲ್ಲಿಯೇ ಉತ್ತಮ ಮಳೆಯಾಗಿತ್ತು. ಜೂನ್‌ ತಿಂಗಳ ಆರಂಭದಿಂದಲೇ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೇ ಕೈಕೊಟ್ಟಿದೆ. ಇದರಿಂದಾಗಿ ರೈತರು ಆತಂಕಕ್ಕೆ ಈಡಾಗಿದ್ದಾರೆ. ಮಳೆಯ ಕೊರತೆ ನಡುವೆಯೂ ರೈತ ತನ್ನ ಕೃಷಿ ಕಾಯಕದಲ್ಲಿ ಕೈಜೋಡಿಸುವ ಬಸವಣ್ಣನ ಹಬ್ಬವನ್ನು ಸಂಭ್ರಮದಿಂದಲೇ ಆಚರಿಸಲು ಮುಂದಾಗಿದ್ದಾನೆ.

ಮಣ್ಣಿನ ಎತ್ತುಗಳಿಗೆ ಪೂಜೆ: ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶಗಳು ಮತ್ತು ಪಟ್ಟಣಗಳಲ್ಲಿ ಕುಂಬಾರ ಸಮುದಾಯದ ಮಹಿಳೆಯರು, ಮಕ್ಕಳು ಎಲ್ಲ ಸದಸ್ಯರು ಸೇರಿ ಕೆರೆಯ ಜಿಗುಟಾದ ಕರಿ ಮಣ್ಣಿನಲ್ಲಿ ಎತ್ತುಗಳನ್ನು ತಯಾರಿಸುತ್ತಾರೆ. ಈ ಮಣ್ಣಿನ ಎತ್ತುಗಳ ಕೊಡುಗಳಿಗೆ ಬಣ್ಣಹಚ್ಚಿ, ಕೊರಳಲ್ಲಿ ಗೆಜ್ಜೆ, ಅಲಂಕಾರ ಆಭರಣ ಹಾಕಿದ ರೀತಿಯಲ್ಲಿ ನೂರಾರು ಜೋಡೆತ್ತಿನ ಮೂರ್ತಿಗಳನ್ನು ಸಿದ್ಧಪಡಿಸಿ ಮಾರುಕಟ್ಟೆಗೆ ತಂದಿದ್ದು ಮಾರಾಟ ಮಾಡುತ್ತಾರೆ.

ಮಾರುಕಟ್ಟೆಯಿಂದ ಬಸವಣ್ಣನ ಮೂರ್ತಿಗಳನ್ನು ಮನೆಗೆ ಒಯ್ಯುವ ಪರಿಪಾಠ ಈಗ ಹೆಚ್ಚು ಪ್ರಚಲಿತದಲ್ಲಿದೆಯಾದರೂ ಬಸವಣ್ಣನ ಮೂರ್ತಿ ತಯಾರಿಸಿದ ಕುಂಬಾರರಿಗೆ ಹಣ, ಜೋಳ, ದವಸಧಾನ್ಯ, ಅಕ್ಕಡಿಕಾಳು ನೀಡಿ ಮೂರ್ತಿಗಳನ್ನು ಒಯ್ಯುವ ಸಂಪ್ರದಾಯ ಇಂದಿಗೂ ಕೆಲವು ಕಡೆಗಳಲ್ಲಿ ಇದೆ.

ಮಣ್ಣಿನಿಂದ ತಯಾರಿಸಲಾದ ಜೋಡೆತ್ತುಗಳ ಮೂರ್ತಿಯನ್ನು ಮನೆಯ ದೇವರ ಜಗಲಿಯ ಮೇಲೆ ಪ್ರತಿಷ್ಠಾಪನೆ ಮಾಡಿ, ಪೂಜಿಸಿ ಪ್ರಾರ್ಥಿಸುತ್ತಾರೆ. ಇನ್ನು ಕೆಲ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳೆಲ್ಲರೂ ಸೇರಿ ಚಿಕ್ಕದೊಂದು ಬುಟ್ಟಿಯಲ್ಲಿ ಮಣ್ಣಿನ ಎತ್ತುಗಳನ್ನು ಹಿಡಿದುಕೊಂಡು ಗ್ರಾಮದಲ್ಲಿನ ಮನೆ ಮನೆಗೆ ಹೋಗಿ ಆರತಿ ಮಾಡಿಸಿಕೊಳ್ಳುವ ಸಂಪ್ರದಾಯೂ ಇದೆ. ಅಲ್ಲದೇ ಈ ಸಂದರ್ಭದಲ್ಲಿ ಮಹಿಳೆಯರು ಜೋಡೆತ್ತಿಗೆ ಆರತಿ ಮಾಡಿ ದವಸ, ಧಾನ್ಯಗಳನ್ನು ಉಡುಗೊರೆಯಾಗಿ ನೀಡುವ ಪದ್ಧತಿ ಇಂದಿಗೂ ಕೆಲ ಗ್ರಾಮೀಣ ಪ್ರದೇಶದಲ್ಲಿದೆ.

ಒಟ್ಟಾರೆ ರೈತರ ಹಬ್ಬ ಎನಿಸಿದ ಮಣ್ಣೆತ್ತಿನ ಅಮವಾಸೆ ಹಬ್ಬದಾಚರಣೆಗೆ ರೈತ ಕುಟುಂಬಗಳು ಸಜ್ಜಾಗಿದ್ದು, ರೈತರ ಮನೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಜಿಲ್ಲೆಯಲ್ಲಿ ಮುಂಗಾರುಪೂರ್ವದಲ್ಲಿ ಉತ್ತಮ ಮಳೆಯಾಗಿತ್ತು. ಆದರೆ ಜೂನ್‌ ತಿಂಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆ ಬಂದಿಲ್ಲ. ಕೆಲವು ರೈತರು ಬಿತ್ತಿದ ಬೀಜಗಳನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದರೆ, ಇನ್ನು ಕೆಲವರು ಬಿತ್ತನೆಗಾಗಿ ಮೋಡಗಳತ್ತ ಮುಖ ಮಾಡಿದ್ದಾರೆ. ಈ ನಡುವೆಯೂ ಪ್ರತಿವರ್ಷದಂತೆ ರೈತರ ಮೊದಲ ಹಬ್ಬವಾದ ಮಣ್ಣೆತ್ತಿನ ಅಮವಾಸ್ಯೆಯನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ. –ಮಲ್ಲಿಕಾರ್ಜುನ ಬಳ್ಳಾರಿ, ರೈತ ಮುಖಂಡ

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.